ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮ: ಸಚಿವ ಪ್ರಭು ಚವ್ಹಾಣ್
Team Udayavani, Jun 4, 2020, 3:27 PM IST
ಬೆಂಗಳೂರು : ರಾಜ್ಯದಲ್ಲಿ ‘ಅನಧಿಕೃತವಾಗಿ ಪ್ರಾಣಿಗಳ ಸಾಗಣೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರಾಣಿ ಹಿಂಸೆಗೆ ಸಂಬಂಧಪಟ್ಟ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಲಾಗುವುದು’ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಪೂರ್ಣ ಪ್ರಮಾಣದ ಆಡಳಿತ ಮಂಡಳಿಯ ಸಭೆ ಇಂದು ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು. 2019 ರಂದು ಮಂಡಳಿ ನೋಂದಣಿಯಾಗಿದ್ದು, ಸದ್ಯ ನಮ್ಮರಾಜ್ಯದಲ್ಲಿ 85.22 ಲಕ್ಷದನ, 29.98 ಲಕ್ಷಎಮ್ಮೆ, 110.91 ಲಕ್ಷ ಕುರಿ, 61.96ಲಕ್ಷ ಮೇಕೆ , 3.26 ಲಕ್ಷ ಹಂದಿ ಮತ್ತು 617 ಲಕ್ಷ ಕೋಳಿಗಳಿವೆ. ಈ ಎಲ್ಲಾ ಜಾನುವಾರುಗಳ ಆರೋಗ್ಯರಕ್ಷಣೆಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ನಿಯಮಗಳ ಪ್ರಕಾರ ಈ ಮಂಡಳಿಯ ಪ್ರಮುಖ ಕಾರ್ಯಗಳೆಂದರೆ:
– ಪ್ರಾಣಿಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಂದರ್ಭಾನುಸಾರ ಎದುರಾಗುವ ಸಮಸ್ಯೆಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಕಾಲಕಾಲಕ್ಕೆ ಸಲಹೆ ನೀಡುವುದು.
– ಪಶು ಹಾಗೂ ಪಕ್ಷಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಸ್ಥಾಪಿಸಲಾದ ಪ್ರಾಣಿಕಲ್ಯಾಣ ಸಂಘಗಳು/ ನಿಕಾಯಗಳು/ ಸಂಸ್ಥೆಗಳಿಗೆ ಮಾನ್ಯತೆ ಹಾಗೂ ಸಲಗ್ನತೆ ನೀಡುವುದು.
– ಪ್ರಾಣಿಗಳಿಗಾಗಿ ಶೆಡ್ಡುಗಳು, ನೀರಿನ ತೊಟ್ಟಿಗಳ ನಿರ್ಮಾಣವನ್ನು ಪ್ರೋತ್ಸಾಹಿಸುವುದು.
– ಪ್ರಾಣಿಗಳನ್ನು ಕರುಣೆಯಿಂದ ನೋಡಿಕೊಳ್ಳಲು ಸಾರ್ವಜನಿಕರಲ್ಲಿಅರಿವು ಮೂಡಿಸುವುದು.
– ಪ್ರಾಣಿಗಳಿಗೆ ಸಾಗಾಣಿಕೆ, ಪ್ರಾಣಿಗಳಿಗೆ ಉಂಟಾಗುವ ಅನವಶ್ಯಕ ನೋವು ಅಥವಾ ಯಾತನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿಕ್ರಮ ಕೈಗೊಳ್ಳುವುದು.
ಮಂಡಳಿಯ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದ ಅಡಿಯಲ್ಲಿ ಈ ಎಲ್ಲ ಕಾರ್ಯಗಳು ನಡೆಯಲಿವೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಪ್ರಾಣಿದಯಾ ಸಂಘಗಳ ಅಧ್ಯಕ್ಷರಾಗಿದ್ದು, ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಮಂಡಳಿಗೆ ವಿವಿಧ ಕ್ಷೇತ್ರಗಳ ಅನುಭವಿಗಳನ್ನು ಸದಸ್ಯರನ್ನಾಗಿ ನೇಮಿಸಿದ್ದು, ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು, ಪ್ರಾಣಿಗಳ ಯೋಗಕ್ಷೇಮಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರಾಣಿಗಳಿಗೆ ಯಾರಿಂದಲೂ, ಯಾವುದೇ ರೀತಿಯ ನೋವು, ಯಾತನೆ ಸಂಭವಿಸುವುದನ್ನು ತಡೆಯಬೇಕು ಎಂದು ಸಚಿವರು ಸಲಹೆ ನೀಡಿದರು.
ಸಭೆಯಲ್ಲಿ ಪಶುಸಂಗೋಪನೆ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತರಾದ ನಟೇಶ್, ನಿರ್ದೇಶಕರಾದಎಂ.ಟಿ. ಮಂಜುನಾಥ ಹಾಗೂ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿಯ ಎಲ್ಲ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.