Assembly By Election: ಚುನಾವಣ ಕಣ ಸಿದ್ಧ, ದೀಪಾವಳಿ ಬಳಿಕ ಅಬ್ಬರ

ತೀವ್ರ ಕುತೂಹಲ ಕೆರಳಿಸಿದ್ದ ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ನಿರಾಳ, ಚನ್ನಪಟ್ಟಣ ಕ್ಷೇತ್ರದಲ್ಲಿ ಬರೋಬ್ಬರಿ 31 ಅಭ್ಯರ್ಥಿಗಳು ಕಣದಲ್ಲಿ

Team Udayavani, Oct 31, 2024, 7:15 AM IST

BJP-JDS-By

ಬೆಂಗಳೂರು/ಹುಬ್ಬಳ್ಳಿ: ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಣ ಸಿದ್ಧಯಾಗಿದ್ದು, ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ಕಣದ ಸ್ಪಷ್ಟ ಚಿತ್ರಣ ಲಭಿಸಿದೆ. ಮೂರೂ ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳ ಪ್ರಮುಖ ನಾಯಕರು ಈಗಾಗಲೇ ಪ್ರಚಾರ ಕಾರ್ಯ ನಡೆಸಿದ್ದರೂ, ದೀಪಾವಳಿ ಹಬ್ಬದ ಬಳಿಕವಷ್ಟೇ ಅಬ್ಬರ ಹೆಚ್ಚಾಗಲಿದೆ.

ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಬುಧವಾರ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ ತಮ್ಮ ನಾಮಪತ್ರ ವಾಪಸ್‌ ಪಡೆದರು. ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ಗೆ ಬೆಂಬಲ ಸೂಚಿಸುವ ಮೂಲಕ ಶಿಗ್ಗಾಂವಿ ಚುನಾವಣ ಕಣ ಚುರುಕುಗೊಳಿಸಿದ್ದಾರೆ. ಇನ್ನೊಂದು ಪ್ರಮುಖ ಕ್ಷೇತ್ರ ಚನ್ನಪಟ್ಟಣದಲ್ಲಿ ಬರೋಬ್ಬರು 31 ಅಭ್ಯರ್ಥಿಗಳು ಕಣದಲ್ಲಿ ಉಳಿದು ದಾಖಲೆ ನಿರ್ಮಾಣ ಮಾಡಿದ್ದಾರೆ.

ಸಂಡೂರಿನಲ್ಲಿ ಕಾಂಗ್ರೆಸ್‌-ಬಿಜೆಪಿ ಅಬ್ಬರ
ಸಂಡೂರು ಕ್ಷೇತ್ರದಲ್ಲಿ ಉಪಚುನಾವಣೆ ಕಣ ಕಾವು ಜೋರಾಗಿದ್ದು, ಬಿಜೆಪಿ, ಕಾಂಗ್ರೆಸ್‌ ಪಕ್ಷಗಳ ರಾಜ್ಯ ನಾಯಕರು ಬುಧವಾರ ಭರ್ಜರಿ ಪ್ರಚಾರ ನಡೆಸಿದರು. ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿದ ಸಚಿವ ಸಂತೋಷ್‌ ಲಾಡ್‌, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಾ ತುಕರಾಂ ಅವರನ್ನು ಬೆಂಬಲಿಸಿ ಎಂದು ಕೋರಿದರು. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ, ಸಂಡೂರಿನಲ್ಲಿ ಜನಬಲದ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಗೆಲ್ಲಿಸಬೇಕು, ತಪ್ಪು ಮಾಡಿದವರಿಗೆ ಪ್ರಜಾಪ್ರಭುತ್ವದಲ್ಲಿ ಸೋಲಿಸುವ ಮೂಲಕ ಶಿಕ್ಷೆ ಕೊಡಬೇಕು ಎಂದರು.

