ಕೋವಿಡ್ ಸ್ವ್ಯಾಬ್ ಸಂಗ್ರಹಣೆಗೆ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಬಳಸಲು ಪಾಲಿಕೆ ನಿರ್ಧಾರ
Team Udayavani, Aug 1, 2020, 6:30 PM IST
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಪರೀಕ್ಷೆಗೆ ಗಂಟಲು ದ್ರವ (ಸ್ವ್ಯಾಬ್) ಸಂಗ್ರಹಣೆಗೆ ಸಿಬ್ಬಂದಿ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಕಾರ್ಯಕ್ಕೆ ನಗರದಲ್ಲಿನ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಸೂಕ್ತ ಸುರಕ್ಷತಾ ಕ್ರಮ ಅನುಸರಿಸಿ, ಸ್ವ್ಯಾಬ್ ಸಂಗ್ರಹಣೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಅವರಿಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಪತ್ರ ಬರೆದಿದ್ದಾರೆ.
ಸ್ವ್ಯಾಬ್ ಸಂಗ್ರಹಣಾ ಘಟಕಗಳನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೆ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಕಾಲೇಜುಗಳಿಂದ ನಿಯೋಜಿಸುವಂತೆ ಕೋರಿದ್ದು, ಸ್ವ್ಯಾಬ್ ಸಂಗ್ರಹಣೆಗೆ ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಮಾಸಿಕ 14 ಸಾವಿರ ರೂ. ಗೌರವಧನ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳು ವಾಸವಿರುವ ವಾರ್ಡ್ಗಳಲ್ಲಿಯೇ ಈ ಸೇವೆಗೆ ಬಳಸಿಕೊಳ್ಳಲಾಗುವುದು.
ಸ್ಥಳೀಯ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ವಾಹನ ವ್ಯವಸ್ಥೆ ಸಹ ಇರಲಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.