ಉಡುಪಿ : ಬ್ಲಾಕ್‌ ಫಂಗಸ್ ಚಿಕಿತ್ಸೆಗೆ ಬೆಡ್‌ಗಳನ್ನು ಮೀಸಲಿಡಿ: ಸಚಿವ ಬೊಮ್ಮಾಯಿ ಸೂಚನೆ

ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ

Team Udayavani, May 24, 2021, 7:44 PM IST

ಉಡುಪಿ : ಬ್ಲಾಕ್‌ ಫಂಗಸ್ ಚಿಕಿತ್ಸೆಗೆ ಬೆಡ್‌ಗಳನ್ನು ಮೀಸಲಿಡಿ: ಸಚಿವ ಬೊಮ್ಮಾಯಿ

ಉಡುಪಿ : ಜಿಲ್ಲೆಯಲ್ಲಿ ಬ್ಲಾಕ್‌ ಫ‌ಂಗಸ್‌ ರೋಗಕ್ಕೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳನ್ನು ಮೀಸಲಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಬೆಂಗಳೂರಿನ ವಿಕಾಸಸೌಧದಿಂದ ಜಿಲ್ಲೆಯ ಕೋವಿಡ್‌ ಸ್ಥಿತಿಗತಿ ಕುರಿತು ಸೋಮವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಬ್ಲಾಕ್‌ ಫ‌ಂಗಸ್‌ ರೋಗದಿಂದ ಒಬ್ಬರು ಮೃತಪಟ್ಟಿದ್ದು, ಒಂದು ರೋಗಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿಯೇ ಬ್ಲಾಕ್‌ ಫ‌ಂಗಸ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ 10 ಹಾಸಿಗೆಯ ಕೊಠಡಿಯನ್ನು ಕೂಡಲೇ ಸಿದ್ಧಪಡಿಸುವಂತೆ ಸಚಿವರು ಸೂಚನೆ ನೀಡಿದರು. ಬ್ಲಾಕ್‌ ಫ‌ಂಗಸ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಶೀಘ್ರದಲ್ಲಿಯೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು. ಜಿಲ್ಲೆಗೆ ಹೊರಜಿಲ್ಲೆಗಳಿಂದಲೂ ಬ್ಲಾಕ್‌ ಫ‌ಂಗಸ್‌ ಚಿಕಿತ್ಸೆಗೆ ರೋಗಿಗಳು ಆಗಮಿಸುತ್ತಿದ್ದು, ಹೆಚ್ಚಿನ ಔಷಧವನ್ನು ಸರಬರಾಜು ಮಾಡಲಾಗುವುದು ಎಂದರು.

ಖಾಸಗಿ ಆಸ್ಪತ್ರೆಗೆ ನಿರ್ದೇಶನ ನೀಡುವಂತೆ ಸೂಚನೆ
ಕೋವಿಡ್‌ ಚಿಕಿತ್ಸೆಗೆ ದಾಖಲಾಗುವ ಎಲ್ಲ ರೋಗಿಗಳಿಗೆ ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಚಿಕಿತ್ಸೆ ದೊರಕಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಚಿವರು, ಈ ಕುರಿತಂತೆ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರಿಗೆ ಸೂಚಿಸಿದರು.

ಇದನ್ನೂ ಓದಿ :‘ಸಿ.ಡಿಯಲ್ಲಿರುವುದು ನಾನೇ’ ತನಿಖಾಧಿಕಾರಿ ಎದುರು ರಮೇಶ್ ಜಾರಕಿಹೊಳಿ ಹೇಳಿಕೆ..!?

ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚಿ
ಜಿಲ್ಲೆಯಲ್ಲಿ ಕೋವಿಡ್‌ ಪರೀûಾ ಫ‌ಲಿತಾಂಶವನ್ನು 24 ಗಂಟೆಯೊಳಗೆ ನೀಡುವಂತೆ ಸೂಚಿಸಿದ ಅವರು, ಇದರಿಂದಾಗಿ ಕೋವಿಡ್‌ ಇತರರಿಗೆ ಹರಡುವುದನ್ನು ತಪ್ಪಿಸಲು ಹಾಗೂ ರೋಗವನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ, ಸೋಂಕಿತರನ್ನು ಅಗತ್ಯ ಚಿಕಿತ್ಸೆಗೆ ಒಳಪಡಿಸುವುದರಿಂದ ಸಾವುಗಳು ಸಂಭವಿಸುವುದನ್ನು ತಡೆಯಲು ಸಾಧ್ಯವಾಗಲಿದೆ. ಸೋಂಕಿತರ ದ್ವಿತೀಯ ಸಂಪರ್ಕಿತರನ್ನು ರ್ಯಾಟ್‌ ಮೂಲಕ ಪರೀಕ್ಷಿಸುವಂತೆ ಸೂಚನೆ ನೀಡಿದ ಅವರು, ಇದರಿಂದಾಗಿ ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲು ಸಾಧ್ಯವಾಗಲಿದೆ ಎಂದರು.

