Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸುದೀರ್ಘ ಪತ್ರ
, Dec 27, 2024, 3:20 AM IST
ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಪರಂಪರೆಯನ್ನು ಉಳಿಸಿ ಮುಂದುವರಿಸಿಕೊಂಡು ಹೋಗಲು ನಾವೆಲ್ಲ ಮತ್ತೊಮ್ಮೆ ಬದ್ಧರಾಗಬೇಕಿದ್ದು, ಗಾಂಧಿ ವಿರೋಧಿ ಶಕ್ತಿಗಳನ್ನು ಪ್ರತಿರೋಧಿಸುವ ನಿಟ್ಟಿನಲ್ಲಿ ನಾವೆಲ್ಲರೂ ವೈಯಕ್ತಿಕವಾಗಿ ಹಾಗೂ ಸಾಮೂಹಿಕವಾಗಿ ನಿರ್ಣಯ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ನ ಮಹಾಧಿವೇಶನದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಿರುವ ಅವರು, ಈ ಐತಿಹಾಸಿಕ ಸಮಾರಂಭದಲ್ಲಿ ನಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದೇ ಸ್ಥಳದಲ್ಲಿ ನೂರು ವರ್ಷಗಳ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39ನೇ ಅಧಿವೇಶನ ನಡೆದಿತ್ತು. ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸುವ ಮೂಲಕ ಪಕ್ಷ ಹಾಗೂ ಸ್ವತಂತ್ರ ಚಳವಳಿಯ ದಿಕ್ಕನ್ನು ಬದಲಿಸಿದರು. ನಮ್ಮ ದೇಶದ ಚರಿತ್ರೆಯಲ್ಲೇ ಇದು ಪರಿವರ್ತನೆಯ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಗಾಂಧಿ ಪರಂಪರೆಗೆ ಬೆದರಿಕೆ
ಮಹಾತ್ಮ ಗಾಂಧೀಜಿ ಅವರು ಅಂದಿನ ಪೀಳಿಗೆಯ ನಮ್ಮ ನಾಯಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರು ನಮ್ಮೆಲ್ಲರ ಮೂಲಭೂತ ಪ್ರೇರಣಾಶಕ್ತಿ. ನಾವಿಂದು ಮಹಾತ್ಮ ಗಾಂಧೀಜಿ ಅವರ ಪರಂಪರೆಯನ್ನು ಉಳಿಸಿಕೊಳ್ಳುವ, ಸಂರಕ್ಷಿಸಿ ಮುಂದುವರಿಸಿಕೊಂಡು ಹೋಗಲು ಮತ್ತೂಮ್ಮೆ ಬದ್ಧರಾಗಬೇಕಿದೆ ಎಂದು ಕರೆ ನೀಡಿದ್ದಾರೆ.
ದಿಲ್ಲಿಯಲ್ಲಿ ಯಾರು ಅಧಿಕಾರದಲ್ಲಿದ್ದಾರೋ ಅವರಿಂದ ಗಾಂಧಿ ಪರಂಪರೆಗೆ ಬೆದರಿಕೆ ಇದೆ. ಅಲ್ಲದೆ, ಅವರ ಸಿದ್ಧಾಂತ ಹಾಗೂ ಅವರು ಪೋಷಣೆ ಮಾಡುತ್ತಿರುವ ಸಂಸ್ಥೆಗಳಿಂದಲೂ ಬೆದರಿಕೆ ಇದೆ. ಈ ಸಂಸ್ಥೆಗಳು ಎಂದಿಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಬದಲಿಗೆ ಮಹಾತ್ಮ ಗಾಂಧಿಯನ್ನು ಕಟುವಾಗಿ ವಿರೋಧಿಸಿದ್ದಾರೆ. ಅವರನ್ನು ಕೊಲ್ಲುವ ಹಂತಕ್ಕೆ ಒಯ್ಯಬಲ್ಲ ವೈಷಮ್ಯದ ವಾತಾವರಣ ಸೃಷ್ಟಿಸಿದರಲ್ಲದೆ, ಗಾಂಧಿ ಕೊಂದವರನ್ನು ವೈಭವೀಕರಿಸಲಾಗುತ್ತಿದೆ.
ಗಾಂಧಿ ಸಂಸ್ಥೆಗಳಿಗೆ ದೌರ್ಜನ್ಯ
ದೇಶದಲ್ಲಿರುವ ಗಾಂಧಿ ಸಂಸ್ಥೆಗಳು ಇಂದು ದೌರ್ಜನ್ಯಕ್ಕೊಳಗಾಗುತ್ತಿವೆ. ಇಂತಹ ಶಕ್ತಿಗಳನ್ನು ಪ್ರತಿರೋಧಿಸುವ ನಿಟ್ಟಿನಲ್ಲಿ ನಮ್ಮ ನಿರ್ಣಯವನ್ನು ಬಲಗೊಳಿಸುವ ಹಾಗೂ ರಾಜಿಯಾಗದ ನಿಲುವ ತಳೆಯುವ ಪವಿತ್ರ ಕಾರ್ಯವನ್ನು ನಾವೆಲ್ಲರೂ ಮಾಡಬೇಕಿದೆ. ನಾವೆಲ್ಲರೂ ವೈಯಕ್ತಿಕವಾಗಿ ಹಾಗೂ ಸಾಮೂಹಿಕವಾಗಿ ನಿರ್ದಿಷ್ಟ ಉದ್ದೇಶ ಮತ್ತು ಸಮರೋಪಾದಿಯಲ್ಲಿ ಸವಾಲುಗಳನ್ನು ಎದುರಿಸುವ ನಿರ್ಣಯಗಳನ್ನು ಈ ಸಭೆಯಲ್ಲಿ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.