ಅಶ್ಲೀಲ ಫೋಟೋ ತೋರಿಸಿ ಹಣಕ್ಕೆ ಬೇಡಿಕೆ : ಮದುವೆಯಾದ ಮಹಿಳೆಯರೇ ಈತನ ಟಾರ್ಗೆಟ್
Team Udayavani, Feb 19, 2022, 12:49 PM IST
ಬಂಟ್ವಾಳ : ಮಹಿಳೆಯರ ಅಶ್ಲೀಲ ಫೋಟೋಗಳನ್ನು ಹಿಡಿದುಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಸಂಬಂಧಿ ಮಹಿಳೆಯರೇ ಆತನ ಟಾರ್ಗೆಟ್ ಆಗಿದ್ದು, ಬಂಟ್ವಾಳದ ಮಹಿಳೆಯೋರ್ವರ ಅಶ್ಲೀಲ ಫೋಟೋಗಳನ್ನು ವಾಟ್ಸ್ ಆ್ಯಪ್ ಗ್ರೂಪ್‌ಗ್ಳಲ್ಲಿ ಶೇರ್ ಮಾಡಿರುವ ಕುರಿತು ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದರು.
4.48 ಲಕ್ಷ ರೂ. ಬೇಡಿಕೆ
ಈತನ ವಿಕೃತ ಕೃತ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ಕುರಿತು ತನಿಖೆ ನಡೆಸಿದಾಗ ಆತ ಇತರರಿಗೂ ಅದೇ ರೀತಿ ಬ್ಲ್ಯಾಕ್‌ವೆುàಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಫೋಟೋಗಳನ್ನು ಬಳಸಿಕೊಂಡು ಸುಮಾರು 4.48 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಮದುವೆಯಾದವರೇ ಟಾರ್ಗೆಟ್
ಮದುವೆಯಾದ ಮಹಿಳೆಯರನ್ನೇ ಗುರಿಯಾಗಿಸಿ ಮಾಡಿದ ಆತನ ಕೃತ್ಯಗಳನ್ನು ಗಮನಿಸಿದಾಗ ಸೈನೆಡ್ ಮೋಹನನ ಕೃತ್ಯಗಳು ನೆನಪಿಗೆ ಬಂದಿದ್ದು, ವಿಶೇಷ ವೆಂದರೆ ಸೈನೈಡ್ ಮೋಹನನ ಪ್ರಕರಣವನ್ನು ಬೇಧಿಸುವ ತಂಡದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸಿದ್ದ ವಿವೇಕಾನಂದ ಅವರು ಪ್ರಸ್ತುತ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದು, ರಾಧಾಕೃಷ್ಣನ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ : ಪಟ್ಟು ಸಡಿಲಿಸಬೇಡಿ: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ
ವಿಜಯಪುರದಲ್ಲಿ ವೈನ್ ಶಾಪೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ರಾಧಾಕೃಷ್ಣನನ್ನು ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವಿನಾಶ್ ಮತ್ತು ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿ ಪತ್ತೆಗಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಎಡಿಶನಲ್ ಎಸ್‌ಪಿ ಕುಮಾರ್‌ಚಂದ್ರ ಅವರ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೋರಟ್ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.