ಬಾಳು ಬಂಗಾರವಾಗಿಸಿದ `ಬಾಳೆ’: ಬಾಳೆಗೆ ಬಂಗಾರದ ಬೆಲೆ…….!
Team Udayavani, Jul 15, 2022, 2:35 PM IST
ರಬಕವಿ-ಬನಹಟ್ಟಿ: ರಾಜ್ಯವಷ್ಟೇ ಅಲ್ಲದೆ ಈ ಬಾರಿ ದೇಶಾದ್ಯಂತ ಬಾಳೆ ಬೆಳೆಯ ಇಳುವರಿ ಕ್ಷೀಣಿಸಿದ್ದರ ಹಿನ್ನಲೆಯಲ್ಲಿ ಜವಾರಿಯಷ್ಟೇ ಹೈಬ್ರೀಡ್ ತಳಿಯ ಬಾಳೆಗೂ ಬಾರಿ ಬೇಡಿಕೆ ಬಂದಿದ್ದು, ಐತಿಹಾಸಿಕ ದಾಖಲೆ ಬರೆಯುವಂತಾಗಿದೆ.
ಹೌದು, ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಪ್ರತಿ ಕೆಜಿ ಬಾಳೆಗೆ 2 ರಿಂದ 3 ರೂ. ಇದ್ದದ್ದು, ಇದೀಗ 22 ರಿಂದ 23 ರೂ. ಗಳವರೆಗೆ ಏರಿಕೆ ಕಂಡಿದ್ದು, ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ.
ಜವಾರಿ, ರಸಬಾಳೆ, ಏಲಕ್ಕಿ ಬಾಳೆ ಹಣ್ಣಿನಷ್ಟೇ ಹೈಬ್ರೀಡ್ ತಳಿಯ ಜಿ-9 ಬಾಳೆಯೂ ಸಮನಾದ ಬೆಲೆಗೆ ಮಾರುಕಟ್ಟೆಯಲ್ಲಿ ದುಬಾರಿಯಾಗಿದ್ದು, ಜನರು ಹೆಚ್ಚು ಕಡಿಮೆ ಸೇಬು, ಮಾವಿನ ಹಣ್ಣಿಗೆ ನೀಡುವಷ್ಟು ಹಣ ಕೊಟ್ಟು ಬಾಳೆ ಹಣ್ಣು ಖರೀದಿಸುವದು ಅನಿವಾರ್ಯವಾಗಿದೆ.
ರಾಜ್ಯದಲ್ಲಿ ಬೆಳೆಯವ ಬಾಳೆ ಬೆಳೆ ಉತ್ಪನ್ನದಲ್ಲಿ ಕೊರತೆ ಕಾಣಿಸಿಕೊಂಡಿದೆ. ಹೀಗಾಗಿ ಈಗ ತಮಿಳುನಾಡು, ಆಂಧ್ರ ರಾಜ್ಯಗಳಿಂದ ಬಾಳೆ ಆಮದು ಮಾಡಿಕೊಳ್ಳಲಾಗುತ್ತಿದ್ದರೂ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಹಜವಾಗಿ ಬಾಳೆಹಣ್ಣಿನ ಬೆಲೆ ಗಗನಕ್ಕೇರಿದೆ. ಕೆಲವಡೆ ಬಾಳೆಹಣ್ಣು ಮಾರಾಟಕ್ಕೆ ಸಿಗುತ್ತಿಲ್ಲ. ರಾಜ್ಯದ ಸಗಟು ಮಾರುಕಟ್ಟೆಯಲ್ಲಿ ಜಿ-9 ಬಾಳೆಯು ಕ್ವಿಂಟಲ್‌ಗೆ 2,200 ರಿಂದ 2,500 ರೂ.ವರೆಗೆ ಮಾರಾಟವಾಗುತ್ತಿದೆ.
