ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ : ಬೈಕ್ ಸವಾರ ಸಾವು
Team Udayavani, Jan 30, 2021, 6:51 PM IST
ಮಂಡ್ಯ: ದ್ವಿಚಕ್ರ ವಾಹನ ಹಾಗೂ ಸರಕು ಸಾಗಣೆ ಮಿನಿ ಆಟೋಗಳ ನಡುವೆ ಸಂಭವಿಸಿದ ರಸ್ತೆ ಅಫಘಾತದಲ್ಲಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಾಧುಗೋನಹಳ್ಳಿ ಸಮೀಪದ ಕೆಜೆಬಿ ಶಾಲೆಯ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗೇಗೌಡ ಪುತ್ರ ಮನು(30) ಮೃತ ಯುವಕ. ಈತ ಪಟ್ಟಣದಿಂದ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ಆಟೋಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಿಂದ ತೀವ್ರ ರಕ್ತಸ್ರಾವದಿಂದ ಮನು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ವೃತ್ತ ನಿರೀಕ್ಷಕ ಎಂ.ಕೆ.ದೀಪಕ್, ಪಿಎಸ್‌ಐ ಬ್ಯಾಟರಾಯಗೌಡ, ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಆಟೋ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಸಾಲು, ಸಾಲು ಸಾವು! ನೋವಿನ ಬದುಕಿನ ನಡುವೆ ಕನಸೆಂಬ ಕುದುರೆಯೇರಿ ಯಶಸ್ಸು ಕಂಡ “ಬಿರದಾರ”
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.