ಬಾಗಲಕೋಟೆ: ಕೋವಿಡ್‌ಗೆ ಮತ್ತೋರ್ವ ವೃದ್ಧೆ ಸಾವು
ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಹಿಪ್ಪರಗಿ ವೃದ್ಧೆ ಸಾವು; ಸಾವಿನ ಸಂಖ್ಯೆ 7ಕ್ಕೆ ಏರಿಕೆ
Team Udayavani, Jul 4, 2020, 6:27 PM IST
ಬಾಗಲಕೋಟೆ : ಕೋವಿಡ್-19 ಸೋಂಕಿನಿಂದ ಜಿಲ್ಲೆಯ 94 ವರ್ಷದ ವೃದ್ಧೆಯೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ 94 ವರ್ಷದ ವೃದ್ಧೆ ಹೃದಯ ಸಂಬಂಧಿಕಾಯಿಲೆಯಿಂದ ಬಳಲುತ್ತಿದ್ದಳು. ಅವರನ್ನು ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶುಕ್ರವಾರ ರಾತ್ರಿಯೇ ಮೃತಪಟ್ಟಿದ್ದಾರೆ.
ಮುಂಜಾಗೃತೆಯಾಗಿ,ವೃದ್ಧೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದು, ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಆದರೆ, ವೃದ್ಧೆ, ಹೃದಯಾಘಾತದಿಂದ ಮೃತಪಟ್ಟಿದ್ದು, ತಕ್ಷಣ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿತ್ತು. ಕೋವಿಡ್ 19 ತಪಾಸಣೆ ವರದಿ ಬರುವ ಮುನ್ನವೇ ಸಂಬಂಧಿಕರು, ಕುಟುಂಬಸ್ಥರು, ಹಿಪ್ಪರಗಿಯಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಹೀಗಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದವರು, ಕುಟುಂಬಸ್ಥರು ಸಹಿತ ಸುಮಾರು 34 ಜನರನ್ನು ಹಿಪ್ಪರಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ.
ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮೃತಪಟ್ಟ ಹಿಪ್ಪರಗಿಯ ವೃದ್ಧೆವಿಜಯಪುರದಲ್ಲಿ, ಕಲಾದಗಿಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಇನ್ನುಳಿದ ಐದು ಜನರು ಬಾಗಲಕೋಟೆಯಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ, ಚಿಕ್ಕಮ್ಯಾಗೇರಿಯ ರೈಲ್ವೆ ಟಿಕೆಟ್ ಕಲೆಕ್ಟರ್, ಬಾಗಲಕೋಟೆ ನವನಗರದ ಸೆಕ್ಟರ್ನಂ.57ರ ನಿವಾಸಿ, ಹಳೆಯ ನಗರದ 76 ವರ್ಷದ ವೃದ್ಧ, ಮುಡಪಲಜೀವಿ ಗ್ರಾಮದ 50 ವರ್ಷದ ವೃದ್ಧ ಒಳಗೊಂಡು ಐವರು ಈ ವರೆಗೆ ಕೋವಿಡ್19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶನಿವಾರದ ವರೆಗೆ ಜಿಲ್ಲೆಯಲ್ಲಿ 226 ಜನರಿಗೆ ಸೋಂಕು ತಗುಲಿದ್ದು, ಕೋವಿಡ್ ಆಸ್ಪತ್ರೆಯಿಂದ ಒಟ್ಟು 137 ಜನ ಕೋವಿಡ್ ಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.