Assembly By Election: ಚನ್ನಪಟ್ಟಣ: ಜೆಡಿಎಸ್‌ನಿಂದ ಜಯಮುತ್ತು?

ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ

Team Udayavani, Aug 23, 2024, 11:56 PM IST

BJP-JDS

ಬೆಂಗಳೂರು: ಯಾವುದೇ ಗಳಿಗೆಯಲ್ಲಿ ಘೋಷಣೆಯಾಗಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ಅತ್ಯಂತ ಮಹತ್ವ ಪಡೆದುಕೊಂಡಿದೆ. ಚುನಾವಣೆ ಘೋಷಣೆಗೂ ಮುನ್ನವೇ ರಾಜ್ಯದ ಗಮನ ಸೆಳೆಯುತ್ತಿದೆ.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಈ ಕ್ಷೇತ್ರದ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಆಗಿರುವುದರಿಂದಲೇ ಈಗ ಎಲ್ಲರ ಗಮನ ಸೆಳೆದಿದೆ. ಸ್ವತಃ ಯೋಗೀಶ್ವರ್‌ ಅವರೇ “ನಾನು ಈ ಸಲ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಹಲವು ಸಲ ಬಹಿರಂಗವಾಗಿಯೇ ಹೇಳಿದ್ದಾರೆ. ಈ ಮಧ್ಯೆ ನಾನೇ ಕ್ಷೇತ್ರದ ಅಭ್ಯರ್ಥಿಯೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಿಸಿಕೊಂಡು ಕ್ಷೇತ್ರ ಪ್ರದಕ್ಷಿಣೆ ಮಾಡುತ್ತಿದ್ದಾರೆ.

ಈ ಬೆಳವಣಿಗೆ ಬಿಜೆಪಿ-ಜೆಡಿಎಸ್‌ ಮಿತ್ರ ಪಕ್ಷದೊಳಗೆ ಒಂದು ರೀತಿ ಮನಸ್ತಾಪಕ್ಕೆ ಕಾರಣವಾಗಿದೆ. ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆಂದು ಆರಂಭದಲ್ಲಿ ದಟ್ಟವಾದ ವದಂತಿಗಳಿದ್ದವು. ಆದರೆ ದಿನಗಳೆದಂತೆ ನಿಖಿಲ್‌ ಹಿಂದೆ ಸರಿದಂತೆ ಕಾಣುತ್ತಿದೆ. ಮಿತ್ರಪಕ್ಷಗಳಲ್ಲಿ ಯಾರಿಗೆ ಸೀಟು ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ.

ಜೆಡಿಎಸ್‌ನಿಂದ ಪಕ್ಷದ ಹಿರಿಯ ಕಾರ್ಯಕರ್ತ ಜಯಮುತ್ತು ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಸ್ಥಳೀಯವಾಗಿ ಹರಿದಾಡುತ್ತಿವೆ. ಈ ಮಧ್ಯೆ ನಾನು ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂಬ ಬಯಕೆ ಇದೆ, ಒಂದು ವೇಳೆ ಆಗದಿದ್ದರೆ ಪಕ್ಷೇತರನಾಗಿ ಕಣಕ್ಕಿಳಿಯಲಿದ್ದೇನೆ ಎಂಬ ಸಂದೇಶವನ್ನು ಯೋಗೀಶ್ವರ್‌ ಈಗಾಗಲೇ ಬಹಿರಂಗವಾಗಿ ರವಾನಿಸಿದ್ದಾರೆ.

ಶಿಗ್ಗಾವಿ: ಬೊಮ್ಮಾಯಿ ಪುತ್ರ ಕಣಕ್ಕೆ?
ಹಾವೇರಿ: ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ ಟಿಕೆಟ್‌ ಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ, ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶಶಿಧರ ಯಲಿಗಾರ, ಡಿ.ಎಸ್‌.ಮಾಳಗಿ ಟಿಕೆಟ್‌ ಬಯಸಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ಗೆ ಬಹಿರಂಗವಾಗಿಯೇ ಪೈಪೋಟಿ ನಡೆಯುತ್ತಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.