ಬಿಎಸ್‌ವೈ ಸಹಿತ ನಾಯಕರ ಬಂಧನ

ಬಿಜೆಪಿಯ ಅಹೋರಾತ್ರಿ ಧರಣಿ ಬಳಿಕ ಸಿಎಂ ಕಚೇರಿ ಮುತ್ತಿಗೆ ಯತ್ನ

Team Udayavani, Jun 17, 2019, 6:00 AM IST

1-1-16061-160619KPN89

ಬೆಂಗಳೂರು: ಜಿಂದಾಲ್ ಕಂಪೆನಿಗೆ ಭೂಮಿ ಪರಭಾರೆ, ರೈತರ ಸಾಲ ಮನ್ನಾ ಮತ್ತು ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಮೈತ್ರಿ ಸರಕಾರ ವಿಫ‌ಲವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಅರ್ಧದಲ್ಲೇ ತಡೆದು ಬಂಧಿಸಿದರು.

ಶುಕ್ರವಾರ ಬೆಳಗ್ಗೆ ಶುರುವಾದ 48 ಗಂಟೆ ಗಳ ಕಾಲದ ಅಹೋರಾತ್ರಿ ಧರಣಿ ಬಳಿಕ ರವಿವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಮುಂದಾದರು.

ಪೊಲೀಸರು ತಡೆದ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ‘ಕೃಷ್ಣಾ’ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು.

ಬಿಜೆಪಿ ನಾಯಕರು, ಕಾರ್ಯಕರ್ತರು ಬ್ಯಾರಿಕೇಡ್‌ ತಳ್ಳಲು ಮುಂದಾಗುತ್ತಿದ್ದಂತೆ ಪೊಲೀಸರು ಯಡಿಯೂರಪ್ಪ, ಆರ್‌.ಅಶೋಕ್‌, ಅರವಿಂದ ಲಿಂಬಾವಳಿ, ರೇಣುಕಾಚಾರ್ಯ ಸಹಿತ ಎಲ್ಲ ನಾಯಕರನ್ನು ಬಂಧಿಸಿ, ಪೊಲೀಸ್‌ ವಾಹನದಲ್ಲಿ ಕರೆದೊಯ್ದರು.

ಜಿಂದಾಲ್ ಕಂಪೆನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಹಿಂದಿನ ಒಪ್ಪಂದದಂತೆ ಗುತ್ತಿಗೆ ಮುಂದುವರಿಸಿದರೆ ಆಕ್ಷೇಪವಿಲ್ಲ. ಆದರೆ ಕಂಪೆನಿಗೆ ಭೂಮಿ ಮಾರಾಟ ಮಾಡುವುದಕ್ಕೆ ನಮ್ಮ ವಿರೋಧವಿದೆ.
– ಬಿ.ಎಸ್‌. ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಹ್ವಾನಿಸಿ ಸಚಿವ ವೆಂಕಟರಾವ್‌ ನಾಡಗೌಡ ಮೂಲಕ ವಿಪಕ್ಷ ನಾಯಕರಿಗೆ ಪತ್ರ ಕಳುಹಿಸಿದ್ದೆ. ಅವರು ಚರ್ಚೆಗೆ ಸಮಯ ಕೋರಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ. ಅವರಿಗೆ ಬೇಕಿರುವುದು ಅಗ್ಗದ ಪ್ರಚಾರ, ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ.
ಎಚ್.ಡಿ. ಕುಮಾರಸ್ವಾಮಿ, ಸಿಎಂ

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.