APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

Team Udayavani, Sep 23, 2020, 3:41 PM IST

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

ಬೆಂಗಳೂರು: ಎಪಿಎಂಸಿ ಕಾಯ್ದೆ ರೈತರಿಗೆ ಉಪಕಾರಿಯಾಗಿದೆ. ಕರ್ನಾಟಕದಲ್ಲಿ 162 ಎಪಿಎಂಸಿಗಳಿದ್ದು, ಇವುಗಳೂ ಸೇರಿದಂತೆ ರೈತರು ರಾಜ್ಯದ ಯಾವುದೇ ಭಾಗದಲ್ಲಿ ಬೇಕಾದರೂ ಸಹ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಆದರೆ, ವಿರೋಧ ಪಕ್ಷದವರಿಂದ ಜನರ ದಾರಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಈ ಕಾಯ್ದೆಯಿಂದ ಎಪಿಎಂಸಿಗೆ ಯಾವುದೇ ಧಕ್ಕೆ ಇಲ್ಲ. ಮೊದಲು 1 ರೂ. ಸೆಸ್ ನಿಗದಿ ಮಾಡಿದ್ದೆವು. ಕೊನೆಗೂ ದರವೂ ಹೆಚ್ಚಾಯಿತು ಎಂಬ ಮನವಿಗಳು ಬಂದ ಹಿನ್ನೆಲೆಯಲ್ಲಿ ನಾವು ಸಂಪುಟದಲ್ಲಿ ಚರ್ಚೆ ನಡೆಸಿ 35 ಪೈಸೆಗೆ ನಿಗದಿ ಮಾಡಿದೆವು. ಇಷ್ಟಾದರೂ ಎಪಿಎಂಸಿಗೆ ವರ್ಷಕ್ಕೆ 120 ಕೋಟಿ ರೂ. ಆದಾಯ ಬರುತ್ತದೆ. ಇದರಿಂದ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರದು. ಅಲ್ಲದೆ, ಎಪಿಎಂಸಿಯ ಅಧಿಕಾರ ಮೊಟುಕುಗೊಳ್ಳುವುದಿಲ್ಲ, ಇದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವರಾದ ಸೋಮಶೇಖರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಯನ್ನು ಸಚಿವನಾಗಿ ನಾನು ಸ್ವಾಗತಿಸುತ್ತೇನೆ. ಇದು ರೈತರಿಗೆ ಅನುಕೂಲವಾಗುವ ಕಾನೂನೇ ವಿನಹ ಯಾವುದೇ ತೊಂದರೆಯಾಗದು ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ರವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಏನಿದು: ಪಾಕಿಸ್ತಾನ ವಿರೋಧ ಪಕ್ಷಗಳ ಮುಖಂಡರ ಜತೆ ಐಎಸ್ ಐ, ಮಿಲಿಟರಿ ಚೀಫ್ ರಹಸ್ಯ ಸಭೆ!

ಈ ಕಾಯ್ದೆ ಬರುವುದಕ್ಕೆ ಮುಂಚೆ 50ಕ್ಕೂ ಹೆಚ್ಚು ಮಲ್ಟಿ ನ್ಯಾಷನಲ್ ಕಂಪನಿಗಳಿಗೆ ಮಾರಾಟ ಮಾಡುವ ಅವಕಾಶವನ್ನು ಈ ಹಿಂದಿನ ಸರ್ಕಾರವೇ ಅನುಮತಿ ಕೊಟ್ಟಿತ್ತು. ಆದರೆ, ಅದರಿಂದಲೂ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈಗಿನ ನೂತನ ಕಾಯ್ದೆಯಿಂದ ಪೈಪೋಟಿ ಏರ್ಪಟ್ಟು ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಸ್ಥಳೀಯ ಎಪಿಎಂಸಿಗೆ ಅಧಿಕಾರ ಇಲ್ಲದಿದ್ದರೂ ರಾಜ್ಯ ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರ ಇದೆ. ಹೀಗಾಗಿ ಮಲ್ಟಿ ನ್ಯಾಷನಲ್ ಕಂಪನಿಗಳು ಅಕ್ರಮ ಎಸಗುತ್ತಿದ್ದರೆ, ಹಣವನ್ನು ರೈತರಿಗೆ ಸರಿಯಾಗಿ ನೀಡದಿದ್ದರೆ ದೂರು ಕೊಟ್ಟರೆ ಅಂಥವರ ಪರವಾನಗಿಯನ್ನೇ ರದ್ದುಪಡಿಸುತ್ತೇವೆ ಎಂದು ತಿಳಿಸಿದರು.

ರೈತರ ಪ್ರತಿಭಟನೆ ಬಗ್ಗೆ ಸರ್ಕಾರ ಸಹ ಗಮನಹರಿಸುತ್ತಿದೆ. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಕೊಡುವಂತೆ ಮುಖ್ಯಮಂತ್ರಿಗಳು ಸಹ ತಿಳಿಸಿದ್ದಾರೆ. ಹೀಗಾಗಿ ನಾನೂ ಸಹ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ : ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

ಶಿರಾ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ವಿಜಯ ಸಾಧಿಸಲಿದೆ. ಪಕ್ಷದ ಪರ ಪೂರಕ ವಾತಾವರಣ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ. 264 ಬೂತ್ ಗಳಲ್ಲಿ ಕಮಿಟಿ ರಚಿಸಿ, ವಾಟ್ಸಪ್ ಗ್ರೂಪ್ ಮಾಡುತ್ತೇವೆ. ಅಕ್ಟೋಬರ್ 2 ರಂದು 2 ಸಭೆ ಮಾಡಿ, 2 ಹಂತಗಳಲ್ಲಿ ಸಭೆ ನಡೆಸುತ್ತೇವೆ. ಸಂಜೆ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿ ಬೂತ್ ಗೆ ತಲಾ 5 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ ಎಂದು ಬಿಜೆಪಿ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಅವರು ಹೇಳಿದರು.

ಇದನ್ನೂ ಓದಿ :ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ

ಈ ಬಾರಿ ಶಿರಾದಲ್ಲಿ ಬಿಜೆಪಿ ಅಲೆ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಮೇಲೆ ಬಿಜೆಪಿ ಅಭ್ಯರ್ಥಿಯ ಘೋಷಣೆ ಮಾಡಲಾಗುವುದು. ಪಕ್ಷದಲ್ಲಿ 8 ಮಂದಿಗೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಇದೇ ತಿಂಗಳ 25ರಂದು ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅವರ ಧ್ಯೇಯೋದ್ದೇಶವಾದ ಅಂತ್ಯೋದಯ ಎಂಬ ಆಶಯಕ್ಕೆ ಬಿಜೆಪಿ ಬದ್ಧವಾಗಿದೆ. ಕೊನೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ರವಿಕುಮಾರ್ ರವರು ತಿಳಿಸಿದರು.

ಟಾಪ್ ನ್ಯೂಸ್

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.