Kundapura ಬೀಜಾಡಿ: ಕಾರು ಪಲ್ಟಿ; ಚಾಲಕ ಪಾರು
Team Udayavani, Jul 13, 2024, 1:18 AM IST
ಕುಂದಾಪುರ: ಎದುರಿನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯು ವುದನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರೊಂದು ಡಿವೈಡರ್ಗೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಶುಕ್ರವಾರ ಸಂಜೆ ಬೀಜಾಡಿಯಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಉಡುಪಿ ಕಡೆಯಿಂದ ಜಡ್ಕಲ್ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ.
ಬೀಜಾಡಿಯಲ್ಲಿ ಎದುರಿನಿಂದ ಸಂಚರಿಸುತ್ತಿದ್ದ ವ್ಯಾಗನರ್ ಕಾರಿನ ಚಾಲಕ ಬ್ಯಾರಿಕೇಡ್ ಇತ್ತೆಂದು ಬ್ರೇಕ್ ಹಾಕಿದ್ದಾರೆ. ಇದರ ಹಿಂದೆ ಸಂಚರಿಸುತ್ತಿದ್ದ ಕಾರು ವೇಗವಾಗಿ ಬರುತ್ತಿದ್ದ ಕಾರಣ, ಅದರ ಚಾಲಕ ಸಹ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಆ ಕಾರು ಡಿವೈಡರ್ಗೆ ಢಿಕ್ಕಿಯಾಗಿ, ಪಲ್ಟಿಯಾಗಿ, ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಟೆಂಪೋಗೆ ಢಿಕ್ಕಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.