ಅಯೋಧ್ಯೆ ರಾಮಮಂದಿರದ ಭೂಗರ್ಭಕ್ಕೆ ಉಡುಪಿ ಕೃಷ್ಣ ನಗರಿಯ ಮಣ್ಣು
ಅಯೋಧ್ಯೆಗೆ ಹೊರಟ ಪವಿತ್ರ ಮೃತ್ತಿಕೆಗಳು...
Team Udayavani, Jul 20, 2020, 6:19 PM IST
ಉಡುಪಿ : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ!
ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ . ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಗಂಧ ಪ್ರಸಾದ , ನಿರ್ಮಾಲ್ಯವಿಟ್ಟು ಮಂಗಳಾರತಿ ಬೆಳಗಿ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ಅತ್ಯಂತ ಯಶಸ್ವಿಯಾಗಿ ನಡೆದು ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸಿ ವಿಹಿಂಪ ದ ಉಡುಪಿಯ ಪ್ರಮುಖರಿಗೆ ಸೋಮವಾರ ಹಸ್ತಾಂತರಿಸಿದರು .
ವಿಹಿಂಪ ಜಿಲ್ಲಾಧ್ಯಕ್ಷ ಪಿ ವಿಷ್ಣುಮೂರ್ತಿ ಆಚಾರ್ಯ , ಕಾರ್ಯದರ್ಶಿ ದಿನೇಶ್ ಮೆಂಡನ್ ಬಜರಂಗದಳ ಪ್ರಾಂತ ಸಹಸಂಚಾಲಕ ಸುನಿಲ್ ಕೆ ಆರ್ , ಮಠದ ವ್ಯವಸ್ಥಾಪಕ ಗೋವಿಂದರಾಜ್ , ವಿದ್ವಾನ್ ರಾಮನಾಥ ಆಚಾರ್ಯ , ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು .
ಸ್ವಾಮೀಜಿಯವರಿಂದ ಮೃತ್ತಿಕೆಯನ್ನು ಸ್ವೀಕರಿಸಿದ ಬಳಿಕ ಕಾರ್ಯಕರ್ತರು ರಥಬೀದಿಯಲ್ಲಿ ರಾಮನಾಮ ಸ್ಮರಣೆಯೊಂದಿಗೆ ಪ್ರದಕ್ಷಿಣೆ ಬಂದು ಶ್ರೀ ಮದನಂತೇಶ್ವರ ದೇವಳಕ್ಕೆ ತೆರಳಿ ಅಲ್ಲಿ ಶ್ರೀ ದೇವರ ಪ್ರಸಾದವನ್ನೂ ಸೇರಿಸಿ , ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿದರು .ಬಳಿಕ ಹಿತ್ತಾಳೆಯ ಕರಂಡಕದಲ್ಲಿ ಮೃತ್ತಿಕೆಯನ್ನು ತುಂಬಿಸಿ ಕಳಿಸಿಕೊಟ್ಟರು.
ಪ್ರಧಾನಿ ಮೋದಿಯವರಿಂದ ಅಯೋಧ್ಯೆಯ ಭೂಮಿ ಸೇರಲಿದೆ
ಉಡುಪಿ ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಕ್ಷೇತ್ರಗಳ ಹಾಗೂ ನದಿಗಳ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ . ಇವೆಲ್ಲವನ್ನೂ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಸಂದರ್ಭದಲ್ಲಿ ಮಂದಿರದ ಜಾಗದಲ್ಲಿ ಭೂಮಿಗೆ ಅರ್ಪಿಸಲಿದ್ದಾರೆ .
ಶಿಲಾನ್ಯಾಸ ಸಮಾರಂಭಕ್ಕೆ ಪೇಜಾವರ ಶ್ರೀ ಗೈರು
ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಆ .5 ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದಲ್ಲಿ ಪೇಜಾವರ ಶ್ರೀಗಳು ಭಾಗವಹಿಸುತ್ತಿಲ್ಲ ಎಂದು ಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.