ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ-ಬಸವರಾಜ ಬೊಮ್ಮಾಯಿ
Team Udayavani, Feb 15, 2020, 10:21 PM IST
ಬೆಂಗಳೂರು: ಬಳ್ಳಾರಿ ರಸ್ತೆ ಅಪಘಾತ ಪ್ರಕರಣದಲ್ಲಿ ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ. ಕಂದಾಯ ಸಚಿವ ಆರ್.ಅಶೋಕ್ ಪುತ್ರನ ಪಾತ್ರ ಇಲ್ಲ ಎಂಬುದು ಈಗಾಗಲೇ ಗೊತ್ತಾಗಿದೆ ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ಹೇಳಿದರು.
ಕೋರಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ 2019ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಚಿವ ಅಶೋಕ್ ಪುತ್ರನ ಹೆಸರು ಕೇಳಿ ಬಂದಿದೆ. ಅಷ್ಟರಲ್ಲಿ ಎಫ್ಐಆರ್ ದಾಖಲಾಗಿದ್ದು, ಅದರಲ್ಲಿ ಅವರ ಹೆಸರಿಲ್ಲ. ಈ ಹಿನ್ನೆಲೆಯಲ್ಲಿ ಅವರ ಹೆಸರಿಲ್ಲ ಎಂದು ಹೇಳಿದ್ದೇನೆ. ಹೆಚ್ಚಿನ ತನಿಖೆಗೂ ಸೂಚಿಸಿದ್ದು, ತನಿಖಾಧಿಕಾರಿಗಳು ಬಹಿರಂಗ ಪಡಿಸಲಿದ್ದಾರೆ ಎಂದು ಪೊಲೀಸರು ಹೇಳಿದರು.
ಕಾಂಗ್ರೆಸ್‌ನಿಂದ ರಾಜಕೀಯ ಲಾಭ
ಇನ್ನು ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ತಾನೂ ವಿರೋಧ ಪಕ್ಷದ ನಾಯಕ ಎಂದು ತೋರಿಸಿಕೊಳ್ಳಬೇಕಿದೆ. ಹೀಗಾಗಿ ಈ ರೀತಿ ಹೇಳಿಕೆ, ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕೆಲವೊಂದು ಪ್ರಕರಣದಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು.
ದೇಶ ವಿರೋಧಿ ಘೋಷಣೆಗೆ ಅವಕಾಶವಿಲ್ಲ
ಹುಬ್ಬಳ್ಳಿಯಲ್ಲಿ ಪಾಕ್ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಳ್ಳಬೇಕಿದೆ. ಸದ್ಯ ಕೆಲ ಕಾಶ್ಮೀರಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರೇ ಆಗಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಲು ಅವಕಾಶ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.