‘ಅನ್ನಭಾಗ್ಯ’ ಯೋಜನೆಗೆ ಕತ್ತರಿ ಹಾಕಿದರೆ ಉಗ್ರ ಹೋರಾಟ


Team Udayavani, Aug 18, 2019, 6:00 AM IST

siddaramaiah-750

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಹಾಗೂ ಮೈತ್ರಿ ಸರ್ಕಾರ ಮುಂದುವರಿಸಿಕೊಂಡು ಬಂದಿರುವ ‘ಅನ್ನಭಾಗ್ಯ’ ಹಾಗೂ ‘ಇಂದಿರಾ ಕ್ಯಾಂಟೀನ್‌’ ಯೋಜನೆಗೆ ಬಿಜೆಪಿ ಸರ್ಕಾರ ಕತ್ತರಿ ಪ್ರಯೋಗ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸ ಕಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿದ್ದಾಗ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ 4 ಕೋಟಿ ಬಡವರಿಗೆ ಎರಡು ಹೊತ್ತು ಊಟ ನೀಡಬೇಕೆಂದು ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಆರಂಭಿಸಿದ್ದೆವು. ಮೈತ್ರಿ ಸರ್ಕಾರ ಅದನ್ನು ಮುಂದುವರಿಸಿಕೊಂಡು ಬಂದಿದೆ.

ಈಗ ಬಿಜೆಪಿ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆಗೆ ಹಣ ಹೊಂದಿಸಿಕೊಳ್ಳಲು ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ.ಅಕ್ಕಿಯನ್ನು ಕಡಿತ ಮಾಡುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇದು ಬಡವರ ವಿರೋಧಿ ಧೋರಣೆಯಾಗಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುವುದನ್ನು ನಾವು ಸಹಿಸುವುದಿಲ್ಲ. ಬಿಜೆಪಿ ಸರ್ಕಾರ ಈ ಚಿಂತನೆಯನ್ನು ಕೂಡಲೇ ಕೈಬಿಡಬೇಕು. ಇಲ್ಲವಾದರೆ ಕಾಂಗ್ರೆಸ್‌ನಿಂದ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ನೀಡಲು ನಮ್ಮ ವಿರೋಧವಿಲ್ಲ. ಆದರೆ, ಬಡವರಿಗೆ ನೀಡುವ ಅಕ್ಕಿಯನ್ನು ಕಡಿಮೆ ಮಾಡಿ, ಆ ಹಣವನ್ನು ಕಿಸಾನ್‌ ಸಮ್ಮಾನ್‌ ಯೋಜನೆಗೆ ಸರಿ ಹೊಂದಿಸುವುದು ಬಡವರ ವಿರೋಧಿ ಧೋರಣೆಯಾಗಿದೆ ಎಂದರು.

ಇಂದಿರಾ ಕ್ಯಾಂಟೀನ್‌ ನಿರಂತರವಾಗಿರಬೇಕು: ಇಂದಿರಾ ಕ್ಯಾಂಟೀನ್‌ಗೆ ಸರ್ಕಾರದಿಂದ ಹಣ ನೀಡಲು ಆಗುತ್ತಿಲ್ಲ. ಬಿಬಿಎಂಪಿಯಿಂದಲೇ ನೋಡಿಕೊಳ್ಳಿ ಎಂಬ ಸಂದೇಶ ನೀಡಿದ್ದಾರೆಂಬ ಮಾಹಿತಿಯಿದೆ. ರಾಜ್ಯ ಸರ್ಕಾರದಿಂದ ನಿರಂತರವಾಗಿ ನಡೆಯಬೇಕೆಂದು ರೂಪಿಸಿರುವ ಯೋಜನೆ ಇದು. 2.30 ಲಕ್ಷ ಕೋಟಿ ರೂ.ರಾಜ್ಯ ಬಜೆಟ್ ಇದೆ. ಇಂದಿರಾ ಕ್ಯಾಂಟೀನ್‌ ಯೋಜನೆಗೆ 200 ಕೋಟಿ ರೂ.ಕೂಡ ಆಗಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಈ ಯೋಜನೆ ನಿಲ್ಲಬಾರದು ಎಂದರು.

ಅಧಿವೇಶನ ಕರೆಯಲಿ: ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಹಿನ್ನೆಲೆಯಲ್ಲಿ ತುರ್ತು ವಿಧಾನ ಮಂಡಲ ಅಧಿವೇಶನ ಕರೆದು, ವಿಶೇಷ ಅನುದಾನಕ್ಕಾಗಿ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಬೇಕು. ಮೋದಿಯನ್ನು ಕಂಡರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಭಯ ಇರಬೇಕು. ಸರ್ವಪಕ್ಷದ ಸಭೆ ಕರೆದು, ನಿಯೋಗವನ್ನು ಕೇಂದ್ರಕ್ಕೆ ಕರೆದುಕೊಂಡು ಹೋಗಲಿ. ಅಲ್ಲಿ ನಾವೇ ಮಾತನಾಡುತ್ತೇವೆ. ಕೇಂದ್ರ ಸರ್ಕಾರ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.

