Bengaluru: ಸಿನಿಮೀಯ ರೀತಿ ಕಳ್ಳನ ಸೆರೆ ಹಿಡಿದ ಕಾನ್‌ಸ್ಟೆಬಲ್‌!

ತುಮಕೂರು ಕೊರಟಗೆರೆ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಳ್ಳತನ ಮಾಡಿದ್ದ, 40ಕ್ಕೂ ಹೆಚ್ಚು ಕೇಸ್‌ಗಳಲ್ಲಿ ಭಾಗಿಯಾಗಿದ್ದ ಆರೋಪಿ ಹೊಟ್ಟೆ ಮಂಜ

Team Udayavani, Aug 9, 2024, 12:39 AM IST

police

ಬೆಂಗಳೂರು: ವಂಚನೆ ಹಾಗೂ ಕಳ್ಳತನ ಸೇರಿ 40ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೋಸ್ಟ್‌ ವಾಂಟೆಡ್‌ ವಂಚಕನನ್ನು ಕಾನ್‌ಸ್ಟೆಬಲ್‌ವೊಬ್ಬರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ನಗರದ ಸಂಚಾರ ದಟ್ಟಣೆ ನಡುವೆ ಬಂಧಿಸಿದ್ದಾರೆ.

ಹೆಸರುಘಟ್ಟ ನಿವಾಸಿ ಮಂಜೇಶ್‌ ಅಲಿಯಾಸ್‌ ಹೊಟ್ಟೆ ಮಂಜ ಬಂಧಿತ. ಕೊರಟಗೆರೆ ಠಾಣೆಯ ಕಾನ್‌ಸ್ಟೆಬಲ್‌ ದೊಡ್ಡಲಿಂಗಯ್ಯ ಬಂಧಿಸಿದವರು. ಬಂಧಿತನಿಂದ 10 ಸಾವಿರ ರೂ. ನಗದು ಹಾಗೂ 6.75 ಲಕ್ಷ ಮೌಲ್ಯದ 135 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಮಂಜೇಶ್‌ ವಿರುದ್ಧ ಕೊರಟಗೆರೆ ಠಾಣೆ ಸೇರಿ ದಕ್ಷಿಣ ಕರ್ನಾಟಕದ ಹತ್ತಾರು ಪೊಲೀಸ್‌ ಠಾಣೆಗಳಲ್ಲಿ 40ಕ್ಕೂ ಹೆಚ್ಚು ಕಳ್ಳತನ ಹಾಗೂ ವಂಚನೆ ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಕೊರಟಗೆರೆಯ ಮನೆಯಲ್ಲಿ ಕಳ್ಳತನ ನಡೆದಿತ್ತು. ಸ್ಥಳದ ಸಿಸಿ ಕೆಮರಾ ಪರಿಶೀಲಿಸಿದಾಗ ಮಂಜೇಶ್‌ ಬಗ್ಗೆ ಮಾಹಿತಿ ಸಿಕ್ಕಿತ್ತು. ಆತನ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತ ಮನೆಯಲ್ಲಿ ಇರುವುದಿಲ್ಲ. ಫೋನ್‌ ಬಳಸುವುದಿಲ್ಲ. ಹೊಟೇಲ್‌ಗ‌ಳಲ್ಲಿ ಊಟ ಮಾಡದೆ, ಪಾರ್ಸೆಲ್‌ ಕೊಂಡೊಯ್ಯುತ್ತಿದ್ದ. ಲಾಡ್ಜ್ಗಳಲ್ಲಿ ವಾಸವಾಗಿರುತ್ತಿದ್ದ ಎಂಬ ವಿಚಾರ ತಿಳಿದುಬಂದಿತ್ತು.

ಹೀಗಾಗಿ ಆತನ ಪತ್ತೆಗಾಗಿ ನೂರಾರು ಸಿಸಿ ಕೆಮರಾ ಪರಿಶೀಲಿಸಿದಾಗ ಆರೋಪಿ ಬೆಂಗಳೂರಿಗೆ ಬಂದಿರುವುದು ಪತ್ತೆಯಾಗಿತ್ತು. ಬಳಿಕ ಕಾನ್‌ಸ್ಟೆಬಲ್‌ ದೊಡ್ಡ ಲಿಂಗಯ್ಯ ಮತ್ತು ಇತರ ಸಿಬಂದಿ ಬೆಂಗಳೂರಿಗೆ ಬಂದು ನಗರ ಪೊಲೀಸರ ಸಹಾಯ ಪಡೆದು ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ, ಸದಾಶಿವನಗರ ವ್ಯಾಪ್ತಿಯಲ್ಲಿ ನಿತ್ಯ ಸಂಚಾರ ಮಾಡುತ್ತಿರುತ್ತಾನೆ ಎಂಬ ಮಾಹಿತಿ ಕಲೆಹಾಕಿದ್ದರು.

