Bengaluru South; ರಾಜಕೀಯಕ್ಕಾಗಿ ರಾಮನಗರ ಹೆಸರು ಬದಲು: ನಿಖಿಲ್ ಕುಮಾರಸ್ವಾಮಿ
ಯಾವುದೇ ಕಾರಣಕ್ಕೂ ನಮ್ಮ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ: ಸುರೇಶ್ ಬಾಬು
Team Udayavani, Jul 28, 2024, 6:35 AM IST
ರಾಮನಗರ: ಜಿಲ್ಲೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವ ಸರಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್-ಬಿಜೆಪಿ ನಾಯಕರು ಜಂಟಿಯಾಗಿ ಹೋರಾಟ ನಡೆಸುವ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜತೆ ಚರ್ಚಿಸಿ ಹೋರಾಟದ ರೂಪುರೇಷೆ ರೂಪಿಸಲಾಗುವುದು ಎಂದು ಯುವ ಘಟಕದ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ಪ್ರಭು ಶ್ರೀರಾಮನ ದೇವರ ಪಾದಸ್ಪರ್ಶವಾಗಿರುವ ಪುಣ್ಯ ಕ್ಷೇತ್ರ. ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ರಾಜಕೀಯ ಉದ್ದೇಶಕ್ಕಾಗಿ ಜಿಲ್ಲೆ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದರು. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಿರಲಿಲ್ಲ. ಇದೀಗ ಯಾಕೆ ಬದಲಾವಣೆ ಮಾಡಲು ಮುಂದಾಗಿದ್ದಾರೆ ಎಂದು ಪ್ರಶ್ನಿಸಿದರು.
ಮಿತ್ರರ ಪಾದಯಾತ್ರೆ ಹತ್ತಿಕ್ಕಲು ಆಗಲ್ಲ: ಸುರೇಶ್‌ಬಾಬು
ಸದನದಲ್ಲಿ ಮುಡಾ, ವಾಲ್ಮೀಕಿ ನಿಗಮ ಸೇರಿದಂತೆ ವಿವಿಧ ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಹೋರಾಟ ನಡೆಸಿದ್ದೇವೆ. ಆದರೆ ಸದನದಲ್ಲಿ ಈ ವಿಚಾರ ಚರ್ಚೆಗೆ ಅವಕಾಶ ಸಿಗದ ಕಾರಣ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಿದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ತಿಳಿಸಿದರು.
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು ಮತ್ತು ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿ, ಪಾದಯಾತ್ರೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ಸಭೆ ಮಾಡ್ತಿದ್ದೇವೆ. ರಾಮನಗರ, ಮಂಡ್ಯ, ಮೈಸೂರು ಭಾಗಗಳಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಕಾರಣಕ್ಕೂ ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಹೇಳಿದರು.
ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಹಗರಣಗಳಲ್ಲಿ ಮುಳುಗಿ ರಾಜ್ಯದ ಜನಜೀವನದ ಮೇಲೆ ಬೆಲೆ ಏರಿಕೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ, ಜೆಡಿಎಸ್-ಬಿಜೆಪಿ ಹೋರಾಟ ನಡೆಸಲಿದ್ದು, ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಎಂದರು.
ತಣಿಯದ ಶಾಸಕ ಜಿಟಿಡಿ ಮುನಿಸು: ಮುಖಂಡರ ಸಭೆಗೆ ಗೈರು
ಮೈಸೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾದ ಬಳಿಕ ಪಕ್ಷದ ಜತೆ ತುಸು ಮುನಿಸಿಕೊಂಡಂತೆ ಇರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೆ ಗೈರು ಹಾಜರಾಗಿದ್ದರು.
ಸ್ಥಳೀಯ ಮಾಜಿ ಶಾಸಕರು, ಹಾಲಿ ಶಾಸಕರು, ಮುಖಂಡರು ಅಲ್ಲದೆ ಜಿಟಿಡಿ ಅವರ ಪುತ್ರ ಶಾಸಕ ಜಿ.ಡಿ.ಹರೀಶ್‌ಗೌಡ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಜಿಟಿಡಿ ಅವರು ಭಾಗವಹಿಸದೇ ಇರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ. ಭಾನುವಾರ ಕೇಂದ್ರದ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಮುಖಂಡರ ಸಭೆ ನಡೆಸುತ್ತಿದ್ದಾರೆ. ಅದರಲ್ಲಿ ಜಿಟಿಡಿ ಭಾಗವಹಿಸುವರೇ ಎನ್ನುವುದನ್ನು ಕಾದುನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.