ಆರ್ಥಿಕ ಸ್ವಾಯತ್ತತೆಗೆ ಬಜೆಟ್‌ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ

Team Udayavani, Nov 18, 2021, 9:00 PM IST

ಆರ್ಥಿಕ ಸ್ವಾಯತ್ತತೆಗೆ ಬಜೆಟ್‌ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ

ಶಿಮ್ಲಾ: ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪûಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಬಜೆಟ್‌ನಲ್ಲಿ ಪ್ರತ್ಯೇಕ ಹಣ ಮೀಸಲಿಡಬೇಕೆಂದು ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.

ಶಿಮ್ಲಾದಲ್ಲಿ ನಡೆದ ಎರಡು ದಿನಗಳ 82ನೇ ಅಖೀಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಸಮ್ಮೇಳನದ ನಿರ್ಣಯ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಮಂಡಲದ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ನೀಡುವ ಕುರಿತು ಸಮ್ಮೇಳನ ಪೂರಕ ನಿರ್ಣಯ ಸ್ವೀಕರಿಸಿ, ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕಸಭಾಧ್ಯಕ್ಷರು ನಿರ್ಣಯ ಅಂಗೀಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೂಡಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.

ಇ- ವಿಧಾನ್‌ ತಂತ್ರಜ್ಞಾನ ಅಳವಡಿಕೆಗೆ ಮನವಿ:
ವಿಧಾನ ಮಂಡಲದ ದೈನಂದಿನ ಕಾರ್ಯಚಟುವಟಿಕೆ ಹಾಗೂ ಆಡಳಿತವನ್ನು ಕಾಗದ ರಹಿತವನ್ನಾಗಿಸಲು ಇ-ವಿಧಾನ್‌ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳುವುದು ಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಭೆ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿತು.

ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಮತ್ತು ಎರಡು ದಿನಗಳ ಸಮ್ಮೇಳನದ ಎಲ್ಲಾ ನಿರ್ಣಯಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಮನವಿ ಮಾಡಿದರು.

ಸಭಾಪತಿಗಳ ಮನವಿಗೆ ಸಹಮತ ವ್ಯಕ್ತಪಡಿಸಿದ ಓಂ ಬಿರ್ಲಾ, ದೇಶದ ಎಲ್ಲಾ ವಿಧಾನ ಮಂಡಲಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಪಾರದರ್ಶಕ ಹಾಗೂ ಸುಗಮ ಕಲಾಪಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ ಸಿಂಗ್‌ ಮಾತನಾಡಿ, ಮೊದಲ ಪೀಠಾಸೀನಾಧಿಕಾರಿಗಳ ಸಮ್ಮೇಳನ 1921ರಲ್ಲಿ ಮತ್ತು ಶತಮಾನತದ ಸಮ್ಮೇಳನ ಎರಡೂ ಕೂಡ ಹಿಮಾಚಲ ಪ್ರದೇಶದಲ್ಲಿಯೇ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.

ಇದನ್ನೂ ಓದಿ : ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೆಕರ್, ಎರಡು ದಿನಗಳ ಸಮ್ಮೇಳನ ಫ‌ಲಪ್ರದವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಮಾಚಲ ಪ್ರದೇಶದ ವಿಧಾನಸಭಾ ಸ್ಪೀಕರ್‌ ವಿಪಿನ್‌ ಸಿಂಗ್‌ ಪರಮಾರ್‌ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.