ಕಾಂಗ್ರೆಸ್ ನಾಯಕರು ತಮಿಳುನಾಡು ವಿರುದ್ಧ ಪ್ರತಿಭಟನೆ ಮಾಡಲಿ : ಬಿ.ಸಿ. ಪಾಟೀಲ್ ಸವಾಲು
Team Udayavani, Jan 12, 2022, 3:02 PM IST
ಕಲಬುರಗಿ: ಮೇಕೆದಾಟು ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನಮ್ಮ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ಪಾದಯಾತ್ರೆ ನಡೆಸುವ ಬದಲು ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸವಾಲು ಹಾಕಿದರು.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಯೋಜನೆ ಜಾರಿಗೆ ಏನು ಮಾಡಬೇಕೋ ಅದನ್ನು ಮಾಡಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಅನಗತ್ಯವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ . ಈಗಾಗಲೇ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಡಿಕೆಶಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಕಾನೂನು ಮುಂದೆ ಎಲ್ಲರೂ ಸಮಾನರು ಎಂಬುದನ್ನು ಅರಿಯಲಿ. ಪಾದಯಾತ್ರೆಗೆ ಸರ್ಕಾರ ಹೆದರುವ ಪ್ರಶ್ನೆಯೇ ಇಲ್ಲ ಎಂದರು.
ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಲು ಡಿ.ಕೆ.ಶಿವಕುಮಾರ್ ದುಡ್ಡು ಖರ್ಚು ಮಾಡಿ ಪಾದಯಾತ್ರೆ ನಡೆಸುತ್ತಿದ್ದಾರೆ. ಮೇಕೆದಾಟು ಬಗ್ಗೆ ಇಷ್ಟೊಂದು ಆಸಕ್ತಿ ವಹಿಸಿರುವ ಕಾಂಗ್ರೆಸ್ ನವರು ಹಿಂದೆ ಸೋನಿಯಾ ಗಾಂಧಿ ಅವರು ಮಹದಾಯಿಯಲ್ಲಿ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಕೊಡುವುದಿಲ್ಲ ಎಂದಾಗ ಏಕೆ ಮೌನವಾಗಿದ್ದರು. ಕಾವೇರಿ ಬಗ್ಗೆ ಇರುವ ಆಸಕ್ತಿ ಮಹದಾಯಿ, ಕೃಷ್ಣಾಕ್ಕೆ ಇಲ್ಲವೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಹುಬ್ಬಳ್ಳಿ: ಖಾಸಗಿ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಕಲಬುರಗಿ ನಗರದಲ್ಲಿ ಕೃಷಿ ಇಲಾಖೆಯ ವತಿಯಿಂದ ₹ 9.80 ಕೋಟಿ ವೆಚ್ಚದಲ್ಲಿ ಶೀಥಲೀಕರಣ ಘಟಕಕ್ಕೆ ಮಂಜೂರಾತಿ ದೊರಕಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದು ಕಲ್ಯಾಣ ಕರ್ನಾಟಕದ ದೊಡ್ಡ ಶಿಥಲೀಕರಣವಾಗಲಿದೆ ಎಂದು ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.