Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ
ಸಂಚಾರ ದಟ್ಟಣೆಗೊಳಿಸಿ ಕಿರಿಕಿರಿಗೈಯುವ ಜನರಿಗೆ ಪೊಲೀಸರಿಂದ ಎಚ್ಚರಿಕೆ
Team Udayavani, Jul 8, 2024, 7:17 PM IST
ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) : ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮಾತನಾಡಿ’ ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು ಇಲ್ಲಿ ಶ್ರೀ ಕಾಲಭೈರವೇಶ್ವರ ದೇವಸ್ಥಾನವಿದೆ. ಇಲ್ಲಿ ನಿತ್ಯ ಪ್ರವಾಸಿಗರು ಮೋಜು ಮಸ್ತಿ ಮಾಡಿ ಸಂಚಾರ ದಟ್ಟಣೆ ಮಾಡಿ ಜನರಿಗೆ ಕಿರಿಕಿರಿ ತರುವ ಸನ್ನಿವೇಶ ನಿರ್ಮಾಣವಾಗುತ್ತಿದೆ. ವಾರಾಂತ್ಯದಲ್ಲಿ ಅಲ್ಲದೇ ಈಗ ನಿತ್ಯದ ದಿನಗಳಲ್ಲೂ ಪ್ರವಾಸಿಗರು ಅದರಲ್ಲೂ ಯುವಕರು ಮದ್ಯಪಾನ ಮಾಡಿ ಕೂಗಾಡುವ ದೃಶ್ಯ ಕಂಡು ಬರುತ್ತಿದೆ.
ಹಾಗಾಗಿ ಸೋಮವಾರ ಸಿಬ್ಬಂದಿಯೊಂದಿಗೆ ದೇವರಮನೆಗೆ ಭೇಟಿ ನೀಡಿ ಮದ್ಯಪಾನ ಮಾಡಿದ ಯುವಕರಿಗೆ ದಂಡ ವಿಧಿಸಿ ಎಚ್ಚರಿಸಲಾಗಿದೆ. “ಪರಿಸರ ಕಲುಷಿತ ಮಾಡುವವರಿಗೆ ಕಡಿವಾಣ ಹಾಕಲಾಗುತ್ತಿದೆ. ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ಕೊಟ್ಟು ಪರಿಸರ ಅಸ್ವಾಧನೆ ಮಾಡುವುದು ಒಳಿತು. ಹಾಗೆಂದು ಮೋಜು ಮಸ್ತಿಗೆ ಅವಕಾಶ ನೀಡುವುದಿಲ್ಲ. ಟ್ರಾಫಿಕ್ ಜಾಮ್ ಮಾಡಿ ಜನರಿಗೆ ತೊಂದರೆ ಕೊಡುವವರಿಗೆ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಈ ಸಂದರ್ಭದಲ್ಲಿ ಎಎಸ್ಐ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿಗಳಾದ ಅಶೋಕ್, ವರ್ಷಿಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.