ಕೋವಿಡ್ ಸೋಂಕಿಗೆ ಒಂದೇ ಕುಟುಂಬದ ನಾಲ್ವರು ಬಲಿ : ಅನಾಥವಾದ 9 ವರ್ಷದ ಬಾಲಕ

Team Udayavani, May 16, 2021, 7:30 PM IST

ಕೋವಿಡ್ ಸೋಂಕಿಗೆ ಒಂದೇ ಕುಟುಂಬದ ನಾಲ್ವರು ಬಲಿ : ಅನಾಥವಾದ 9 ವರ್ಷದ ಪುತ್ರ

ಬಾಗಲಕೋಟೆ : ಕೊರೊನಾ 2ನೇ ಅಲೆ ಎಂಬ ಮಹಾ ಮಹಾರಿ ಒಂದೇ ಕುಟುಂಬದ ನಾಲ್ವರನ್ನು ಬಲಿ ಪಡೆದಿದ್ದು, ಅನಾಥನಾದ ಪುತ್ರ ವರ್ಷದ ಬಾಲಕನೀಗ ಅನಾಥವಾಗಿದ್ದಾನೆ.

ಕೊರೊನಾ 2ನೇ ಅಲೆ ಬಹಳಷ್ಟು ಜನರಿಗೆ ಇನ್ನಿಲ್ಲದ ತೊಂದರೆ ಕೊಡುತ್ತಿದೆ. ಮದುವೆ, ಮಕ್ಕಳೊಂದಿಗೆ ಸುಂದರ ಬದುಕು ನಡೆಸುತ್ತಿದ್ದವರ ಬಾಳಿಗೆ ಕೊಳ್ಳಿ ಇಡುತ್ತಿದೆ. ವಾರದ ಹಿಂದೆ ನೆಮ್ಮದಿಯ ಬದುಕು ನಡೆಸುತ್ತಿದ್ದವರ ಕುಟುಂಬಗಳೀಗ ಸಂಕಷ್ಟಕ್ಕೆ ಒಳಗಾಗುತ್ತಿದೆ. ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥವಾಗುತ್ತಿವೆ.

ಎರಡು ದಿನಗಳ ಹಿಂದೆ ನಗರದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಕೊರೊನಾ ಎಂಬ ಮಾರಿಗೆ ಬಲಿಯಾಗಿದ್ದು, ಶಿಕ್ಷಕಿ ಹಾಗೂ ಸರ್ಕಾರಿ ಉದ್ಯೋಗಿ ದಂಪತಿಯ 9ನೇ ತರಗತಿಯ ಮಗ ಅನಾಥವಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸಾಲಹಳ್ಳಿಯಲ್ಲಿ ವಾಸವಾಗಿದ್ದ ಜಿಲ್ಲೆಯ ದೇವನಾಳದ ಈ ಕುಟುಂಬದ ಆಧಾರಸ್ತಂಬಗಳೇ ಈಗ ಮಾಯವಾಗಿವೆ.

ಇದನ್ನೂ ಓದಿ :‘ಬ್ಲ್ಯಾಕ್ ಫಂಗಸ್’ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ : ಅರವಿಂದ ಕೇಜ್ರಿವಾಲ್

ನಾಲ್ವರು ದುರ್ಮರಣ :

ನಾಲ್ಕು ದಿನಗಳ ಅಂತರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ತಂದೆ-ತಾಯಿ, ಮಗಳು ಹಾಗೂ ಪತಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಇವರೆಲ್ಲ ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರಾದರೂ, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.