‘ನಾನು ಮುಖ್ಯಮಂತ್ರಿಯಾಗಿದ್ದಾಗ ನಿಯೋಗ ಕರೆದೊಯ್ಯುತ್ತಿದ್ದೆ. ನಿಯೋಗದಲ್ಲಿ ಬರುತ್ತಿದ್ದ ಯಡಿಯೂರಪ್ಪ ಮಾತನಾಡುತ್ತಲೇ ಇರಲಿಲ್ಲ. ರಾಜ್ಯದಲ್ಲಿ ಪ್ರವಾಹ ಹಾಗೂ ಬರದಿಂದ ಸಾಕಷ್ಟು ತೊಂದರೆ ಉಂಟಾಗಿದ್ದು ಇದರ ಬಗ್ಗೆ ಚರ್ಚೆ ಮಾಡಲು ತುರ್ತು ಅಧಿವೇಶನ ಕರೆಯಬೇಕು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಬಂದು ಪರಿಶೀಲನೆ ನಡೆಸಿದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ನಷ್ಟ ಎಷ್ಟಾಗಿದೆ ಎಂಬ ಸರ್ವೆಯನ್ನು ಮಾಡಿಸಿಲ್ಲ. ನಷ್ಟದ ಅಂದಾಜಿನ ಬಗ್ಗೆ ವರದಿಯನ್ನೇ ಕೇಂದ್ರಕ್ಕೆ ನೀಡಿಲ್ಲ. ರಾಜ್ಯದಿಂದ ಕೇಂದ್ರಕ್ಕೆ ವರದಿ ಸಲ್ಲಿಸುವುದು ಯಾವಾಗ?. ಕೇಂದ್ರದಿಂದ ಪರಿಹಾರ ಬರುವುದು ಯಾವಾಗ?’ ಎಂದು ಪ್ರಶ್ನಿಸಿದರು. ‘ಮೋದಿಯವರು ಬಂದು ಪರಿಶೀಲಿಸಿ, ಇದೊಂದು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.

ಇತಿಹಾಸದಲ್ಲೇ ಮೊದಲು
ಉಸ್ತುವಾರಿ ಸಚಿವರಿಲ್ಲದೆ ಸ್ವಾತಂತ್ರ್ಯೋತ್ಸವ ಮತ್ತು ಧ್ವಜಾರೋಹಣ ನಡೆದಿರುವುದು ಬಹುಶಃ ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲಿರಬೇಕು. ಪ್ರಜಾಪ್ರಭುತ್ವ ಇದೆಯೇ? ಎಲ್ಲಿದೆ ಪ್ರಜಾಪ್ರಭುತ್ವ? ಅಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆಂದು ಸಿದ್ದರಾಮಯ್ಯ ಕಿಡಿಕಾರಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 20 ದಿನ ಕಳೆದರೂ, ರಾಜ್ಯದಲ್ಲಿ ಸರ್ಕಾರ ಇಲ್ಲ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮೊದಲಾದ ಕಡೆಗಳಲ್ಲಿ ವಾಡಿಕೆ ಮಳೆಗಿಂತ ಶೇ.20ರಷ್ಟು ಕಡಿಮೆಯಾಗಿದೆ. ಇವತ್ತಿನವರೆಗೂ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಪ್ರದೇಶದ ಘೋಷಣೆ ಮಾಡದಿದ್ದರೆ ಪರಿಹಾರ ಬರಲ್ಲ. ಬಿತ್ತನೆ ಬೀಜಗಳು ಹಾಳಾಗಿವೆ. ದನ-ಕರುಗಳಿಗೆ ಮೇವು ಸಿಗುತ್ತಿಲ್ಲ. ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ. ರೈತರಿಗೆ, ಬಡವರಿಗೆ ಈ ಸರ್ಕಾರದಿಂದ ಸಹಾಯ ಆಗುತ್ತಿಲ್ಲ. ಹಾಗಾದರೆ ಈ ಸರ್ಕಾರ ಏಕೆ ಬೇಕು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಪ್ರವಾಹ, ಬರ ಗಾಲ ಇರುವುದರಿಂದ ಸೋಮವಾರದಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ಸೋಮವಾರದಿಂದ ಬಾದಾಮಿ ಕ್ಷೇತ್ರದ ಪ್ರದೇಶದಲ್ಲಿ ಪ್ರವಾಸ ಮಾಡುತ್ತೇನೆ.
-ಸಿದ್ದರಾಮಯ್ಯ ಮಾಜಿ ಸಿಎಂ

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.