ಬೆಳೆಗಾರರ ಸಂಖ್ಯೆ ಕ್ಷೀಣ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಪ್ರತಿ ವರ್ಷ ಸಾವಿರ ಎಕರೆಯಷ್ಟು ಬಾಳೆ ಬೆಳೆಯುತ್ತಿದ್ದರು. ಕಳೆದೆರಡು ವರ್ಷಗಳಿಂದ ಸತತ ಹಾನಿಯಿಂದಾಗಿ ಅನ್ಯ ಬೆಳೆಗೆ ರೈತರು ಮೊರೆ ಹೋದ ಕಾರಣ ಸುಮಾರು 200 ಎಕರೆಯಷ್ಟು ಬಾಳೆ ಮಾತ್ರ ದೊರಕುವಂತಾಗಿದೆ.
ಶ್ರಾವಣ ಸೇರಿದಂತೆ ಸಾಕಷ್ಟು ಹಬ್ಬಗಳು ಸರದಿಯಲ್ಲಿದ್ದು, ಇನ್ನೂ ಬೆಲೆ ಹೆಚ್ಚಾಗುವ ನಿರೀಕ್ಷೆಯಿದ್ದು, ಬಾಳೆ ಬೆಳೆದ ರೈತನಿಗೆ ನಿಜವಾಗಿಯೂ ಬಂಗಾರವಾಗಿದ್ದರೆ, ಖರೀದಿ ಮಾಡುವ ಗ್ರಾಹಕನಿಗೆ ಮಾತ್ರ ಬಾಳೆ ಬಿಸಿ ತುಪ್ಪವಾಗಿದೆ.
ಸಸಿಗಳ ಕೊರತೆ: ಮೂರ‍್ನಾಲ್ಕು ವರ್ಷಗಳಿಂದ ನರ್ಸರಿಗಳಿಗೆ ಬಾಳೆ ಸಸಿಯಿಂದ ಹಾನಿ ಅನುಭವಿಸಿರುವ ಕಾರಣ ಈ ಬಾರಿ ಸಸಿಗಳನ್ನು ಕಡಿಮೆ ಪ್ರಮಾಣದಲ್ಲಿ ಉತ್ಪಾದನೆಗೆ ಕಾರಣವಾಗಿತ್ತು. ಇದೀಗ ಸಸಿ ಸಮಸ್ಯೆ ಎದುರಿಸುತ್ತಿರುವ ಹಿನ್ನಲೆ ರೈತರೂ ಸಸಿಗಳಿಗಾಗಿ ಅಲೆದಾಟ ತಪ್ಪಿಲ್ಲ.
ಜಿ-9 ತಳಿಯ ಬಾಳೆ ಈ ಬಾರಿ ಕೈ ಹಿಡಿದಿದೆ. ಹಿಂದೆಂದೂ ದೊರಕದಷ್ಟು ದಾಖಲೆಯ ಬೆಲೆ ಬಂದಿರುವದು ಸಂತಸ ತಂದಿದೆ. –ಗುರು ಉಳ್ಳಾಗಡ್ಡಿ, ಜಗದಾಳ ರೈತ.
ಬಾಳೆ ಹಣ್ಣಿನ ಬೆಲೆ ಒಂದೆರಡು ತಿಂಗಳಲ್ಲಿ ದುಪ್ಪಟ್ಟಾಗಿದೆ. ಬೇಡಿಕೆಗೆ ತಕ್ಕಂತೆ ಬಾಳೆಹಣ್ಣು ಸಿಗುತ್ತಿಲ್ಲ. ಹೀಗಾಗಿ ಗ್ರಾಹಕರಿಗೆ ಉತ್ತರಿಸುವದೂ ಕಷ್ಟವಾಗಿದೆ. –ಬಸವರಾಜ ಬೆಳಗಲಿ, ಬಾಳೆ ವ್ಯಾಪಾರಿ, ಬನಹಟ್ಟಿ.
-ಕಿರಣ್ ಎಸ್. ಅಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.