Bengaluru Rain: ಮನೆ ಬಾಗಿಲು ಮುರಿದಾದ್ರೂ ಕಾರ್ಯಾಚರಣೆ ಮುಂದುವರಿಸಿ: ಡಿಸಿಎಂ ಶಿವಕುಮಾರ್
ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿನ ರಕ್ಷಣಾ ಕಾರ್ಯದ ಮೇಲ್ವಿಚಾರಣೆ ವೇಳೆ ಬಿಬಿಎಂಪಿ ಆಯುಕ್ತ ತುಷಾರ್‌ಗೆ ಸೂಚನೆ
Team Udayavani, Oct 23, 2024, 10:57 PM IST
ಬೆಂಗಳೂರು: ರಾಜಧಾನಿಯಲ್ಲಿ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ ಯಲಹಂಕದ ಕೇಂದ್ರೀಯ ವಿಹಾರ, ಥಣಿಸಂದ್ರ ಮತ್ತು ಸಾಯಿಬಾಬಾ ಲೇಔಟ್ಗೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K.Shivakumar) ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ನಲ್ಲಿನ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದ ವೇಳೆ, ಸುಮಾರು 20 ಮನೆಗಳ ಮಾಲೀಕರು ಒಳಗೆ ಬೀಗ ಹಾಕಿಕೊಂಡು ಸ್ಥಳಾಂತರ ಕಾರ್ಯಾಚರಣೆಗೆ ಸಹಕಾರ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಬಾಗಿಲು ಮುರಿದು ಕಾರ್ಯಾಚರಣೆ ಮುಂದುವರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗೆ ಡಿಸಿಎಂ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮನೆ ಮಾಲೀಕರ ಆರೋಗ್ಯಕ್ಕೆ ಹಾನಿ:
ಮಾಧ್ಯಮದವರ ಉದ್ದೇಶಿಸಿ ಮಾತನಾಡಿದ ಅವರು, ಶೇ.95ರಷ್ಟು ಸ್ಥಳಾಂತರ ಕಾರ್ಯ ಪೂರ್ಣಗೊಂಡಿದ್ದು, ಶೇ.5ರಷ್ಟು ಮಾತ್ರ ಬಾಕಿ ಉಳಿದಿದೆ. “603 ಫ್ಲ್ಯಾಟ್‌ಗಳಲ್ಲಿ ಸಾವಿರಾರು ಜನರ ವಸತಿ ಇದೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಾಗಿದ್ದು ಹೆಚ್ಚಿನವರ ಸ್ಥಳಾಂತರಿಸಲಾಗಿದೆ. “ಅಪಾರ್ಟ್‌ಮೆಂಟ್ ಆಡಳಿತದೊಂದಿಗಿನ ಮಾತುಕತೆ ನಂತರ, ತುರ್ತು ಕಾಮಗಾರಿಗಳಿಂದಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ನ್ನು ಸ್ವಾಧೀನಪಡಿಸಿಕೊಂಡಿದೆ. ನೀರು, ವಿದ್ಯುತ್ ಮತ್ತು ಆಹಾರವಿಲ್ಲದೇ ಮನೆಗಳಿಗೆ ಬೀಗ ಹಾಕಿಕೊಂಡಿರುವ ಸುಮಾರು 20 ಮಂದಿ ಮನೆ ಮಾಲೀಕರ ಆರೋಗ್ಯಕ್ಕೆ ಹಾನಿಯಾಗುವ ಭೀತಿಯಿಂದ ನಿವಾಸಿಗಳ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ರಕ್ಷಿಸುವಂತೆ ಬಿಬಿಎಂಪಿಗೆ ಆದೇಶ ನೀಡಲಾಗಿದೆ” ಎಂದರು.
ನಿವಾಸಿಗಳು ತಮ್ಮ ಮನೆಗಳ ಬಗ್ಗೆ ಭಾವನಾತ್ಮಕವಾಗಿರಬಹುದು ಮತ್ತು ಆದ್ದರಿಂದ ಹೊರಗೆ ಬರಲು ನಿರಾಕರಿಸಬಹುದು ಆದರೆ ಅವರ ಸುರಕ್ಷತೆಯೂ ಮುಖ್ಯ ಎಂದು ಡಿಸಿಎಂ ಹೇಳಿದರು. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗಲು ಹೇಳಲಾಗುವುದು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.
ಎನ್‌ಡಿಎಂಎಫ್‌ನೊಂದಿಗೆ ಮಳೆನೀರು ಚರಂಡಿಗಳ ಸಂಪೂರ್ಣವಾಗಿ ಮರುವಿನ್ಯಾಸಗೊಳಿಸಲು ಕ್ರಮಗಳ ತೆಗೆದುಕೊಳ್ಳಲಾಗುವುದು ಮತ್ತು ವಿಶ್ವಬ್ಯಾಂಕ್‌ನಿಂದ ನೆರವು ಪಡೆಯಲಾಗುವುದು. ಮರುವಿನ್ಯಾಸವನ್ನು ನಗರದಾದ್ಯಂತ ದೊಡ್ಡ ಪ್ರಮಾಣದಲ್ಲಿ ತೆಗೆದುಕೊಳ್ಳಲಾಗುವುದು. ಕೆರೆಗಳ ಪುನಶ್ಚೇತನ ಹಾಗೂ ಒತ್ತುವರಿ ತೆರವು ಮಾಡುತ್ತೇವೆ ಎಂದೂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.