Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Team Udayavani, Nov 6, 2024, 12:56 AM IST
ಬೆಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.
ಎಡನೀರು ಸಂಸ್ಥಾನವು ಪರಂಪರಾಗತವಾಗಿ ಕಲೆ-ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಕೊಳ್ಳುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದೆ. ಶ್ರೀಗಳ ಮೇಲೆ ನಡೆದಿರುವ ದಾಳಿ ಕನ್ನಡದ ಮೇಲೆ ನಡೆದಿರುವ ದಾಳಿ ಎಂದು ಭಾವಿಸಲಾಗುತ್ತದೆ. ಕೇರಳದಲ್ಲಿರುವ ಕನ್ನಡಿಗರಿಗೆ ರಕ್ಷಣೆಯನ್ನು ಒದಗಿಸಲು ಅಲ್ಲಿನ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಬ್ರಾಹ್ಮಣ ಮಹಾಸಭಾ ಖಂಡನೆ
ಎಡನೀರು ಮಠದ ಸಚ್ಚಿದಾನಂದ ಭಾರತೀತೀರ್ಥ ಶ್ರೀಗಳ ಕಾರಿನ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ತೀವ್ರವಾಗಿ ಖಂಡಿಸಿದೆ. ಹಿಂದೂಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವವರ ಮೇಲಿನ ಈ ಕೃತ್ಯ ಸಲ್ಲ.
ಈ ಕೂಡಲೇ ಕೇರಳ ಸರಕಾರವು ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರಕಾರದ ಕಡೆಯಿಂದ ಕಲ್ಪಿಸಬೇಕೆಂದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.