Birth Anniversary: ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ "ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ'ಯಾಗಿ ಮರುನಾಮಕರಣ, ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ನಿರ್ಬಂಧ

Team Udayavani, Aug 20, 2024, 10:15 PM IST

CM-Arasu

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಾ. ಡಿ.ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇವರಾಜ ಅರಸು ಸಾಮಾಜಿಕ ನ್ಯಾಯದ ಪರ ಇದ್ದವರು. ಬಡವರು, ದಲಿತರು, ರೈತರು, ಮಹಿಳೆಯರ ಪರ ಇದ್ದವರು. ಅವರ ಕೊಡುಗೆ ಅಪಾರವಾದದ್ದು. ಹೀಗಾಗಿ ಅವರಿಗೆ ಮರಣೋತ್ತರವಾಗಿಯಾದರೂ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದರು. ಅಷ್ಟೇ ಅಲ್ಲದೆ, ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಗೆ “ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ’ ಎಂದು ಮರುನಾಮಕರಣವನ್ನೂ ಮಾಡುವುದಾಗಿ ಪ್ರಕಟಿಸಿದರು.

ನ.1ಕ್ಕೆ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ:  
1973ರಲ್ಲಿ ದೇವರಾಜ ಅರಸು ಅವರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ನವೆಂಬರ್‌ 1ರಂದು ಅನಾವರಣಗೊಳಿಸಲಾಗುವುದು. ಭುವನೇಶ್ವರಿ ಪ್ರತಿಮೆ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ವೇದಿಕೆಯಲ್ಲಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರಿಗೆ ಸೂಚಿಸಿದರು.

ಕೃಷಿ ಭೂಮಿ ಖರೀದಿಗೆ ನಿರ್ಬಂಧ:
ರೈತರಲ್ಲದವರು ಕೃಷಿ ಭೂಮಿ ಖರೀದಿ ಮಾಡುವುದಕ್ಕೆ ನಿರ್ಬಂಧ ವಿಧಿಸುವುದಾಗಿ ಘೋಷಿಸಿರುವ ಸಿದ್ದರಾಮಯ್ಯ, ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಆದರೆ ಇವತ್ತು ಉಳುಮೆ ಮಾಡದವನೂ ಕೃಷಿ ಭೂಮಿ ಪಡೆಯುತ್ತಾನೆ.

ಹಿಂದಿನ ಬಿಜೆಪಿ ಸರ್ಕಾರ ಈ ಆಶಯಕ್ಕೆ ಚ್ಯುತಿ ತಂದು ಕರ್ನಾಟಕ ಭೂ ಸುಧಾರಣೆ ಕಾಯ್ದೆಯ ಸೆಕ್ಷನ್‌ 79(ಎ) ಮತ್ತು 79(ಬಿ)ಗೆ ತಿದ್ದುಪಡಿ ತಂದು ಯಾರು ಬೇಕಾದರೂ ಜಮೀನು ಖರೀದಿಸಲು ಅವಕಾಶ ನೀಡಿದೆ. ನಮಗೆ ವಿಧಾನ ಪರಿಷತ್ತಿನಲ್ಲಿ ಬಹುಮತ ಬರುತ್ತಿದ್ದಂತೆಯೇ ಬಿಜೆಪಿ ಮಾಡಿದ ತಿದ್ದುಪಡಿಯನ್ನು ರದ್ದುಪಡಿಸುತ್ತೇವೆ ಎಂದು ಹೇಳಿದರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾಮಾಜಿಕ ನ್ಯಾಯದಡಿ ಕೆಲಸ; ನನ್ನ ವಿರುದ್ಧ ಹುನ್ನಾರ
ನಾನು ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಬಡವರ ಪರ, ಸಾಮಾಜಿಕ ನ್ಯಾಯದ ಪರವಾಗಿ ಇದ್ದೇನೆ ಎಂದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನ ಹೇಗಾದ್ರು ಮಾಡಿ ಮುಗಿಸಬೇಕು ಎಂದು ಹುನ್ನಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಯಾವ ತಪ್ಪೂ ಮಾಡಿದಿದ್ದರೂ ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ. ಅದಕ್ಕೆ ಕೆಲವರು ತಮಟೆ ಹೊಡೆಯುತ್ತಿದ್ದಾರೆ. ಇದು ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರ. ಇಂತಹ ಷಡ್ಯಂತ್ರಗಳನ್ನ ನಾವೆಲ್ಲ ಒಂದಾಗಿ ವಿರೋಧ ಮಾಡಬೇಕು. ಇಲ್ಲದೆ ಹೋದರೆ ನ್ಯಾಯ ಸಿಗುವುದಿಲ್ಲ ಎಂದು ಹೇಳಿದರು.

ಕಾರ್ಮಿಕ ಮಂಡಳಿಗೆ 5 ಲಕ್ಷ ರೂ. ವಾಪಸ್‌: ಎಸ್‌.ಕೆ.ಕಾಂತಾ
2024-25ರ ಸಾಲಿನ ದೇವರಾಜ ಅರಸು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಎಸ್‌.ಕೆ.ಕಾಂತಾ, ನಾನು ಎಲ್ಲೋ ಮೂಲೆಯಲ್ಲಿದ್ದವನನ್ನು ಕರೆದು ಈ ಕಾಣಿಕೆಯನ್ನು ನೀಡಿದ್ದಾರೆ. ನಾನು ಇನ್ನು ಬಹಳಷ್ಟು ಕೆಲಸ ಮಾಡಬೇಕಿದೆ ಎಂದು ಹೇಳಿ ಪ್ರಶಸ್ತಿಯ ಜತೆಗೆ ನೀಡಲಾಗಿದ್ದ ಐದು ಲಕ್ಷ ರೂ. ನಗದನ್ನು ಕಾರ್ಮಿಕ ಮಂಡಳಿಗೆ ನೀಡುವುದಾಗಿ ಪ್ರಕಟಿಸಿದರು.

“ಹಿಂದುಳಿದವರ ಪರ ಮಾತನಾಡುವ ಬಹಳಷ್ಟು ಮಂದಿಗೆ ಹಿಂದುಳಿದವರು ಅಧಿಕಾರದಲ್ಲಿರುವುದು ಇಷ್ಟವಾಗುವುದಿಲ್ಲ. ಹಿಂದುಳಿದವರನ್ನು ಅಧಿಕಾರದಿಂದ ಕೆಳಗಿಳಿಸಲು ದೆಹಲಿಯಿಂದ ಹಿಡಿದು ರಾಜಭವನದವರೆಗೆ ಪಿತೂರಿ ನಡೆಯುತ್ತಿದೆ. ಇಂತಹ ಹುನ್ನಾರಗಳ ವಿರುದ್ದ ಹೋರಾಟ ನಡೆಸುವುದು ಅನಿವಾರ್ಯ.” -ಡಾ. ಎಚ್‌.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.