ಕೊಡಂಬೆಟ್ಟು ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ!
Team Udayavani, Jul 9, 2020, 3:06 PM IST
ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ.
ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ಅವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ತಲೆಗೆ, ಕೈಗೆ ಏಟಾಗಿದೆ. ತತ್ ಕ್ಷಣ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಬಗ್ಗೆ ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.