Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
ಮಕ್ಕಳಿಗೆ ಊಟದಲ್ಲಿ ವಿಷ ಬೆರೆಸಿ ಹತ್ಯೆ, ಡೆತ್‌ನೋಟ್ ಬರೆದಿಟ್ಟು ದಂಪತಿ ನೇಣುಬಿಗಿದು ಆತ್ಮಹ*ತ್ಯೆ
Team Udayavani, Jan 7, 2025, 7:50 AM IST
ಬೆಂಗಳೂರು: ಕೌಟುಂಬಿಕ ಹಾಗೂ ಹಣಕಾಸಿನ ವಿಚಾರಕ್ಕೆ ತಮ್ಮ ಇಬ್ಬರು ಮಕ್ಕಳಿಗೆ ವಿಷವುಣಿಸಿ ಹತ್ಯೆಗೈದು ಬಳಿಕ ಡೆತ್‌ನೋಟ್ ಬರೆದಿಟ್ಟು ಟೆಕಿ ದಂಪತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸದಾಶಿವನಗರದಲ್ಲಿ ಸೋಮವಾರ ಸಂಭವಿಸಿದೆ.
ಉತ್ತರಪ್ರದೇಶ ಅಲಹಬಾದ್ ಮೂಲದ ಅನೂಪ್ (38) ಮತ್ತು ಪತ್ನಿ ರಾಖಿ (35) ತಮ್ಮ ಮಕ್ಕಳಾದ ಪುತ್ರಿ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಅವರಿಗೆ ಊಟದಲ್ಲಿ ವಿಷ ಹಾಕಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮುಂಜಾನೆ ಮನೆಕೆಲಸದಾಕೆ ಮನೆ ಬಳಿ ಬಂದಾಗ ದುರ್ಘಟನೆ ಬೆಳಕಿಗೆ ಬಂದಿದೆ. ಅನೂಪ್ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ಅನೂಪ್ ಮತ್ತು ರಾಖಿ ಪ್ರೀತಿಸಿ ಮದುವೆಯಾಗಿದ್ದು, ಕುಟುಂಬ ಸದಸ್ಯರಿಂದ ದೂರವಾಗಿ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅನೂಪ್ ಸಾಫ್ಟ್ವೇರ್ ಕಂಪೆನಿಯಲ್ಲಿ ಕನ್ಸಲ್ಟೆಂಟ್ ಅಗಿ, ಪತ್ನಿ ಕೂಡ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರು ವರ್ಕ್‌ಫ್ರಮ್ ಹೋಮ್‌ನಲ್ಲಿ ಇದ್ದರು. ಒಂದೂವರೆ ತಿಂಗಳ ಹಿಂದಷ್ಟೇ ದಂಪತಿ ಕೆಲಸ ಬಿಟ್ಟಿದ್ದು, ಪುಣೆಗೆ ತೆರಳಲು ತೀರ್ಮಾನಿಸಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಕುಟುಂಬದವರು ದೂರವಾಗಿದ್ದಕ್ಕೆ ನಮಗೆ ಬೇಸರ ಆಗಿದೆ: ಡೆತ್‌ನೋಟ್
ಅನೂಪ್ ಆತ್ಮಹತ್ಯೆಗೂ ಮೊದಲು ಒಂದು ಪುಟ ಡೆತ್‌ನೋಟ್ ಬರೆದು ಸಹೋದರ ಅಮಿತ್‌ಗೆ ಇ-ಮೇಲ್ ಮೂಲಕ ಕಳುಹಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ತಂದೆ ಸೇರಿ ಇಡೀ ಕುಟುಂಬ ಸದಸ್ಯರು ತನ್ನೊಂದಿಗೆ ಮಾತನಾಡುತ್ತಿಲ್ಲ. ಎಲ್ಲರೂ ದೂರವಾಗಿದ್ದೀರಿ. ಇದರಿಂದ ಬೇಸರವಾಗಿದೆ. ಇನ್ನು ಒಂದೂವರೆ ವರ್ಷದ ಹಿಂದೆ ರಾಕೇಶ್ ಎಂಬಾತ ಲಕ್ಷಾಂತರ ರೂ. ಪಡೆದು, ವಾಪಸ್ ಕೊಡದೆ ವಂಚಿಸಿದ್ದಾನೆ. ನನ್ನ ಮೊದಲನೆ ಮಗಳಿಗೆ ಬುದ್ಧಿಮಾಂಧ್ಯವಿದೆ. ಅದರಿಂದ ನಾವು ಖನ್ನತೆಗೊಳಗಾಗಿದ್ದೇವೆ. 2ನೇ ಮಗು ಆದರೂ ನೀವುಗಳು ಯಾರು ನನ್ನನ್ನು ಮಾತನಾಡಿಸುತ್ತಿಲ್ಲ. ಹೀಗಾಗಿ ಈ ನಿರ್ಧಾರ ಮಾಡುತ್ತಿದ್ದೇವೆ ಎಂದು ಉಲ್ಲೇ ಖಿಸಿದ್ದಾರೆ.
ಮನೆಗೆಲಸಕ್ಕೆ ಮೂವರ ನೇಮಕ
ಅನೂಪ್ ದಂಪತಿ ಮನೆಯ ಕೆಲಸಕ್ಕೆಂದೇ ಮೂವರನ್ನು ನೇಮಿಸಿಕೊಂಡಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ಮನೆಕೆಲಸದಾಕೆ ಮನೆಗೆ ಬಂದಾಗ ದುರ್ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.