![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 31, 2020, 2:58 PM IST
ಬೆಂಗಳೂರು: ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಮುಂದಾದ ಮಾದರಿಯಂತೆ ರಾಜ್ಯದಲ್ಲಿಯೂ ಸಹ ತೆರೆದ ಕಾಲುವೆಗಳನ್ನು ಮುಚ್ಚಬೇಕು ಎಂದು ಚಿತ್ರನಟ, ಜೊತೆಜೊತೆಯಲಿ ಖ್ಯಾತಿಯ ಅನಿರುದ್ಧ ಜತ್ಕರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಗುಜರಾತ್ ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಸೌರಫಲಕಗಳನ್ನು ಬಳಸಿ, ಎರಡೂ ಬದಿಯಲ್ಲಿ ಗೋಡೆಗಳನ್ನು ನಿರ್ಮಿಸಿ ವರ್ಟಿಕಲ್ ಗಾರ್ಡನಿಂಗ್ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ಸಹ ಅದೇ ಮಾದರಿಯಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚ್ಛಕ್ತಿ ಉತ್ಪಾದನೆಗೆ ಸೌರಫಲಕಗಳನ್ನು ಬಳಸಬಹುದು ಹಾಗೂ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು. ಬರಡುಭೂಮಿಯಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಸೌರ ವಿದ್ಯುತ್ ಅಳವಡಿಸುವುದರಿಂದ ಬೆಳೆ ಬೆಳೆದು, ನೆಲ ಹಸನು ಮಾಡಬಹುದು ಎಂದು ಸಲಹೆ ನೀಡಿದ್ದಾರೆ.
ಹೀಗೆ ತೆರೆದ ಕಾಲುವೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಿಂದ ಒಂದೆಡೆ ವಿದ್ಯುತ್ ಉತ್ಪಾದನೆ ಮತ್ತೊಂದೆಡೆ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಲಿದೆ. ಸರ್ಕಾರ ಗುಜರಾತ್ ಮಾದರಿಯನ್ನು ಒಮ್ಮೆ ಅವಲೋಕಿಸಿ ನಮ್ಮ ರಾಜ್ಯದಲ್ಲಿಯೂ ಸಹ ಈ ಬಗ್ಗೆ ಚಿಂತನೆ ನಡೆಸಬೇಕೆಂದು ಸರ್ಕಾರಕ್ಕೆ ಅನಿರುದ್ಧ ಮನವಿ ಮಾಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.