ಶಿಗ್ಗಾಂವಿಯಲ್ಲಿ ಜಮೀರ್‌ ಮತ ಬೇಟೆ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ವಿವಿಧ ಗ್ರಾಮಗಳಿಗೆ ಸುತ್ತಾಡಿ ಮತದಾರರ ಮನವೊಲಿಕೆ ಪ್ರಯತ್ನ ಮಾಡುತ್ತಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಬುಧವಾರ ಕಾಂಗ್ರೆಸ್‌ ಬೇಗುದಿ ಶಮನ ಮಾಡಲು ಬಂದಿದ್ದ ಸಚಿವ ಜಮೀರ್‌, ಅಭ್ಯರ್ಥಿ ಯಾಸೀರ್‌ಖಾನ್‌ ಪಠಾಣ ಹಾಗೂ ಬಂಡಾಯವೆದ್ದಿದ್ದ ಅಜ್ಜಿಂಪೀರ್‌ ಖಾದ್ರಿ ಅವರನ್ನು ಜತೆಗೆ ಕರೆದುಕೊಂಡು ಕ್ಷೇತ್ರ ಸುತ್ತಾಡಿದರು.

ಇನ್ನೊಂದೆಡೆ ಬಿಜೆಪಿ ಕೂಡ ಅಬ್ಬರ ಪ್ರಚಾರ ಕೈಗೊಂಡಿತು. ಪುತ್ರನ ಗೆಲುವಿಗೆ ಟೊಂಕ ಕಟ್ಟಿರುವ ಬೊಮ್ಮಾಯಿ ದಂಪತಿ ಕ್ಷೇತ್ರದಲ್ಲಿ ಸುತ್ತಾಟ ನಡೆಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕ್ಯಾಲಕೊಂಡ ಗ್ರಾಮದಲ್ಲಿ ಪ್ರಚಾರ ನಡೆಸಿದರೆ, ಪತ್ನಿ ಚನ್ನಮ್ಮ ಬೊಮ್ಮಾಯಿ ಹುಲಸೋಗಿ, ಹಿರೇಮಣಕಟ್ಟಿ, ಚಿಕ್ಕಮಣಕಟ್ಟಿ, ಕಬನೂರು, ಬನ್ನೂರು, ಮುಗಳಿ ಗ್ರಾಮಗಳಲ್ಲಿ ಮತಯಾಚಿಸಿದರು. ಅಭ್ಯರ್ಥಿ ಭರತ್‌ ಬೊಮ್ಮಾಯಿ ತಳ್ಳಿಹಳ್ಳಿ, ಹೊಸಳ್ಳಿ, ತೊಂಡುರು, ಮೇಳಾಗಟ್ಟಿ, ಹುರುಳಿಕೊಪ್ಪಿ ಸೇರಿ ಇತರೆಡೆ ಸುತ್ತಾಡಿ ಮತದಾರರ ಮನವೊಲಿಕೆ ಪ್ರಯತ್ನ ಮಾಡಿದರು.

ಮೈತ್ರಿ ನಾಯಕರ ಶಕ್ತಿ ಪ್ರದರ್ಶನ
ಹೈವೋಲ್ಟೇಜ್‌ ಕ್ಷೇತ್ರವಾದ ಚನ್ನಪಟ್ಟಣದಲ್ಲೂ ಚುನಾವಣ ಪ್ರಚಾರ ಬಿರುಸು ಪಡೆದಿದೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕ್ಷೇತ್ರದ ಹಲವೆಡೆ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಇನ್ನು ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆದಿದ್ದು, ವಿಧಾನಸಭೆ ವಿಪಕ್ಷದ ನಾಯಕ ಆರ್‌. ಅಶೋಕ್‌ ಸೇರಿದಂತೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ| ಸಿ.ಎನ್‌. ಮಂಜುನಾಥ್‌, ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ್‌ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು. ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಕೆಂಗಲ್‌ ಹಾಗೂ ಸುತ್ತಮುತ್ತಲ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ಪರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರಚಾರ ನಡೆಸಿದರು.

ಟಾಪ್ ನ್ಯೂಸ್

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.