![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 18, 2023, 6:45 AM IST
ಪ್ರೊಫೆಸರ್ ನರಸಿಂಹಪ್ಪ, ನೀರಾವರಿ ತಜ್ಞ
ಭದ್ರಾ ಮೇಲ್ದಂಡೆ ಯೋಜನೆಯಲ್ಲಿನ ಆಂತರಿಕ ಸಮಸ್ಯೆಗಳನ್ನು ಸುಲಲಿತವಾಗಿ ಸರ್ಕಾರ ಪರಿಹರಿಸಬಹುದೆಂಬ ವಿಶ್ವಾಸವನ್ನಿಟ್ಟುಕೊಂಡು ಈ ಬಜೆಟ್ ಉತ್ತಮವಾಗಿದೆ ಎಂದು ನಾನು ಬಣ್ಣಿಸುತ್ತೇನೆ.
ತುಂಗಾ ನದಿಯಿಂದ ಭದ್ರಾ ಯೋಜನೆಗೆ ನೀರು ಹರಿಸುವುದು ಅತಿ ಮುಖ್ಯ. ತುಂಗಾ ನದಿಯಿಂದ ನೀರು ಹರಿಸದೇ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸುತ್ತೇವೆಂದು ಸರ್ಕಾರ ಭಾವಿಸಿದರೆ ಈ ಯೋಜನೆ ವಿಫಲಗೊಳ್ಳುತ್ತದೆ. ಆದ್ದರಿಂದ ತುಂಗಾ ನದಿಯಿಂದ ಭದ್ರಾ ನದಿಗೆ ನೀರು ಹರಿಸಲು ಸರ್ಕಾರ ಯಾವ ರೀತಿ ಆದ್ಯತೆ ನೀಡುತ್ತದೆ ಎಂಬುದು ಗಮನಾರ್ಹ.
ಉಳಿದಂತೆ ಈ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ನೀಡುವುದಾಗಿ ಪ್ರಕಟಿಸಿದ್ದು ರಾಜ್ಯ ಸರ್ಕಾರ ಸುಮಾರು 2,000 ಕೋಟಿ ರೂ. ಖರ್ಚು ಮಾಡಬಹುದೆಂಬ ನಿರೀಕ್ಷೆಯಿದೆ. ಯೋಜನೆಗೆ ವೇಗ ನೀಡಲು ಈ ವರ್ಷ ಇಷ್ಟು ಹಣ ಸಾಕಾಗಬಹುದು.
ಉಳಿದಂತೆ ಕಳಸಾ-ಬಂಡೂರಿ ಯೋಜನೆಗೆ ಒಂದು ಸಾವಿರ ಕೋಟಿ ರೂ. ಮೀಸಲಿಟ್ಟಿರುವ ಸರ್ಕಾರದ ಕ್ರಮವ ಸ್ವಾಗತಾರ್ಹ. ಕಳಸಾ ಬಂಡೂರಿ ನಾಲಾ ಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ನಗರ ಮತ್ತದರ ಸುತ್ತಲಿನ ಭಾಗಕ್ಕೆ ಕುಡಿಯುವ ನೀರು ನೀಡುವುದರ ಜತೆಗೆ ಗದಗ ಜಿಲ್ಲೆಯ ಭಾಗಕ್ಕೂ ಯೋಜನೆ ವಿಸ್ತರಿಸಲು ಈ ಮೊತ್ತವನ್ನು ವಿನಿಯೋಗಿಸಬೇಕು.
ಇನ್ನು ಸರ್ಕಾರ ಸುಮಾರು ಒಂದೂವರೆ ಲಕ್ಷ ಎಕರೆ ಪ್ರದೇಶಕ್ಕೆ ನೀರುಣಿಸುವ ಯೋಜನೆ ಹೊಂದಿರುವುದಾಗಿ ಹೇಳಿದೆ. ಆದರೆ ಸರ್ಕಾರ ತನ್ನ ಯೋಜನೆಯನ್ನು ಸಮರ್ಪಕವಾಗಿ ಮತ್ತು ತ್ವರಿತವಾಗಿ ಜಾರಿಗೊಳಿಸಿದರೆ ಈ ವರ್ಷದಲ್ಲೇ ಸುಮಾರು ಆರು ಲಕ್ಷ ಎಕರೆ ಪ್ರದೇಶವನ್ನು ನೀರಾವರಿ ವ್ಯಾಪ್ತಿಗೆ ತರಬಹುದು. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಇಚ್ಚಾಶಕ್ತಿ ಪ್ರದರ್ಶಿಸಬೇಕು.
ಉಳಿದಂತೆ ಕೆ.ಸಿ.ವ್ಯಾಲಿ ನೀರಿನ ಶುದ್ಧೀಕರಣ, ಎತ್ತಿನಹೊಳೆ ಯೋಜನೆಯ ಬಗ್ಗೆಯೂ ಉಲ್ಲೇಖವಿದೆ. ಹನಿ ನೀರಾವರಿಗೆ ಒತ್ತು ನೀಡಲಾಗಿದೆ. ಒಟ್ಟಾರೆಯಾಗಿ ಇದೊಂದು ಜನಸ್ನೇಹಿ ಬಜೆಟ್.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಜೆಟ್‌ನ ಮೂಲಕ ಉತ್ಪಾದನೆ ಹೆಚ್ಚಿಸುವ, ಸಂಪತ್ತು ಸೃಷ್ಟಿಸುವ, ಉದ್ಯೋಗ ಸೃಜಿಸುವ ಪ್ರಯತ್ನ ನಡೆಸಿದ್ದಾರೆ. ಮೀನುಗಾರರು, ನೇಕಾರರು ಮತ್ತು ಕರಕುಶಲ ಕರ್ಮಿಗಳಿಗೆ ಒತ್ತು ನೀಡಿದ್ದಾರೆ. ಆದರೆ ಗ್ರಾಮೀಣ, ಸಣ್ಣ ಮತ್ತು ದೊಡ್ಡ ಉದ್ದಿಮೆಗಳತ್ತ ಹೆಚ್ಚು ಗಮನಹರಿಸಿಲ್ಲ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.