ರಸ್ತೆಯಲ್ಲಿ ಸಿಕ್ಕಿದ 10ಸಾವಿರ ರೂ. ಮರಳಿಸಿದ ವಿದ್ಯಾರ್ಥಿನಿಯರು :ಶಿಕ್ಷಣ ಸಚಿವರಿಂದ ಪ್ರಶಂಸೆ
Team Udayavani, Jan 7, 2022, 8:15 AM IST
ಬಸ್ರೂರು : ಕೋಣಿ ಪ್ರೌಢಶಾಲೆಯ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ರೂ. ಹಣವನ್ನು ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರು ಹಣ ಕಳೆದುಕೊಂಡ ಸುಲೇಖಾ ಅವರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಮುಖ್ಯೋಪಾಧ್ಯಾಯ ವಿದ್ವಾನ್ ಮಾಧವ ಅಡಿಗ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಹಣ ಕಳೆದುಕೊಂಡ ಸುಲೇಖಾ ಅವರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿತಿಂಡಿ ಕೊಟ್ಟು ಕೃತಜ್ಞತೆ ಅರ್ಪಿಸಿದ್ದಾರೆ.
ಶಿಕ್ಷಣ ಸಚಿವರ ಪ್ರಶಂಸೆ
ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲಕರಿಗೆ ಹಿಂದಿರುಗಿಸಿದ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರ ಪ್ರಾಮಾಣಿಕತೆ ಪ್ರಶಂಸನೀಯ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟರ್‌ನಲ್ಲಿ ಅಭಿನಂದಿಸಿದ್ದಾರೆ.
ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲೀಕರಿಗೆ ಹಿಂತಿರುಗಿಸಿದ ಕುಂದಾಪುರ ತಾಲ್ಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ರವರ ಪ್ರಾಮಾಣಿಕತೆ ಪ್ರಶಂಸನೀಯ. https://t.co/D98NKA7grp
— B.C Nagesh (@BCNagesh_bjp) January 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.