ಬಡವರಿಗೆ ಮನೆ, ನಿವೇಶನ ಹಂಚಿಕೆಗೆ ಕಾನೂನು ಸರಳೀಕರಣ : ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆ

Team Udayavani, Jan 31, 2022, 7:24 PM IST

ಬಡವರಿಗೆ ಮನೆ, ನಿವೇಶನ ಹಂಚಿಕೆಗೆ ಕಾನೂನು ಸರಳೀಕರಣ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಡವರಿಗೆ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜೀವ್‌ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಅರ್ಹ ಫ‌ಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು. ಕಾನೂನುಬದ್ಧವಾಗಿ ಬಡಾವಣೆಗಳು ಅಭಿವೃದ್ಧಿಯಾಗದಿದ್ದರೆ, ಮೂಲಭೂತ ಸೌಕರ್ಯಗಳ ಕೊರತೆಗಳಿರುವ ಕಂದಾಯ ನಿವೇಶಗಳು ದೊಡ್ಡ ಸಂಖ್ಯೆಯಲ್ಲಿ ಹೆಚ್ಚಾಗುತ್ತವೆ. ಈ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಬಡವರಿಗೆ ಮನೆ, ನಿವೇಶನ ಪಡೆಯಲು ಸರ್ಕಾರ ಕಾನೂನಿನ ಸರಳೀಕರಣ ಮಾಡಲಿದೆ ಎಂದರು.

ಸಾಮಾಜಿಕ ಸವಾಲು: ನಗರ ಪ್ರದೇಶಗಳಲ್ಲಿ ವಸತಿ ಕಲ್ಪಿಸುವುದು ಬಹಳ ಮುಖ್ಯವಾಗಿದೆ. ಆದರೆ, ನಗರ ಪ್ರದೇಶದಲ್ಲಿ ನಿವೇಶನ ಮತ್ತು ವಸತಿ ಪಡೆದುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಇದೊಂದು ಸಾಮಾಜಿಕ ಸವಾಲಾಗಿದೆ. ಯಾರಿಗಾದರೂ ಗೌರವಯುತವಾಗಿ ಬದುಕಲು ಅನ್ನ ನೀರಿನ ಜೊತೆಗೆ ಸೂರು ಇರಲೇಬೇಕು. ಈ ಯೋಜನೆಯನ್ನು ಸಾಕಾರಗೊಳಿಸಲು ಛಲತೊಟ್ಟಿರುವ ವಸತಿ ಸಚಿವರ ಶ್ರಮವನ್ನು ಮುಖ್ಯಮಂತ್ರಿಗಳು ಶ್ಲಾ ಸಿದರು.

ಕಂತಿನಲ್ಲಿ ಹಣ: 46 ಸಾವಿರ ಮನೆಗಳನ್ನು ಫ‌ಲಾನುಭವಿಗಳಿಗೆ ಹಂಚಬೇಕು. ಉಳಿದ 64 ಸಾವಿರ ಮನೆಗಳಿಗೂ ಆಯ್ಕೆ ಪ್ರಕ್ರಿಯೆ ಪ್ರಾರಂಭ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಪ್ರಾರಂಭದಲ್ಲಿ ಹಣ ನೀಡಿದರೆ ಬಡ್ಡಿ ಹೆಚ್ಚಾಗುತ್ತದೆ ಎಂಬ ಅಭಿಪ್ರಾಯ ಫ‌ಲಾನುಭವಿಗಳಿಂದ ವ್ಯಕ್ತವಾಗಿದ್ದು, ಕಂತಿನಲ್ಲಿ ಹಣ ಪಡೆಯುವ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಒಂದು ಲಕ್ಷ ಮನೆಗಳನ್ನು ಮುಂದಿನ ಡಿಸೆಂಬರ್‌ ಒಳಗೆ ಮುಗಿಸಬೇಕು. ಇದು ಯಶಸ್ವಿಯಾದರೆ ಮತ್ತೂಂದು ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.

ಟೌನ್ಶಿಪ್‌ ನಿರ್ಮಾಣ:
ಬಡವರಿಗಾಗಿ ಸ್ಯಾಟಿಲೈಟ್‌ ಟೌನ್‌ಶಿಪ್‌ ನಿರ್ಮಿಸಲು ಯೋಜನೆ ಸಿದ್ಧಮಾಡಿ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ರಸ್ತೆ ಸಂಪರ್ಕ ಕಲ್ಪಿಸಿ, ಟೌನ್‌ಶಿಪ್‌ ಸ್ವಾವಲಂಬಿಯಾಗಿರುವಂತೆ ಮಾಡಬೇಕೆಂದು ಸೂಚಿಸಿದರು.

ವಸತಿ ಕ್ರಾಂತಿ:
4 ಲಕ್ಷ ಗ್ರಾಮೀಣ ಮನೆಗಳು, ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆ, 97 ಸಾವಿರ ಮನೆಗಳನ್ನು ಕೊಳಗೇರಿಗಳಲ್ಲಿ ಪ್ರಾರಂಭ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಹೆಚ್ಚಿನ ಮನೆಗಳಾಗಲಿವೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ವಸತಿ ಕ್ರಾಂತಿ ಆಗಲಿದೆ. ನಿಗದಿತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡು ಬಡವರ ತಲೆಯೆ ಮೇಲೆ ಸೂರು ಕಲ್ಪಿಸೋಣ ಎಂದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ 46,499 ಮನೆಗಳನ್ನು ಪೂರ್ಣಗೊಳಿಸಿ ಫ‌ಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 6 ಸಾವಿರ ಮನೆಗಳು ಶೇ 100ರಷ್ಟು ಪೂರ್ಣಗೊಂಡಿವೆ ಎಂದರು. ಫ‌ಲಾನುಭವಿಗಳು ಒಟ್ಟಿಗೆ ಹಣ ಕಟ್ಟಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಂದೆ ಬಾರದ ಕಾರಣ ಯೋಜನೆ ಸ್ವಲ್ಪ ತಡವಾಗಿದೆ ಎಂದರು.

ಸಭೆಯಲ್ಲಿ ಪೌರಾಡಳಿತ ಸಚಿವ ಎಂ.ಟಿ. ಬಿ.ನಾಗರಾಜ್, ಬಿ.ಡಿ.ಎ. ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್‌.ಅನಿಲ್‌ ಕುಮಾರ್‌, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ರವಿಶಂಕರ್‌, ವ್ಯವಸ್ಥಾಪಕ ನಿರ್ದೇಶಕ ಡಾ: ಬಸವರಾಜು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.