B.Y.Vijayendra: ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿ ಭದ್ರಕೋಟೆ
ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ
Team Udayavani, Jun 22, 2024, 7:28 PM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಹುಮತ ಪಡೆದಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆ ನಮ್ಮ ಕರ್ನಾಟಕ ಎಂಬುದನ್ನು ಜನರು ಲೋಕಸಭಾ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ ಜೆಡಿಎಸ್ ಒಂದಾಗಿ ಆಡಳಿತ ಪಕ್ಷ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಆಮಿಷದ ನಡುವೆಯೂ ಜನ ಬಿಜೆಪಿ ಜೆಡಿಎಸ್ಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗೂಬೆ ಕೂರಿಸುತ್ತಿದ್ದರೂ ಅದನ್ನು ಧಿಕ್ಕರಿಸಿ ಜನ ಆಶೀರ್ವಾದ ಮಾಡಿದ್ದಾರೆ. 9 ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸಚಿವರು ಇರುವ ಕ್ಷೇತ್ರಗಳಲ್ಲಿ ಕೂಡ ಎನ್ಡಿಎ ಲೀಡ್ ಪಡೆದುಕೊಂಡಿದೆ ಎಂದು ತಿಳಿಸಿದರು.
ಸಂಸದರು ಹೆಚ್ಚು ಶ್ರಮ ಹಾಕಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್ ದುರಾಡಳಿತದಿಂದ ಕರ್ನಾಟಕ ಎಲ್ಲ ವಿಧಗಳಲ್ಲೂ ಹಿಂದೆ ಸರಿದಿದೆ. ಬೋರ್ಡ್ ಅಧ್ಯಕ್ಷರು ಅನುದಾನಕ್ಕೆ ಕಾಯುತ್ತಿರುವ ರೀತಿ ಸಿಎಂ ವರ್ತಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ಬರುತ್ತವೆ. ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆಯಲ್ಲಿ ಸಂಸದರು ಹೆಚ್ಚು ಶ್ರಮ ಹಾಕಬೇಕು ಎಂದು ಸೂಚನೆ ನೀಡಿದರು.
ಸಮಾರಂಭದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ಎಚ್ಡಿ ಕುಮಾರಸ್ವಾಮಿ, ವಿ ಸೋಮಣ್ಣ ಲೋಕಸಭಾ ಚುನಾವಣಾ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಭಾಗಿಯಾಗಿದ್ದರು.
ಬಿಜೆಪಿ ಮತ್ತು ಜೆಡಿಎಸ್ನ ಎಲ್ಲ ಸಂಸದರು, ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.