Assembly: ಬೈಂದೂರು ವ್ಯಾಪ್ತಿಯಲ್ಲಿ ಹೆಚ್ಚುವರಿ ಬಸ್: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಆದ್ಯತೆ ಮೇರೆಗೆ ಸರಕಾರಿ ಬಸ್ ಓಡಿಸಬೇಕು: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ
Team Udayavani, Jul 24, 2024, 7:21 AM IST
ಬೆಂಗಳೂರು: ರಾಜ್ಯ ಸರಕಾರದ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಬೇಡಿಕೆ ಬರುತ್ತಿದ್ದು ಮೊದಲ ಆದ್ಯತೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 25 ಸಾಮಾನ್ಯ ಸಾರಿಗೆ ಬಸ್‌ಗಳು 157 ಸುತ್ತುವಳಿಗಳಲ್ಲಿ ಕಾರ್ಯಾಚರಿಸುತ್ತಿವೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಕುಂದಾಪುರದಿಂದ ಬೋಳಂಬಳ್ಳಿ, ಸಿದ್ದಾಪುರ, ಬಡಾಕೆರೆ, ಭಟ್ಕಳ, ಅಜ್ರಿ, ತೊಂಬಟ್ಟ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಕಲ್ಪಿಸಲಾಗಿದೆ ಎಂದರು.
ಯಾವ ಮಾರ್ಗಗಳಲ್ಲಿ ಬಸ್ ಸೇವೆ ಇಲ್ಲವೋ ಅಲ್ಲಿಗೆ ಆದ್ಯತೆ ಮೇರೆಗೆ ಸರಕಾರಿ ಬಸ್ ಓಡಿಸಬೇಕು. ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ಮಾಡುವಂತೆ ಆಗಬಾರದು ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.
ಕಾಪು ಕ್ಷೇತ್ರದ 8 ಕೈಗಾರಿಕೆ ಘಟಕಗಳಲ್ಲಿ 783 ಸ್ಥಳೀಯರು, ಕನ್ನಡಿಗರಿಗೆ ಉದ್ಯೋಗ
ಬೆಂಗಳೂರು: ಕಾಪು ವಿಧಾನ ಸಭೆ ಕ್ಷೇತ್ರದಲ್ಲಿ 2 ಬೃಹತ್ ಕೈಗಾರಿಕೆ, 2 ಮಧ್ಯಮ, 4 ಸಣ್ಣ ಕೈಗಾರಿಕೆಗಳು ಇವೆ. ಕಳೆದ 3 ವರ್ಷಗಳಲ್ಲಿ ಈ ಘಟಕಗಳಲ್ಲಿ ಒದಗಿಸಿರುವ 985 ಉದ್ಯೋಗದ ಪೈಕಿ ಸ್ಥಳೀಯರು ಮತ್ತು ಕನ್ನಡಿಗರಿಗೆ ಶೇ. 79.49ರಂತೆ 783 ಮಂದಿಗೆ ಉದ್ಯೋಗ ನೀಡಲಾಗಿದೆ ಎಂದು ಬೃಹತ್, ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಡಾ. ಸರೋಜಿನಿ ಮಹಿಷಿ ವರದಿ ಅನ್ವಯ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಮತ್ತು ಕನ್ನಡಿಗರಿಗೆ ನೀಡಿರುವ ಉದ್ಯೋಗದ ಕುರಿತಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.