ಬಾಗಲಕೋಟೆ ತಾಲೂಕಿನ ದೇವನಾಳ ಗ್ರಾಮದ ವೆಂಕಟೇಶ ಒಂಟಗೋಡಿ ಮತ್ತು ರಾಜೇಶ್ವರಿ ಒಂಟಗೋಡಿ ಅವರದು ಚಿಕ್ಕ ಮತ್ತು ಚೊಕ್ಕದಾದ ಕುಟುಂಬ. ರಾಜೇಶ್ವರಿ ಸಾಲಹಳ್ಳಿಯಲ್ಲಿ ಶಿಕ್ಷಕಿಯಾಗಿದ್ದರೆ, ಪತಿ ವೆಂಕಟೇಶ ಅಲ್ಲಿಯೇ ಹಾಸ್ಟೇಲ್‌ಗಳ ಸೂಪರಿಡೆಂಟ್ (ಸರ್ಕಾರಿ ಉದ್ಯೋಗಿ) ಆಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ದೇವನಾಳ ಗ್ರಾಮದ ಇವರು, ಹಲವು ವರ್ಷಗಳಿಂದ ಸಾಲಹಳ್ಳಿಯಲ್ಲೇ ವಾಸವಾಗಿದ್ದರು. ಕಳೆದ ಮೇ ೩ರಂದು ರಾಜೇಶ್ವರಿ (40) ಹಾಗೂ ಮೇ ೧೫ರಂದು ಪತಿ ವೆಂಕಟೇಶ ಒಂಟಗೋಡಿ(45) ಕೊರೊನಾ ಸೋಂಕಿಗೆ ಸುತ್ತಾಗಿ, ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಇನ್ನು ಶಿಕ್ಷಕಿಯಾಗಿದ್ದ ರಾಜೇಶ್ವರಿ ಅವರ ತಂದೆ ನಿವೃತ್ತ ಶಿಕ್ಷಕ, ಚಿಪ್ಪಲಕಟ್ಟಿ ಗ್ರಾಮದ ರಾಮನಗೌಡ ಉದಪುಡಿ (74) ಮತ್ತು ಪತ್ನಿ ಲಕ್ಷ್ಮಿಬಾಯಿ ರಾಮನಗೌಡ ಉದಪುಡಿ (68) ಅವರು ಸಾಲಹಳ್ಳಿಯಲ್ಲಿ ವಾಸವಾಗಿದ್ದರು. ಇವರಿಗೂ ಕೊರೊನಾ ಎಂಬ ಮಾರಿ ಮೈ ಸೇರಿಕೊಂಡಿತ್ತು. ಈ ನಾಲ್ವರೂ ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಹೆತ್ತವರ ಅಂತ್ಯಕ್ರಿಯೆಗೂ ಭಾಗವಹಿಸಲಾಗದ ಸ್ಥಿತಿ :

ನಿವೃತ್ತ ಶಿಕ್ಷಕ ರಾಮನಗೌಡ ಉದಪುಡಿ ಮತ್ತು ಲಕ್ಷ್ಮಿಬಾಯಿ ಉದಪುಡಿ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಅದರಲ್ಲಿ ಓರ್ವ ಪುತ್ರ ಬೆಂಗಳೂರಿನಲ್ಲಿದ್ದರೆ, ಮತ್ತೊಬ್ಬ ಪುತ್ರ ಅಮೆರಿಕದಲ್ಲಿದ್ದಾರೆ. ಬೆಂಗಳೂರಿನಲ್ಲಿದ್ದ ಪುತ್ರ ಮಾತ್ರ ಬಾಗಲಕೋಟೆಗೆ ಬಂದಿದ್ದ. ಅಮೆರಿಕದಲ್ಲಿದ್ದ ಪುತ್ರ ನಿತ್ಯ ವಿಡಿಯೋ ಕಾಲ್ ಮೂಲಕ ತಂದೆ-ತಾಯಿ ಜತೆಗೆ ಆರಂಭದಲ್ಲಿ ಮಾತನಾಡಿದ್ದ. ಹೆತ್ತವರು ಅಸುನೀಗಿದಾಗ, ಕೊನೆ ಘಳಿಗೆಯಲ್ಲಿ ಅವರನ್ನು ನೋಡಬೇಕೆಂಬ ಪುತ್ರನ ಆಸೆಗೆ ಕೊರೊನಾ ಎಂಬ ಸೋಂಕು ಅಡ್ಡಿಯಾಯಿತು. ಹೀಗಾಗಿ ಅಮೆರಿಕದಲ್ಲಿರುವ ಪುತ್ರ, ಅಲ್ಲಿಯೇ ಕಣ್ಣೀರು ಹಾಕಿ, ತಂದೆ-ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು.

ಅನಾಥವಾದ ಪುತ್ರ :

ಸಾಲಹಳ್ಳಿಯಲ್ಲಿ ನೆಲೆಸಿದ್ದ ದೇವನಾಳದ ವೆಂಟಕೇಶ ಮತ್ತು ರಾಜೇಶ್ವರಿ ಅವರಿಗೆ ಓರ್ವ ಪುತ್ರ ಮಾತ್ರವಿದ್ದು, ಆತ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಒಂದೇ ವಾರದಲ್ಲಿ ತಾಯಿ ಮತ್ತು ತಂದೆಯನ್ನು ಕಳೆದುಕೊಂಡ ಆ ಬಾಲಕ, ಈಗ ಅನಾಥವಾಗಿದ್ದಾನೆ. ಈ ಪ್ರಸಂಗವನ್ನು ನೆನಸಿಕೊಂಡರೆ, ಕರಳು ಹಿಂಡುತ್ತಿದೆ ಎನ್ನುತ್ತಾರೆ ಇವರ ಸಂಬಂಽಯೂ ಆಗಿರುವ ಜಿಲ್ಲಾ ಗ್ರಾಹಕರ ಆಯೋಗದ ಸದಸ್ಯ ರಂಗನಗೌಡ ದಂಡನ್ನವರ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.