Anti Tollgate Struggle: ಕಂಚಿನಡ್ಕ: ಟೋಲ್‌ಗೇಟ್‌ ವಿರುದ್ಧ ಬೃಹತ್‌ ಪ್ರತಿಭಟನೆ, ಜಾಥಾ

ಟೋಲ್‌ ಶಾಶ್ವತ ರದ್ದು ಘೋಷಣೆವರೆಗೂ ಹೋರಾಟ ಎಚ್ಚರಿಕೆ

Team Udayavani, Aug 25, 2024, 1:04 AM IST

Padbdiri

ಪಡುಬಿದ್ರಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಂಚಿನಡ್ಕದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ಹಾಗೂ ಪಡುಬಿದ್ರಿವರೆಗೆ ಜಾಥಾ ನಡೆಯಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಟೋಲ್‌ ಗೇಟ್‌ ಪ್ರಸ್ತಾವ ಶಾಶ್ವತವಾಗಿ ರದ್ದು ಆಗಬೇಕಿದೆ. ಈ ಸಂಬಂಧ ಕೂಡಲೇ ಆದೇಶ ಹೊರಡಿಸಲು ಆಗ್ರಹಿಸಿ ಸಚಿವರನ್ನು ಭೇಟಿ ಮಾಡಲಾಗುವುದು ಎಂದರು.
ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಜನರ ಬಲವೇ ಹೋರಾಟಕ್ಕೆ ಶಕ್ತಿ ತುಂಬಿದೆ. ಹೋರಾಟಕ್ಕೆ ರಾಜಕೀಯ ಬಣ್ಣ ತುಂಬದೇ  ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿ ರುವುದು ಸ್ವಾಗತಾರ್ಹ. ನಾವಿರಿಸಿದ ಪುಟ್ಟ ಹೆಜ್ಜೆಯೇ ಇಂದು ಹೋರಾಟ ವಾಗಿ ಮಾರ್ಪಟ್ಟಿದೆ ಎಂದರು.

ಟೋಲ್‌ಮುಕ್ತ: ಕೇಮಾರು ಶ್ರೀ
ಕೇಮಾರು ಸಾಂದೀಪನಿ ಸಾಧನಾ ಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಈ ಹೋರಾಟವು ಜಿಲ್ಲೆಯ ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅವಿಭಜಿತ ದ.ಕ.ಜಿಲ್ಲೆಯು ಟೋಲ್‌ಗೇಟ್‌ ಮುಕ್ತವಾಗಬೇಕು. ಇದು ಐಟಿ, ಬಿಟಿ ಅಧ್ಯಯನದ ತಾಣವಾಗಬೇಕು ಎಂದು ಹೇಳಿದರು.

ಮುದರಂಗಡಿ ಚರ್ಚ್‌ನ ಧರ್ಮಗುರು ರೆ| ಫಾ| ಫೆಡ್ರಿಕ್‌ ಡಿ’ ಸೋಜಾ ಮಾತನಾಡಿ, ಇದು ಜನಪರ ಸಭೆಯಾಗಿದ್ದು, ನಮ್ಮ ರಾಜ್ಯ ರಸ್ತೆಯಲ್ಲಿ ಯಾವುದೇ ಕಾರಣಕ್ಕೂ ಟೋಲ್‌ಗೇಟ್‌ ತೆರೆಯಲು ಅವಕಾಶ ನೀಡಬಾರದು ಎಂದರು. ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್‌ ಹೆಗ್ಡೆ ನಂದಳಿಕೆ ಮಾತನಾಡಿ, ರಸ್ತೆ ಅಭಿವೃದ್ಧಿ ನಿಗಮದ ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವುದು ಸ್ವಾಗತಾರ್ಹ. ಆದರೆ ಇದು ಶಾಶ್ವತವಾಗಿ ಎತ್ತಂಗಡಿ ಯಾಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಉಡುಪಿ ಶಾಸಕ ಯಶಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯ ಡಾ| ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆರ್‌. ಮೆಂಡನ್‌, ಕೆ. ರಘುಪತಿ ಭಟ್‌, ಪ್ರಮುಖರಾದ ಯೋಗೀಶ್‌ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್‌ ಅಹಮದ್‌ ಮೊದಲಾದವರು ಮಾತನಾಡಿದರು. ರೇಶ್ಮಾ ಉದಯ ಶೆಟ್ಟಿ ಹಾಗೂ ಸರ್ವಜ್ಞ ತಂತ್ರಿ ನಿರೂಪಿಸಿದರು.

ಸಾವಿರಾರು ಮಂದಿ ಭಾಗಿ
ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳು, ವಿವಿಧ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ 40 ಗ್ರಾಮಗಳ ಸಹಸ್ರಾರು ಮಂದಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್‌ವರೆಗೆ ಜಾಥಾ ನಡೆಯಿತು. ಜಿಲ್ಲಾ ಮೀಸಲು ಪಡೆಯ ಒಂದು ತುಕಡಿ ಸಹಿತ ಉಡುಪಿ ಜಿಲ್ಲಾ ಪೊಲೀಸ್‌ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಶ್ರಮಿಸಿದ್ದರು. ಪಡುಬಿದ್ರಿ, ನಂದಿಕೂರು, ಪಲಿಮಾರು, ಮುದರಂಗಡಿ, ಸಾಂತೂರು, ಬೆಳ್ಮಣ್‌, ಕಾರ್ಕಳ ಪರಿಸರದ ಎಲ್ಲ ವ್ಯಾಪಾರ ವಹಿವಾಟುಗಳ ಮಳಿಗೆಗಳೂ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಚ್ಚಿ ಜನಾಂದೋಲನಕ್ಕೆ ಬೆಂಬಲ ಸೂಚಿಸಿದ್ದವು.

ಮನವಿ ಸಲ್ಲಿಕೆ
ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌. ಮೂಲಕ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಕಂಚಿನಡ್ಕ ಟೋಲ್‌ ಶಾಶ್ವತ ರದ್ದತಿಗಾಗಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಅವರು, ಜಿಲ್ಲಾಡಳಿತವು ಸದಾ ಜನತೆಯ ಪರ ಇರಲಿದೆ ಎಂದರು. ಪ್ರಭಾರ ಡಿವೈಎಸ್ಪಿ ಗೀತಾ ಪಾಟೀಲ್‌, ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.