ಉಪ್ಪಿನಂಗಡಿ; ಪ್ರತಿಭಟನೆಯಲ್ಲಿ ಎಸ್‌ಐ ಕೊಲೆ ಯತ್ನ: ಮತ್ತೋರ್ವನ ಸೆರೆ
ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Team Udayavani, Jan 12, 2022, 10:36 AM IST
Representative Image
ಉಪ್ಪಿನಂಗಡಿ, ಜ. 11: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಪ್ರಸನ್ನ ಕುಮಾರ್ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಸೇರಿದಂತೆ ಇನ್ನಿತರ ಕೃತ್ಯಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್ ಹನೀಫ್ (41) ಬಂಧಿತ. ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಒಮ್ಮೆ ಐವರು ಬಳಿಕ ಇಬ್ಬರನ್ನು ಬಂಧಿಸಲಾಗಿತ್ತು. ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕೃತ್ಯಕ್ಕೆ ಸಂಬಂಧಿಸಿ ಅದೇ ದಿನ 10 ಮಂದಿಯನ್ನು ಬಂಧಿಸಲಾಗಿತ್ತು. ಡಿ. 14ರ ಘಟನಾವಳಿಯಲ್ಲಿ ಈವರೆಗೆ ಒಟ್ಟು 18 ಮಂದಿಯ ಬಂಧನವಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.