ಸಂತ್ರಸ್ತ ಯುವತಿಯನ್ನು ನಾನು ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ : ಸಚಿವ ಆರಗ ಜ್ಞಾನೇಂದ್ರ
Team Udayavani, Aug 26, 2021, 8:44 PM IST
ಬೆಂಗಳೂರು: ಮೈಸೂರಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ “ಕಾಂಗ್ರೆಸ್ ನಾಯಕರು ತಮ್ಮನ್ನು ಅತ್ಯಾಚಾರ ಮಾಡುತ್ತಿದ್ದಾರೆ,’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಕೊನೆಗೆ ಎಚ್ಚೆತ್ತುಕೊಂಡು ತಮ್ಮ ಹೇಳಿಕೆ ಹಿಂಪಡೆದುಕೊಂಡು ಕ್ಷಮೆಯಾಚಿಸಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಕುರಿತು ಹೇಳಿಕೆ ನೀಡುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ತಮ್ಮನ್ನು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಹಾಗೂ ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗಿತ್ತು. ಜತೆಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಸಚಿವರು, ಸಂತ್ರಸ್ತ ಯುವತಿಯನ್ನ ನಾನು ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ. ನಾನು ಮನನೊಂದು ಮಾತನಾಡಿದ್ದೆ. ಅದರ ಹೊರತಾಗಿ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ವಿನಂತಿ ಮಾಡಿಕೊಳ್ಳುತ್ತೇನೆ ಇಲ್ಲಿಗೆ ಬಿಟ್ಟುಬಿಡಿ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನನ್ನ ಮಾತನ್ನ ವಾಪಸ್ ತೆಗೆದುಕೊಳ್ಳುತ್ತೇನೆ ಎಂದರು.
ಸಂತ್ರಸ್ತ ಯುವತಿ ದುರ್ಘಟನೆಯ ಆಘಾತದಿಂದ ಹೊರಬಂದಿಲ್ಲ. ಅವರ ಹೇಳಿಕೆ ಬಹಳ ಮುಖ್ಯವಾಗುತ್ತೆ. ನಮ್ಮ ಪೊಲೀಸರು ತಪ್ಪಿತಸ್ಥರನ್ನ ಪತ್ತೆ ಹಚ್ಚುತ್ತಾರೆ. ಅಲ್ಲಿಯವರೆಗೂ ವಿಶ್ರಮಿಸುವ ಮಾತೇ ಇಲ್ಲ. ವಿರೋಧ ಪಕ್ಷವಾಗಿ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅದರ ಬಗ್ಗೆ ನಾನೇನು ಹೆಚ್ಚು ಮಾತಾಡುವುದಿಲ್ಲ. 2014ರಲ್ಲಿ ನಡೆದ ಪ್ರಕರಣ ನೆನಪು ಮಾಡೋಕೆ ಇಷ್ಟಪಡುತ್ತೇನೆ. ಮತ್ತೇನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ :ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ
ಇಂತಹ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ಘಟನೆಯೂ ಅಲ್ಲ. ಕಾಂಗ್ರೆಸ್ ಅವಧಿಯಲ್ಲಿ ಏನು ಸುಖವಾಗಿತ್ತಾ? ಇಂತಹ ಘಟನೆಗಳು ಆಗಿರಲಿಲ್ವಾ?ಅವರ ಅವಧಿಯಲ್ಲೂ ನಡೆದಿತ್ತು. ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದರು.
ತನಿಖೆಗೆ ವಿಶೇಷ ತಂಡಗಳು
ಪ್ರಕರಣ ಬೇಧಿಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಪ್ರಕರಣ ಸಂಬಂಧ ಪೋಲಿಸರು ಕಾರ್ಯೋನ್ಮಖರಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟದವರು ಎಂಬ ಮಾಹಿತಿ ಇದೆ. ಅವರ ತಂದೆ, ತಾಯಿ ಸಹ ಆಗಮಿಸಿದ್ದಾರೆ. ಜತೆಗೆ ಮಹಿಳೆಯರು, ಯುವತಿಯರ ಭದ್ರತೆ ಬಗ್ಗೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಪ್ರಕರಣದ ಆರೋಪಿಗಳ ಪತ್ತೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದ ಅವರು, ಶುಕ್ರವಾರ ಇಡೀ ದಿನ ಮೈಸೂರಿನಲ್ಲೇ ಇರುತ್ತೇನೆ. ಸರಣಿ ಸಭೆಗಳನ್ನ ನಡೆಸುತ್ತೇನೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.