1 ತಿಂಗಳಿನಿಂದ ಕಾರ್ಯಾಚರಣೆ
ಆರೋಪಿಗಾಗಿ 1 ತಿಂಗಳ ಕಾರ್ಯಾಚರಣೆ ನಡೆಯುತ್ತಿತ್ತು. ಆದರೆ ಕಳೆದ 1 ವಾರದಲ್ಲಿ ಆತನ ಚಲನವಲನಗಳ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆ. 6ರಂದು ಬೆಳಗ್ಗೆ 10 ಗಂಟೆಗೆ ಸದಾಶಿವನಗರದ ಟ್ರಾಫಿಕ್‌ ಸಿಗ್ನಲ್‌ ಬಳಿ ಮಫ್ತಿಯಲ್ಲಿ ದೊಡ್ಡಲಿಂಗಯ್ಯ ಕಾಯುತ್ತಿದ್ದರು. ಮಂಜ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಂತೆ ಆತನನ್ನು ವಾಹನ ಸಮೇತ ತಡೆಯಲು ಮುಂದಾದರು.

ಆರೋಪಿ ಸ್ಕೂಟರ್‌ ಸಮೇತ ತಪ್ಪಿಸಿಕೊಳ್ಳಲು ಮುಂದಾದನು. ಆದರೂ ಬಿಡದ ಕಾನ್‌ಸ್ಟೆಬಲ್‌ ಸ್ಕೂಟರನ್ನು ಹಿಡಿದುಕೊಂಡಾಗ ಅವರನ್ನೇ ಆರೋಪಿ ಸುಮಾರು 50 ಮೀಟರ್‌ ದೂರ ಎಳೆದೊಯ್ದನು. ಅಷ್ಟರಲ್ಲಿ ಕಾನ್‌ಸ್ಟೆಬಲ್‌ ಆರೋಪಿಯ ಕಾಲನ್ನು ಬಿಗಿಯಾಗಿ ಹಿಡಿದುಕೊಂಡರು. ಅನಂತರ ಅಲ್ಲೇ ಇದ್ದ ಟ್ರಾಫಿಕ್‌ ಮಹಿಳಾ ಎಎಸ್‌ಐ, ಹೋಮ್‌ಗಾರ್ಡ್‌ ಹಾಗೂ ಸ್ಥಳೀಯರು ದೊಡ್ಡಲಿಂಗಯ್ಯಗೆ ಸಹಾಯ ಮಾಡಿದರು. ಸಾರ್ವಜನಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಾರ್ವಜನಿಕರು ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ದೊಡ್ಡಲಿಂಗಯ್ಯ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1 ತಿಂಗಳಿನಿಂದ ಕಾಯುತ್ತಿದ್ದೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನ್‌ಸ್ಟೆಬಲ್‌ ದೊಡ್ಡಲಿಂಗಯ್ಯ, ಈ ಅವಕಾಶವನ್ನು ನಾನು ಬಿಟ್ಟಿದ್ದರೆ ಮತ್ತೆ ಯಾವುತ್ತು ಆತನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. 1 ತಿಂಗಳಿಂದ ಮನೆ ಬಿಟ್ಟು ಬಂದು ಆತನಿಗಾಗಿ ಬೆಂಗಳೂರಿನಲ್ಲಿ ಶೋಧ ನಡೆಸುತ್ತಿದ್ದೇವೆ. ಆತ ಮಾಸ್ಕ್ ಹಾಗೂ ಹೆಲ್ಮೆಟ್‌ ಧರಿಸಿ ಓಡಾಡುತ್ತಿದ್ದ. ಪತ್ತೆ ಕಾರ್ಯ ಕಷ್ಟವಾಗಿತ್ತು. ಆದರೂ ಬಂಧಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.