Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
ಮೂರು ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕಾರಣದ ದಿಕ್ಕು ಬದಲು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ
Team Udayavani, Oct 27, 2024, 7:20 AM IST
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಜಂಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಗೆಲುವು ಸಾಧಿಸುತ್ತಾರೆಂದು ಭವಿಷ್ಯ ನುಡಿದರು. ಚುನಾವಣೆಯಲ್ಲಿ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ಶ್ರಮ ಹಾಕಿ ನಿಖಿಲ್ ಕುಮಾರಸ್ವಾಮಿ ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುವುದಕ್ಕೆ ಕಾರ್ಯತಂತ್ರ ರೂಪಿಸಿದ್ದೇವೆ ಎಂದರು.
ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಬದಲಾದ ರಾಜಕಾರಣದ ಸನ್ನಿವೇಶದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಸಹಸ್ರಾರು ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಂದು ಆಶೀರ್ವಾದ ಮಾಡಿದ್ದಾರೆ. 3 ಕಡೆ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂದೇಶವನ್ನು ವಿಜಯೇಂದ್ರ ಕೊಟ್ಟಿದ್ದಾರೆ ಎಂದು ವಿವರಿಸಿದರು.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ @drashwathcn , ರಾಜ್ಯಸಭಾ ಸದಸ್ಯರಾದ ಶ್ರೀ @LaharSingh_MP , ಮಾಜಿ ಪರಿಷತ್ ಸದಸ್ಯರಾದ ಶ್ರೀ… pic.twitter.com/NGBFmsiLPV
— BJP Karnataka (@BJP4Karnataka) October 26, 2024
“ಈ ಚುನಾವಣೆಯನ್ನು ಸವಾಲಾಗಿ ಪರಿಗಣಿಸಿದ್ದೇವೆ. 3 ಕ್ಷೇತ್ರದ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸಲಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ರಣೋತ್ಸಾಹದಲ್ಲಿ ಇದ್ದಾರೆ. ದೊಡ್ಡ ಅಂತರದಲ್ಲಿ ನಿಖಿಲ್ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದ್ದೇವೆ.” – ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
“ಈಗಾಗಲೇ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯ ಮಟ್ಟದ ನಾಯಕರು, ತಂದೆ ಸಮಾನ ಯಡಿಯೂರಪ್ಪ, ಕುಮಾರಣ್ಣ, ದೇವೇಗೌಡರು ಕುಳಿತು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿ, ಕಾರ್ಯಕರ್ತರ ಆಕಾಂಕ್ಷೆಯಿಂದ ನನ್ನ ಆಯ್ಕೆ ಮಾಡಿದ್ದಾರೆ. ಸಹೋದರ ಸಮಾನ ವಿಜಯೇಂದ್ರ ಸ್ಥಳೀಯ ಬಿಜೆಪಿ ಮುಖಂಡರಿಗೆ ನನ್ನ ಗೆಲ್ಲಿಸುವಂತೆ ಸಂದೇಶ ರವಾನೆ ಮಾಡಿದ್ದಾರೆ.” – ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.