Belagavi: ಕಾಂಗ್ರೆಸ್ ಅಧಿವೇಶನದಿಂದ ಪಕ್ಷದ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್
ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ
Team Udayavani, Dec 17, 2024, 7:52 PM IST
ಬೆಳಗಾವಿ: ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಅದೊಂದೇ ಅವರ ಅಜೆಂಡಾ. ಈಗ ಅವರು ಪ್ರಜಾಸತ್ತಾತ್ಮಕ ಮೌಲ್ಯವನ್ನೇ ಹೈಜಾಕ್ ಮಾಡಲು ಮುಂದಾಗಿದ್ದು ಹೀಗಾಗಿ ಈ ಬಾರಿಯ ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಭಿಪ್ರಾಯಪಟ್ಟರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಬಹಳ ಪ್ರಮುಖವಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಈ ಸಭೆಯನ್ನು ಯಶಸ್ವಿಗೊಳಿಸಲಿದ್ದು, 26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
ಪರಿಶಿಷ್ಟ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಸೇರಿ ಸಾಮಾನ್ಯ ವರ್ಗದ ಬಡವರಿಗೆ ರಕ್ಷಣೆ ಸಿಗಬೇಕು ಎಂಬ ಉದ್ದೇಶದಿಂದ ನಾವು ಜಾತಿಗಣತಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸಾರ್ವಜನಿಕ ಉದ್ದಿಮೆಗಳ ಮಾರಾಟ ಮಾಡಲಾಗುತ್ತಿದೆ. ದೇಶದ ಎಲ್ಲಾ ಆಸ್ತಿಗಳು ಒಬ್ಬ ವ್ಯಕ್ತಿಯ ಕೈಗೆ ಸೇರುತ್ತಿದೆ. ಹೀಗಾಗಿ ಸಮಾನತೆ ಎಂಬುದೇ ದೇಶದಲ್ಲಿ ಇಲ್ಲವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ.
ಈ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು, ಶಾಶ್ವತ ಆಹ್ವಾನಿತರು, ವಿಶೇಷ ಆಹ್ವಾನಿತರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷಗ ನಾಯಕರು, ಸಂಸದೀಯ ಸಮಿತಿ ಸದಸ್ಯರು, ಪಕ್ಷದ ಪ್ರಮುಖ ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.