Ram Temple: ಅಯೋಧ್ಯೆ ರಾಮಮಂದಿರ ನಿರ್ಮಾಣದ ವಿರುದ್ಧ ವಿಶ್ವಸಂಸ್ಥೆ ಕದ ತಟ್ಟಿದ ಪಾಕ್!
ವಿಶ್ವಸಂಸ್ಥೆ ತುರ್ತಾಗಿ ಮಧ್ಯಪ್ರವೇಶಿಸುವ ಅಗತ್ಯವಿದೆ
Team Udayavani, Jan 27, 2024, 3:22 PM IST
ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠೆ ವೈಭವಯುತವಾಗಿ ನೆರವೇರಿದ್ದು, ಏತನ್ಮಧ್ಯೆ ಭಾರತೀಯರ ಸಂತೋಷವನ್ನು ಅರಗಿಸಿಕೊಳ್ಳಲಾರದ ಪಾಕಿಸ್ತಾನ ಇದೀಗ ರಾಮಮಂದಿರ ನಿರ್ಮಾಣದ ಬಗ್ಗೆ ವಿಶ್ವಸಂಸ್ಥೆಗೆ ದೂರು ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Panaji: ಗ್ರಾಹಕರಿಗೆ ಮಾದಕ ವಸ್ತು ಸರಬರಾಜು… ಗೋವಾದಲ್ಲಿ ಮುಂಬೈ ಮೂಲದ ವ್ಯಕ್ತಿಯ ಬಂಧನ
ರಾಮಮಂದಿರದ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪಾಕ್ ಅಳಲು!
ವಿಶ್ವಸಂಸ್ಥೆಯಲ್ಲಿ ಪಾಕ್ ರಾಯಭಾರಿ ಮುನೀರ್ ಅಕ್ರಮ್ ಸೇರಿದಂತೆ ಪಾಕ್ ಮುಖಂಡರು ಭಾರತದ ವಿರುದ್ಧ ಸದಾ ಆಕ್ಷೇಪ ಎತ್ತುತ್ತಲೇ ಇದ್ದಾರೆ. ಪಾಕಿಸ್ತಾನ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿ ಹೋಗಿದ್ದರು ಕೂಡಾ ಭಾರತದ ವಿಚಾರದಲ್ಲಿ ಪದೇ, ಪದೇ ಮೂಗು ತೂರಿಸುವುದನ್ನು ಮುಂದುವರಿಸಿದೆ. ಈಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಗೊಂಡಿರುವ ಬಗ್ಗೆ ಅಸಮಾಧಾನಗೊಂಡಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರ ಬರೆದಿರುವುದಾಗಿ ವರದಿ ವಿವರಿಸಿದೆ.
ಪಾಕ್ ಬರೆದ ಪತ್ರದಲ್ಲೇನಿದೆ?
ಪಾಕ್ ರಾಯಭಾರಿ ವಿಶ್ವಸಂಸ್ಥೆಗೆ ರವಾನಿಸಿದ ಪತ್ರದಲ್ಲಿ, ಭಾರತದ ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬ್ರಿ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಪಾಕ್ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದೆ.
ಈ ಬೆಳವಣಿಗೆಯು ಭಾರತೀಯ ಮುಸ್ಲಿಮರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಯೋಗಕ್ಷೇಮಕ್ಕೆ ಹಾಗೂ ಕೋಮು ಸಾಮರಸ್ಯಕ್ಕೆ ಗಂಭೀರ ಅಪಾಯ ತಂದೊಡ್ಡಲಿದೆ ಎಂದು ಪಾಕ್ ಆರೋಪಿಸಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿರುವ ಇಸ್ಲಾಮಿಕ್ ಪಾರಂಪರಿಕ ತಾಣಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ತುರ್ತಾಗಿ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದೆ.
ಪಾಕ್ ಆರೋಪ ಏನು?
ಭಾರತದಲ್ಲಿ ಬಾಬ್ರಿ ಮಸೀದಿಯಂತೆ ಇತರ ಮಸೀದಿಗಳು ಕೂಡಾ ಇದೇ ರೀತಿಯ ಅಪಾಯವನ್ನು ಎದುರಿಸುತ್ತಿರುವುದಾಗಿ ಆರೋಪಿಸಿರುವ ಪಾಕಿಸ್ತಾನ, ಭಾರತ ಸರ್ಕಾರ ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿ ಸೇರಿದಂತೆ ಇತರ ಮಸೀದಿಗಳು ಕೂಡಾ ಅಪಾಯವನ್ನು ಎದುರಿಸುತ್ತಿದೆ ಎಂದು ಪತ್ರದಲ್ಲಿ ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.