ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಮೂವರು ಮಕ್ಕಳ ಸಾವು; ತಾಯಿ ಗಂಭೀರ
Team Udayavani, Jul 4, 2020, 6:49 PM IST
ಬನಹಟ್ಟಿ : ಒಂದೇ ಕುಟುಂಬದ ಮೂವರು ಮಕ್ಕಳೊಂದಿಗೆ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಸಮೀಪದ ಜಗದಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಈ ಘಟನೆಯಲ್ಲಿ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತು ತಾಯಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ. ಈ ಘಟನೆ ಬನಹಟ್ಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದೆರಡು ವರ್ಷಗಳ ಹಿಂದೆ ಪತಿ ಚಿಕ್ಕಯ್ಯ ದಾನಯ್ಯ ಮಠದ ಬಂಡಿಗಣಿಯ ಹೊರವಲಯದಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿದ್ದರು. ವೈಯಕ್ತಿಕ ಕಾರಣದಿಂದ ಮನನೊಂದ ಭಾಗ್ಯಶ್ರೀ ಚಿಕ್ಕಯ್ಯ ಮಠದ(32) ತನ್ನ ಮಕ್ಕಳಾದ ಶಿವಾನಿ(12), ಶಿವಶಂಕರ(10), ಶಿವಶ್ರೀ(9) ಈ ಮೂವರಿಗೂ ವಿಷ ಉಣಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿದು ಬಂದಿದೆ.
ಘಟನೆ: ಶನಿವಾರ ಬೆಳಿಗ್ಗೆ 6.30 ರ ಸುಮಾರಿಗೆ ತಮ್ಮ ತೋಟದ ಮನೆಯಿಂದ ಜಗದಾಳ ಗ್ರಾಮದ ಹತ್ತಿರದ ದುರ್ಗಾದೇವಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ 10 ಗಂಟೆಯಾದರೂ ಮನೆಗೆ ವಾಪಸ್ ಬಾರದೆ ಇದ್ದಾಗ, ಮನೆಯವರು ಹುಡುಕಾಟ ನಡೆಸಿದ ನಂತರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾಗ್ಯಶ್ರೀ ತೀವ್ರ ಅಸ್ವಸ್ಥದಿಂದ ಬಳಲುತ್ತಿದ್ದರೆ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದವು.
ಮನೆಯಿಂದ ಬರುವಾಗ ಕುಡಿಯುವ ನೀರಿನಲ್ಲಿ ಉಣ್ಣೆಗೆ ಸಿಂಪಡಿಸುವ ಔಷಧಿಯನ್ನು ಮಿಶ್ರಣಗೊಳಿಸಿ ಮಕ್ಕಳಿಗೆ ನೀಡಿದ್ದಲ್ಲದೆ ತಾನೂ ಸಹ ಕುಡಿದಿರುವುದಾಗಿ ಮೆಲ್ನೋಟಕ್ಕೆ ಕಂಡು ಬಂದ ವಿಷಯವಾಗಿದೆ.
ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಸಂಜೆಯವರೆಗೂ ಪ್ರಕರಣ ದಾಖಲಾಗಿರಲಿಲ್ಲ. ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ ಮತ್ತು ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.