Belagavi: ವೈದ್ಯ ಸೀಟು ಕೊಡಿಸುವುದಾಗಿ ವಂಚನೆ: ಸೆರೆ
ಬೆಳಗಾವಿಯಲ್ಲಿ ಖೆಡ್ಡಾಕ್ಕೆ ಬಿದ್ದ ತೆಲಂಗಾಣದ ವ್ಯಕ್ತಿ
Team Udayavani, Jul 16, 2024, 7:11 AM IST
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಅಂತಾರಾಜ್ಯ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿ ಸಿ 12 ಲಕ್ಷ ರೂ. ನಗದು ಹಾಗೂ 15 ಕಂಪ್ಯೂಟರ್, ಡೆಬಿಟ್ / ಕ್ರೆಡಿಟ್ ಕಾರ್ಡ್ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಕಲ್ನ ಅರಗೊಂಡ ಅರವಿಂದ ಉರೂಫ್ ಅರುಣ ಕುಮಾರ (47) ಬಂಧಿತ ಆರೋಪಿ. ಬೆಳಗಾವಿ ನಗರದ ಕೃಷ್ಣದೇವರಾಯ ಸರ್ಕಲ್ನಲ್ಲಿ ಅರವಿಂದ ನೀಟ್ ಗೈಡ್ಲೈನ್ಸ್ ಎಂಬ ಸಂಸ್ಥೆ ಆರಂಭಿಸಿದ್ದ ಆತ ಕೆಲವು ಶಿಕ್ಷಕರನ್ನು ನೇಮಿಸಿ ನೀಟ್ ಮಾರ್ಗದರ್ಶನ ನೀಡುತ್ತಿದ್ದ.
ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಹೇಳಿ ಬೇರೆ ಬೇರೆ ಕೋಟಾದಡಿ ಕಡಿಮೆ ಶುಲ್ಕದಲ್ಲಿ ಸೀಟು ಮಾಡಿಕೊಡುವುದಾಗಿ ನಂಬಿಸಿದ್ದ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಡೆಯಿಂದ 1.30 ಕೋಟಿ ರೂ. ವಸೂಲಿ ಮಾಡಿದ್ದಾನೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೆಜಿಗಟ್ಟಲೆ ಚಿನ್ನ ಖರೀದಿಸಿದ್ದ
ಬೇರೆ ಬೇರೆ ಹೆಸರಿನಲ್ಲಿ ಗುರುಸಿಕೊಳ್ಳುತ್ತಿದ್ದ ಆತ ಬೆಳಗಾವಿಯಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಗುರುತಿನ ಚೀಟಿ ನೀಡಿ ಕಚೇರಿ ಬಾಡಿಗೆ ಪಡೆದಿದ್ದ. ಆತನ ಮೇಲೆ ತೆಲಂಗಾಣ, ಬೆಂಗಳೂರು, ಹೈದ್ರಾಬಾದ್ನಲ್ಲೂ ವಂಚನೆ ಮಾಡಿದ್ದಾನೆನ್ನಲಾಗಿದೆ. ಹೈದ್ರಾಬಾದ್ನಲ್ಲಿ 11, ಬೆಂಗಳೂರು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಕೇಸ್ಗಳಿವೆ. ವಂಚಿಸಿರುವ ಹಣದಿಂದ ಕೆಜಿಗಟ್ಟಲೆ ಚಿನ್ನ ಖರೀದಿಸಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.