Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
ಶಹಾಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದ ಯುವಕ, ಆರೋಪಿಗಳಿಂದ 10 ಲಕ್ಷ ರೂ., 3 ದ್ವಿ ಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು
Team Udayavani, Sep 25, 2024, 10:09 PM IST
ಬೆಳಗಾವಿ: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಹಣ ದೋಚಿದ್ದ ಗ್ಯಾಂಗ್ ಅನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು 10 ಲಕ್ಷ ರೂ. ನಗದು ಹಾಗೂ ಮೂರು ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.
ಶಹಾಪುರ ಬಸವಣ ಗಲ್ಲಿಯ ವಿದ್ಯಾರ್ಥಿನಿ ದಿವ್ಯಾ (23), ಪ್ರಶಾಂತ ಉರೂಫ್ ಸ್ಪರ್ಶ ಕಲ್ಲಪ್ಪ ಕೋಲಕಾರ(25), ಕಣಬರ್ಗಿ ಜ್ಯೋತಿರ್ಲಿಂಗ ಗಲ್ಲಿಯ ಕುಮಾರ ಉರೂಫ್ ಡಾಲಿ ಅರ್ಜುನ ಗೋಕರಕ್ಕನವರ(29) ಕಣಬರ್ಗಿ ವಾಲ್ಮೀಕಿ ಗಲ್ಲಿಯ ರಾಜು ಸಿದ್ರಾಯಿ ಜಡಗಿ(29) ಎಂಬಾತರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಘಟನೆ ಹಿನ್ನೆಲೆ:
ಟಿಳಕವಾಡಿಯ ವಿನಾಯಕ ಸುರೇಶ ಕುರಡೇಕರ ಎಂಬ ಯುವಕ ವಿದ್ಯಾರ್ಥಿನಿಯೊಂದಿಗೆ ಭುಜ ಮುಟ್ಟಿದ್ದ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾಡಿದ ವಿದ್ಯಾರ್ಥಿನಿ ಸೇರಿ ನಾಲ್ವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅಪಹರಣ ಮಾಡಿ 25 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ. 15 ಲಕ್ಷ ರೂ. ಹಣ ಪಡೆದು ಇನ್ನೂ 10 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ಯುವಕ ದೂರು ನೀಡಿದ್ದಾರೆ.
ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಿಕ ಮಾರ್ಗದರ್ಶನದಲ್ಲಿ ಶಹಾಪೂರ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಸ್. ಸಿಮಾನಿ ನೇತೃತ್ವದಲ್ಲಿ ಎಎಸ್‌ಐಗಳಾದ ಬಿ. ಎ. ಚೌಗಲಾ, ಆರ್.ಐ. ಸನದಿ, ನಾಗರಾಜ ಓಸಪ್ಪಗೋಳ, ಶಿವಶಂಕರ ಗುಡದೈಗೋಳ, ಸಿಬ್ಬಂದಿಗಳಾದ ಶ್ರೀಧರ ತಳವಾರ, ಜಗದೀಶ ಹಾದಿಮನಿ, ಸಂದೀಪ ಬಾಗಡಿ, ಸಿದ್ದರಾಮೇಶ್ವರ ಮುಗಳಖೋಡ, ವಿಜಯ ಕಮತೆ, ಕಾವೇರಿ ಕಾಂಬಳೆ, ಪ್ರತಿಭಾ ಕಾಂಬಳೆ ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.