ಕಾರ್ಯಪಡೆ ಸಕ್ರಿಯವಾಗಲಿ
ಕೋವಿಡ್‌ ನಿರ್ವಹಣೆ ಕುರಿತಂತೆ ರಚಿಸಲಾಗಿರುವ ಗ್ರಾಮೀಣ ಕಾರ್ಯಪಡೆಗಳು ಇನ್ನೂ ಹೆಚ್ಚು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಸೋಂಕಿತರ ಮನೆ ಭೇಟಿಯ ಸಮಯದಲ್ಲಿ ಕಡ್ಡಾಯವಾಗಿ ಪಲ್ಸ್‌ ಆಕ್ಸಿಮೀಟರ್‌ ಮೂಲಕ ಪರಿಶೀಲಿಸಬೇಕು. 93ಶೇ. ಕಡಿಮೆ ಇದ್ದವರನ್ನು ಕೂಡಲೇ ಆಸ್ಪತ್ರೆಗಳಿಗೆ ಹಾಗೂ 93 ರಿಂದ 95ಶೇ. ಒಳಗೆ ಇರುವವನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆ್ಯಂಬುಲೆನ್ಸ್‌ ಸಿದ್ದವಾಗಿಟ್ಟುಕೊಳ್ಳಿ
ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಎರಡು ಪಾಳಿಯಲ್ಲಿ ಕಾರ್ಯನಿರ್ವಹಿಸಲು ವೈದ್ಯರು, ಶುಶ್ರೂಷಕರು ಮತ್ತು ಸಹಾಯಕ ಸಿಬಂದಿಗಳನ್ನು ನಿಯೋಜಿಸುವಂತೆ ಸೂಚಿಸಿದ ಸಚಿವರು, 2 ಪಾಳಿಯಲ್ಲಿ ರೋಗಿಗಳ ಆರೋಗ್ಯ ವಿಚಾರಿಸಿ, ಅಗತ್ಯ ಔಷಧಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲು ಆ್ಯಂಬುಲೆನ್ಸ್‌ ಸಿದ್ಧವಾಗಿಟ್ಟುಕೊಳ್ಳಬೇಕು. ಆಕ್ಸಿಜನ್‌ ಕಾನ್ಸ್‌ನ್‌ಟ್ರೇಟರ್‌ಗಳನ್ನು ಅಳವಡಿಸಿ ಎಂದು ಸೂಚನೆ ನೀಡಿದರು.

ಸ್ಥಿತಿಗತಿ ಪರಿಶೀಲಿಸಿ
ಜಿಲ್ಲಾಧಿಕಾರಿ ಮತ್ತು ಜಿ.ಪಂ.ಸಿಇಒ ಅವರು, ಗ್ರಾಮೀಣ ಪ್ರದೇಶದಲ್ಲಿ ಸೋಂಕಿತ ಗ್ರಾಮಗಳ ಭೇಟಿ ಮಾಡಿ ಪರಿಶೀಲನೆ ನಡೆಸುವುದರ ಜತೆಗೆ ಪ್ರತೀದಿನ 5 ಗ್ರಾಮಗಳ ಪಿಡಿಒಗಳು ಮತ್ತು ಸಂಬಂಧಪಟ್ಟ ತಹಸೀಲ್ದಾರ್‌ ಜತೆ ವಿಡಿಯೋ ಕಾನ್ಫರೆನ್‌ ಮೂಲಕ ಅಲ್ಲಿನ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಅಗತ್ಯವಿರುವ ಸೂಚನೆಗಳನ್ನು ನೀಡಬೇಕು ಎಂದು ಸಚಿವರು ಸೂಚಿಸಿದರು.

ಅನುದಾನ ಶೀಘ್ರ ಬಿಡುಗಡೆಯಾಗಲಿ
ಸಭೆಯಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಪ್ರತಾಪ್‌ ಚಂದ್ರ ಶೆಟ್ಟಿ, ಗ್ರಾ.ಪಂ.ಗಳಿಗೆ 50 ಸಾವಿರ ರೂ.ಗಳ ಕೋವಿಡ್‌ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕು. ಗ್ರಾಮೀಣ ಕೋವಿಡ್‌ ಕಾರ್ಯಪಡೆಗಳಲ್ಲಿ ಮಾಜಿ ಜನಪ್ರತಿನಿಧಿಗಳು ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ವಿತರಣೆಯನ್ನು ನಿಖರ ದಿನಾಂಕದಂದು ಕ್ರಮಬದ್ಧವಾಗಿ ಆಯೋಜಿಸಬೇಕು. ಎಲ್ಲ ಕೋವಿಡ್‌ ರೋಗಿಗಳಿಗೆ ಆಯುಷ್ಮಾನ್‌ ಯೋಜನೆಯಡಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರಿನ ವಿಕಾಸಸೌಧದಿಂದ ಶಾಸಕ ರಘುಪತಿ ಭಟ್‌ ಭಾಗವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್‌, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಪ್ರಶಾಂತ ಭಟ್‌ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.