ಭದ್ರಾ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ಯುವಕರ ಸಾವು, ಓರ್ವನ ರಕ್ಷಣೆ
Team Udayavani, Oct 3, 2020, 6:32 PM IST
ಶಿವಮೊಗ್ಗ : ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನ ಸುಳಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿ ಓರ್ವನನ್ನು ರಕ್ಷಿಸಿದ ಘಟನೆ ಭದ್ರಾವತಿಯ ದೊಡ್ಡ ಗೋಪೇನಹಳ್ಳಿ ಬಳಿಯ ಗೋಂಧಿ ಚಾನಲ್ ಆಂಜನೇಯ ಬಂಡೆ ಬಳಿ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಭದ್ರಾವತಿ ಜನ್ನಾಪುರದ ರಾಜೇಶ್ (38) ಹಾಗೂ ಮನೋಜ್ (17) ಮೃತಪಟ್ಟವರಾಗಿದ್ದಾರೆ.
ಘಟನೆ ವಿವರ ; ಒಟ್ಟು 9 ಯುವಕರ ತಂಡ ಸೈಕಲಿನಲ್ಲಿ ಭದ್ರಾ ನದಿಯ ಬಳಿ ಈಜಲು ತೆರಳಿದ್ದು ಎಲ್ಲರೂ ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಗಾತ್ರದ ಸುಳಿಯಿದ್ದು ಒಂಬತ್ತು ಯುವಕರಲ್ಲಿ ಮನೋಜ್ ಎಂಬಾತ ನದಿಯ ಸುಳಿಗೆ ಸಿಲುಕಿ ಮುಳುಗಲಾರಂಭಿಸಿದ್ದಾನೆ. ಈ ವೇಳೆ ರಾಜೇಶ್ ಎನ್ನುವವರು ರಕ್ಷಣೆಗೆ ಧಾವಿಸಿ, ಬಟ್ಟೆ ಕಟ್ಟಿ ಎಳೆಯಲು ಪ್ರಯತ್ನಿಸಿದ್ದಾರೆ ಆದರೆ, ಅವರೂ ಸಹ ನೀರಿನ ಸುಳಿಗೆ ಸಿಲುಕಿ ಬಲಿಯಾಗಿದ್ದಾರೆ.
ಇದೇ ವೇಳೆ ನೀರಿನಲ್ಲಿ ಸಿಲುಕಿದ್ದ 13 ವರ್ಷದ ಕಾರ್ತಿಕ್ ಎನ್ನುವ ಬಾಲಕನನ್ನು ಇತರರು ಸೇರಿ ರಕ್ಷಣೆ ಮಾಡಿದ್ದಾರೆ.
ಭದ್ರಾವತಿ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಬೀದಿ ಬೀದಿಯಲ್ಲಿ ಬ್ಯಾಗ್ ಮಾರುತ್ತಿದ್ದ ವ್ಯಕ್ತಿ ಇಂದು 250 ಕೋಟಿ ರೂಪಾಯಿ ಕಂಪನಿ ಒಡೆಯ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.