ಅಸ್ಸಾಂ-ಮಿಜೋರಾಂ ಗಡಿ ಘರ್ಷಣೆ : ಇದು ದ್ವೇಷ ಬಿತ್ತುವ ಬೆಳವಣಿಗೆ : ರಾಹುಲ್ ಗಾಂಧಿ ಕಿಡಿ
ಹಿಂಸಾಚಾರದ ಕಾರಣದಿಂದಾಗಿ ಜನರು ಭೀತಿಯಲ್ಲೇ ಬದುಕುವಂತಾಗಿದೆ : ಕೇಂದ್ರದ ವಿರುದ್ಧ ಗಾಂಧಿ ಗುಡುಗು
Team Udayavani, Jul 27, 2021, 11:40 AM IST
ನವ ದೆಹಲಿ : ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ, ನಿನ್ನೆ(ಸೋಮವಾರ, ಜುಲೈ 26) ಉಭಯ ರಾಜ್ಯಗಳ ಜನರ ನಡುವೆ ಘರ್ಷಣೆಗಳು ಸಂಭವಿಸಿರುವ ಬೆನ್ನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದು ದ್ವೇಷ ಬಿತ್ತುವ ಘರ್ಷಣೆ ಎಂದು ಕೇಂದ್ರ ಸರ್ಕಾರವನ್ನು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಸಿದ ಅವರು, ಘರ್ಷಣೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಸಂತಾಪವನ್ನು ಸೂಚಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಇದೊಂದು ಘರ್ಷಣೆಯ ದ್ವೇಷ, ಇದು ಅಲ್ಲಿ ಬದುಕುತ್ತಿರುವ ಜನರಿಗೆ ಭಯಾನಕ ಪರಿಸ್ಥಿತಿಯನ್ನು ಸೃಷ್ಟಿಮಾಡಿದೆ ಎಂದಿದ್ದಾರೆ.
ಇದನ್ನೂ ಓದಿ : ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಬೊಮ್ಮಲಾಪುರದ ಯುವಕ ಆತ್ಮಹತ್ಯೆ
ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡುವುದರ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಗಾಂಧಿ, ಕೇಂದ್ರ ಸರ್ಕಾರ ಜನರಿಗೆ ಬದುಕುವುದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಿಕೊಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿ. ಭಯಾನಕ ಪರಿಸ್ಥಿತಿ ಎದುರಾಗಿದೆ. ಘರ್ಷಣೆ ಹಾಗೂ ಹಿಂಸಾಚಾರದ ಕಾರಣದಿಂದಾಗಿ ಜನರು ಭೀತಿಯಲ್ಲೇ ಬದುಕುವಂತಾಗಿದೆ ಎಂದು ಕಿಡಿ ಕಾರಿದ್ದಾರೆ.
ಇನ್ನು, ಮೂರರಿಂದ ನಾಲ್ಕು ನಾಗರಿಕರು ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. “3-4 ನಾಗರಿಕರು ಸೇರಿದಂತೆ 40 ಜನರು ಗಾಯಗೊಂಡಿದ್ದಾರೆ. ವೈದ್ಯರ ಪ್ರಕಾರ, 6 ಪೊಲೀಸರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಗಡಿ ಪ್ರದೇಶಕ್ಕೆ ಭೇಟಿ ನೀಡುವಂತೆ ರಾಜ್ಯ ಸಚಿವ ಪಿಜುಶ್ ಹಜರಿಕಾಗೆ ನಿರ್ದೇಶನ ನೀಡಿದ್ದಾರೆ ಎಂದು ಅಸ್ಸಾಂ ಬಿಜೆಪಿ ಶಾಸಕ ಕೌಶಿಕ್ ರೈ ಹೇಳಿದ್ದಾರೆ.
ಉಭಯ ರಾಜ್ಯಗಳ ನಡುವೆ ದೀರ್ಘಕಾಲದಿಂದ ಇರುವ ಭೂ ವಿವಾದವೇ ಈ ಗಲಭೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂಸಾಚಾರದ ಕುರಿತು ಶಾ ಅವರು ಅಸ್ಸಾಂ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದರು ಮತ್ತು ಸಂಘರ್ಷವನ್ನು ಶೀಘ್ರ ಪರಿಹರಿಸುವಂತೆ ಒಂದು ಪರಿಹಾರ ಮಾರ್ಗವನ್ನು ಕಂಡುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಲಾಗಿದೆ. ಮೂಲಗಳ ಪ್ರಕಾರ, ಪರಿಸ್ಥಿತಿಯನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮಿಜೋರಾಂ ಮುಖ್ಯಮಂತ್ರಿ ಒರಮ್ ಥಂಗಾ ಭರವಸೆ ನೀಡಿದ್ದಾರೆ.
ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೊಲಾಸಿಬ್ ಮತ್ತು ಮಾಮಿತ್ಗಳು, ಅಸ್ಸಾಂನ ಕ್ಯಾಚರ್, ಹಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ಅಂತರ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಹಿಂದಿನ ದಿನ, ಅಸ್ಸಾಂ ಪೊಲೀಸರು, ಕಚಾರ್ ಜಿಲ್ಲಾ ಆಡಳಿತದೊಂದಿಗೆ, ಮಿಜೋರಾಂ ಜನರು ಆಕ್ರಮಿಸಿಕೊಂಡಿದ್ದಾರೆಂದು ಹೇಳಲಾದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ್ದರು. ವರದಿಯ ಪ್ರಕಾರ, ಅಸ್ಸಾಂ ಹಾಗು ಮಿಜೋರಾಂಗೆ ಎರಡೂ ರಾಜ್ಯಕ್ಕೆ ಸೇರಿದೆ ಎನ್ನಲಾದ ಸುಮಾರು 6.5 ಕಿ.ಮೀ ಭೂಮಿ ಎರಡು ರಾಜ್ಯಗಳ ನಡುವೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಯಾವುದೇ ಭೂಮಿಯನ್ನು ಅತಿಕ್ರಮಣ ಮಾಡುವುನ್ನು ನಾವು ಒಪ್ಪುವುದಿಲ್ಲ ಎಂದು ಮಿಜೋರಾಂ ಸರ್ಕಾರ ಹೇಳಿದೆ.
ಇದನ್ನೂ ಓದಿ : ಬಿಎಸ್ ವೈ ರಾಜೀನಾಮೆ ಹಿಂದಿನ ಮರ್ಮ ಬಿಜೆಪಿ ಹೈಕಮಾಂಡ್ ಬಹಿರಂಗಪಡಿಸಲಿ : ಪರಮೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.