![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 12, 2021, 12:56 PM IST
ಮಂಗಳೂರು ; ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಅರೋಗ್ಯ ತಪಾಸಣೆ ನಡೆಸಲು ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಎಸ್ ಡಿಆರ್ ಎಫ್ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ 32 ಬೆಡ್ ಗಳ ಮೆಡಿಸಿನ್ ವಿಭಾಗ ಮತ್ತು ಐಸಿಯು ಘಟಕ ಉದ್ಘಾಟಿಸಿ ಮಾತನಾಡಿದ ಅವರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಅರೋಗ್ಯ ಇಲಾಖೆ, ಜಿಲ್ಲಾಡಳಿತ ಸೇರಿ ವೆಂಟಿಲೇಟರ್, ಮೊನಿಟರ್ ಸೇರಿದಂತೆ ಉತ್ತಮವಾದ ಐಸಿಯು ಘಟಕವನ್ನು ನಿರ್ಮಾಣ ಮಾಡಲಾಗಿದ್ದು, ಇದೆ ರೀತಿಯಲ್ಲಿ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಆಧುನಿಕ ಘಟಕಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದೇವೆ ಯಾವುದೇ ಪರಿಸ್ಥಿತಿ ಬಂದರು ಅದನ್ನು ಎದುರಿಸಲು ಅರೋಗ್ಯ ಇಲಾಖೆ ಸನ್ನದ್ಧರಾಗಬೇಕು ಎಂದರು.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲಬಹುದು ಎಂಬ ದೃಷ್ಟಿಯಿಂದ ಈಗಾಗಲೇ ಉಡುಪಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ವಾತ್ಸಲ್ಯ ಎನ್ನುವ ಯೋಜನೆಯನ್ನು ಮಾಡಿದ್ದು ಇದರಲ್ಲಿ ಮಕ್ಕಳಿಗೆ ಸಂಪೂರ್ಣ ಅರೋಗ್ಯ ತಪಾಸಣೆ ನಡೆಸುವುದು, ಅವರ ಪೌಷ್ಟಿಕ ಆಹಾರದ ಕೊರತೆ ಕುರಿತು ಸಂಪೂರ್ಣ ತಪಾಸಣೆ ನಡೆಸುವುದು ಒಂದು ವೇಳೆ ಏನಾದರು ತೊಂದರೆ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಮಾಡಬೇಕು, ಅಲ್ಲದೆ ಈ ಕುರಿತಾಗಿ ಬೆಂಗಳೂರಿಗೆ ತೆರಳಿದ ಕೂಡಲೇ ಎಲ್ಲಾ ಜಿಲ್ಲೆಗಳಲ್ಲೂ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ :ಕೋಟಕ್ ಮಹೀಂದ್ರಾ ಬ್ಯಾಂಕ್ ಪರಿಚಯಿಸಿದೆ ಸ್ಮಾರ್ಟ್ ಇಎಂಐ.!? ಮಾಹಿತಿ ಇಲ್ಲಿದೆ
ಈಗಾಗಲೇ ವೆನ್ಲಾಕ್ ಆಸ್ಪತ್ರೆಯಲ್ಲಿರುವ 32 ಬೆಡ್ ಗಳ ಪೈಕಿ 50% ಮಕ್ಕಳ ಐಸಿಯು ಘಟಕಕ್ಕೆ ಅವಕಾಶ ಕಲ್ಪಿಸಲು ನಿರ್ದೇಶನ ನೀಡಲಾಗಿದೆ ಎಂದ ಅವರು ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಐಸಿಯು ಘಟಕ ನಿರ್ಮಾಣಕ್ಕೆ ಆದೇಶ ಹೊರಡಿಸುವುದಾಗಿ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಗಳ ಕುರಿತು ಸಂಪೂರ್ಣ ಪರಿಶೀಲನೆ ಮಾಡುವ ಉದ್ದೇಶದಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು ಇದನ್ನು ಸಂಪೂರ್ಣ ಕಡಿಮೆ ಮಾಡಬೇಕ್ಕೆನ್ನುವುದು ಸರಕಾರದ ಉದ್ದೇಶ ಎಂದು ಹೇಳಿದ್ದಾರೆ. ಅದೇ ರೀತಿ ಗಡಿ ಜಿಲ್ಲೆಗಳಲ್ಲಿಯೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದ್ದು ಅದರಂತೆ ನೆರೆ ರಾಜ್ಯಗಳಿಂದ ಬರುವ ಜನರಿಂದ ಕೋವಿಡ್ ವರದಿಯನ್ನು ಕಡ್ಡಾಯಗೊಳಿಸಬೇಕು ಎಂದು ತಿಳಿಸಿದ್ದಾರೆ. ಈ ಕುರಿತಂತೆ ರಾಜ್ಯದ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.
ಮೀನುಗಾರಿಕೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಸಚಿವ ಸುನೀಲ್ ಕುಮಾರ್ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.