ಯಾವುದೇ ಕ್ರೀಡೆಯಲ್ಲಿ ಆಡುವಾಗ ಗೆಲ್ಲಲೆಂದೇ ಆಡಬೇಕು : ಮುಖ್ಯಮಂತ್ರಿ ಬೊಮ್ಮಾಯಿ
Team Udayavani, Dec 11, 2021, 8:49 PM IST
ಬೆಂಗಳೂರು : ಆಟದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ, ಆಟವಾಡೋದು ಬಹಳ ಮುಖ್ಯ, ಅದರ ಜತೆಗೆ ಆಡುವಾಗ ಗೆಲ್ಲಲೆಂದೇ ಆಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮುಕ್ತಾಯವಾದ 70 ನೇ ಅಖಿಲ ಭಾರತ ಪೊಲೀಸ್ ಚಾಂಪಿಯನ್ ಶಿಪ್‍ನಲ್ಲಿ ಗೆಲುವು ಸಾಧಿಸಿದ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಯಾವುದೇ ಕ್ರೀಡೆಯಲ್ಲಿ ಆಡುವವರು ಸೋಲಬೇಕೆಂದು ಆಡಬಾರದು. ಸೋಲಿಗೆ ಹೆದರಲೂಬಾರದು ಯಾರು ಸೋಲಲು ಹೆದರುವುದಿಲ್ಲವೋ ಅವರೇ ಗೆಲ್ಲುತ್ತಾರೆ. ಆಟದಿಂದ ಶಿಸ್ತು ಬೆಳೆಯುತ್ತದೆ, ವ್ಯಕ್ತಿತ್ವ ವಿಕಸನವಾಗುತ್ತದೆ ಮತ್ತು ಕ್ರೀಡಾಮನೋಭಾವವೂ ಬೆಳೆಯುತ್ತದೆ. ಜೀವನಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದರು.
ಸೋತವರು ಮುಂದಿನ ಬಾರಿ ಗೆಲ್ಲಲು ಪ್ರಯತ್ನ ಮಾಡಬೇಕೆಂದು ಕಿವಿ ಮಾತು ಹೇಳಿದ ಮುಖ್ಯಮಂತ್ರಿಗಳು, ಗೆದ್ದವರು ತಮ್ಮ ಸ್ಪೂರ್ತಿಯನ್ನು ಕಾಯ್ದುಕೊಳ್ಳಬೇಕೆಂದರು.
ಚಾಂಪಿಯನ್ ಶಿಪ್‍ನಲ್ಲಿ ವಿಜೇತರಾದ ಪಂಜಾಬ್ ಪೊಲೀಸ್ ಹಾಕಿ ತಂಡ ಹಾಗೂ ಭಾಗವಹಿಸಿದ ವಿವಿಧ ರಾಜ್ಯಗಳ ಹಾಕಿಪಟುಗಳಿಗೆ ಅಭಿನಂದಿಸಿದರು.
ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಶಾಸಕ ಎನ್.ಎ.ಹ್ಯಾರಿಸ್, ನಟ ಶಿವರಾಜ್ ಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಕುಂದಾಪುರ : ಅನಾರೋಗ್ಯ ಪೀಡಿತ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಧನ ಸಂಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.