Hubli; ಮುಸ್ಲಿಂ ಮತ ಗಳಿಕೆಗೆ ಬಜರಂಗದಳ ನಿಷೇಧ ಹೇಳಿಕೆ; ಬಸನಗೌಡ ಪಾಟೀಲ ಯತ್ನಾಳ
ಕಾಂಗ್ರೆಸ್‌ನಲ್ಲಿ ಎರಡು ಪ್ರಿಯಾಂಕಗಳಿವೆ. ಇವುಗಳಲ್ಲಿ ಯಾವುದು ಪುಲ್ಲಿಂಗ, ಯಾವುದೂ ಸ್ತ್ರೀಲಿಂಗ
Team Udayavani, May 3, 2023, 10:18 AM IST
ಹುಬ್ಬಳ್ಳಿ: ಅಧಿಕಾರಕ್ಕೆ ಬರದೇ ಇರುವವರು ಬಜರಂಗದಳ ನಿಷೇಧ ಮಾಡಲು ಹೇಗೆ ಸಾಧ್ಯ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ನವರು ಆರೆಸ್ಸೆಸ್, ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳನ್ನು ನಿಷೇಧಿಸುತ್ತೇವೆ ಎಂದು ಹೇಳುತ್ತಾರೆ.
ಕೇವಲ ಮುಸ್ಲಿಮರ ಮತಕ್ಕಾಗಿ ಈ ರೀತಿ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ. ಅವರು ಯಾವತ್ತೂ ಹಿಂದೂಗಳ ಪರವಾಗಿಲ್ಲ ಹಾಗೂ ಅವರಿನ್ನು ಅಧಿಕಾರದ ಆಸೆ ಸಹ ಬಿಡಬೇಕು. ಕಾಂಗ್ರೆಸ್ ಭಾರತದಲ್ಲಿರುವ ಪಾಕಿಸ್ತಾನದ ಮುಸ್ಲಿಂ ಲೀಗ್ ಇದ್ದಂತೆ. ಅವರು ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.
ಹೀಗಾಗಿ ಬಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದರು. ಮುಸ್ಲಿಮರು ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ಪಡೆಯುತ್ತಿದ್ದರು. ಅದನ್ನು ನಮ್ಮ ಸರ್ಕಾರ ರದ್ದು ಮಾಡಿದೆ. ಅವರಿಗೆ ಮತ್ತೆ ಮೀಸಲಾತಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ.
ಹಿಂದೂ ವಿರೋಧಿ ನೀತಿಯಿಂದಾಗಿ ಕೇಂದ್ರದಲ್ಲಿ ಅಧಿಕೃತ ವಿರೋಧ ಪಕ್ಷವಾಗಲು ಸಾಧ್ಯವಾಗಿಲ್ಲ. ಎಲ್ಲ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಸೋಲುತ್ತಿದೆ. ಕಾಂಗ್ರೆಸ್‌ನವರ ಪ್ರಣಾಳಿಕೆಯನ್ನು ಎಂದಿಗೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಾಗಿಯೇ ಈ ರೀತಿ ಗ್ಯಾರಂಟಿಗಳನ್ನು ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ.
ರಾಜ್ಯದ ಜನ ಇವುಗಳನ್ನು ಒಪ್ಪುವುದಿಲ್ಲ. ಅವರ ವಾರೆಂಟಿಯೇ ಮುಗಿದು ಹೋಗಿದೆ. ಉದ್ಯೋಗ ಸೃಷ್ಟಿಸುವ ಯಾವ ಘೋಷಣೆಗಳನ್ನೂ ಅವರು ಮಾಡಿಲ್ಲ. ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವೆಲ್ಲ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡುವ ಯೋಜನೆಗಳು. ಜನರಿಗೆ ಒಳ್ಳೆಯದಾಗುವುದಿಲ್ಲ ಎಂದರು.
ಯಾವುದು ಪುಲ್ಲಿಂಗ, ಯಾವುದು ಸ್ತ್ರೀಲಿಂಗ?
ಕಾಂಗ್ರೆಸ್‌ನಲ್ಲಿ ಎರಡು ಪ್ರಿಯಾಂಕಗಳಿವೆ. ಇವುಗಳಲ್ಲಿ ಯಾವುದು ಪುಲ್ಲಿಂಗ, ಯಾವುದೂ ಸ್ತ್ರೀಲಿಂಗ ಎಂಬುದು ಗೊತ್ತಿಲ್ಲ.
ಒಂದು ಪ್ರಿಯಾಂಕ ಡೂಪ್ಲಿಕೇಟ್ ಗಾಂಧಿ. ಇವರು ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಇನ್ನೊಂದು ಪ್ರಿಯಾಂಕ
ನಾಲಾಯಕ್ ಎನ್ನುವ ಶಬ್ದ ಬಳಕೆ ಮಾಡುತ್ತಾರೆ. ಅವರಪ್ಪ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪ ಎಂದಿದ್ದರು. ಇವರಿಗೆ
ಪ್ರಧಾನಿ ಬೈಯದಿದ್ದರೆ ಆಗುವುದಿಲ್ಲ. ಇಂತಹವರೇ ನಮ್ಮ ಪಕ್ಷದ ಸೀಟು ಹೆಚ್ಚಿಸುತ್ತಾರೆ. ಪ್ರಿಯಾಂಕ ಹಾಗೂ ರಾಹುಲ್ ಇವರಿಬ್ಬರಿಂದ ನಾವು 150 ಸೀಟುಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಯತ್ನಾಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.