ಅಂತರರಾಜ್ಯ ಕಳ್ಳನ ಬಂಧನ: 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
Team Udayavani, May 25, 2021, 7:24 PM IST
ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬನಹಟ್ಟಿ, ನಾವಲಗಿ ಹಾಗೂ ಚಿಮ್ಮಡ ಗ್ರಾಮದಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ, ವಿಜಯಪುರ ಜಿಲ್ಲೆಯ ಹೊನ್ನಾಳಿ ಗ್ರಾಮದ ಸಂತೋಷ ನಂದಿಹಾಳ ಇವನನ್ನು ಬನಹಟ್ಟಿಯ ಪೊಲೀಸರು ಬಂಧಿಸಿ ಅವನಿಂದ ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸ್ಥಳೀಯ ಸಿಪಿಐ ಜಿ.ಕರುಣೇಶಗೌಡ ಮಾತನಾಡಿ, 2019ರಲ್ಲಿ ವರದಿಯಾಗಿದ್ದ ಪ್ರಕರಣದಲ್ಲಿ ದೊರೆತ ಸಿಸಿ ಟಿ.ವಿ. ದೃಶ್ಯಾವಳಿಗಳ ಸುಳಿವನ್ನು ಆಧರಿಸಿ ಸದರಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಸದರಿ ಕಳ್ಳನಿಂದ 3 ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ಚಿನ್ನದ 4 ಸರಗಳು, 6 ಉಂಗುರಗಳು, 1 ನಕ್ಲೇಸ್ ಸರ್ ಸೇರಿದಂತೆ ಇತ್ಯಾದಿ ಸುಮಾರು 6 ಲಕ್ಷ ಮೊತ್ತದ 141 ಗ್ರಾಂ ತೂಕದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
1996ರಿಂದ ಇಲ್ಲಿಯವರೆಗೆ ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. 2019ರಲ್ಲಿ ಈತನು ರಾಮದುರ್ಗ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡು ಹೋಗಿದ್ದನು. ಅಲ್ಲದೇ ಮುಧೋಳ, ಲೋಕಾಪುರ, ರಾಮದುರ್ಗ, ನಿಂಬರ್ಗಾ, ಮಧನ ಹಿಪ್ಪರಗಾ, ಇಳಕಲ್ಲ ಪೊಲೀಸ್ ಠಾಣೆಗಳ 16 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ಈತನ ಬಂಧನ ವಾರಂಟಗಳನ್ನು ಹೊರಡಿಸಿದೆ.
ಇದನ್ನೂ ಓದಿ :ನಿಮ್ಮನ್ನು ಗೆಲ್ಲಿಸಿದ್ದು ವೇಸ್ಟ್ : ಸಂಸದೆ ಸುಮಲತಾ ಫೇಸ್‌ಬುಕ್ ಪೋಸ್ಟ್ ಗೆ ನೆಟ್ಟಿಗರು ಕಿಡಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಡಿವೈಎಸ್ಪಿ ಎಂ.ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಸ್ಥಳೀಯ ಸಿಪಿಐ ಎರಡು ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ತನಿಖೆಯನ್ನು ನಡೆಸಿ ಪಿಎಸ್‌ಐ ರವಿಕುಮಾರ ಧರ್ಮಟ್ಟಿ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಕೂಡಿಕೊಂಡು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ವರ್ಗದವರಾದ ಪ್ರೊಬೆಶನರಿ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ, ವಿ.ಎಸ್.ಅಜ್ಜನಗೌಡರ, ಎ. ಎಂ. ಜಮಖಂಡಿ, ಎಸ್. ಆರ್. ಮುರಡಿ, ವಿಜಯ ತುಂಬದ, ಎಸ್.ಎಚ್.ನಾಟಿಕರ್, ಮಹೇಶ ಹನಗಂಡಿ, ಡಿ.ವೈ.ಗುರಿಕಾರ ಎಲ್.ಜಿ.ಕುಂಬಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.