ವರ್ಚುವಲ್ ಕರೆನ್ಸಿ ವಿರುದ್ಧ ಕಠಿಣ ನಿಲುವು ಇಲ್ಲ :ಮಧ್ಯಮ ಪ್ರಮಾಣದ ನಿಲುವು ಹೊಂದಲು ಚಿಂತನೆ
ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ?
Team Udayavani, Nov 8, 2021, 9:15 PM IST
ನವದೆಹಲಿ : ವರ್ಚುವಲ್ ಕರೆನ್ಸಿ ಎಂದು ಕರೆಯಿಸಿಕೊಳ್ಳುವ ಬಿಟ್ ಕಾಯಿನ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಲುವು ತಾಳುವುದು ಅಸಂಭವ ಎಂದು ಹೇಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಶವಾಸಿಗಳು ಬಿಟ್‌ಕಾಯಿನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುತ್ತಿರುವುದರಿಂದ ಒಂದು ರೀತಿಯ ಸಮತೋಲಿತ ನಿಲುವು ಅನುಸರಿಸಲು ಯೋಚಿಸುತ್ತಿದೆ ಸರ್ಕಾರ. ಬಿಟ್ ಕಾಯಿನ್ ಕ್ಷೇತ್ರದ ನಿಯಂತ್ರಣಕ್ಕೆ ಕರಡು ವಿಧೇಯಕ ಸಿದ್ಧಗೊಂಡಿದ್ದು, ಅದನ್ನು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವುದು ಕೇಂದ್ರ ಇರಾದೆಯಾಗಿದೆ.
ಡಿಜಿಟಲ್ ಕರೆನ್ಸಿಗೆ ಯಾವ ರೀತಿ ತೆರಿಗೆ ವಿಧಿಸಬೇಕು, ಅದರ ಮೇಲೆ ನಿಯಂತ್ರಣ ಅಥವಾ ಕಠಿಣ ನಿಲುವು ತಾಳುವುದರಿಂದ ಪ್ರತಿಕೂಲ ಪರಿಣಾಮ ಏನು, ಇತರ ದೇಶಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಈಗಾಗಲೇ ಒಂದು ಸುತ್ತಿನ ಸಮಾಲೋಚನೆಯನ್ನು ಕೇಂದ್ರ ವಿತ್ತ ಸಚಿವಾಲಯ ಪೂರ್ತಿಗೊಳಿಸಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಆರ್‌ಬಿಐ ಮತ್ತು ಸಂಬಂಧಿತ ಇಲಾಖೆಗಳ ಜತೆಗೆ ಸರ್ಕಾರ ಶೀಘ್ರದಲ್ಲಿಯೇ 2ನೇ ಸುತ್ತಿನ ಸಮಾಲೋಚನೆ ನಡೆಸಲಿದೆ.
ಇದನ್ನೂ ಓದಿ : ವಿಜಯಪುರ : ಜಗತ್ತಿನ ಅದ್ಭುತ ಗೋಲಗುಮ್ಮಟ ಕಂಡು ನಿಬ್ಬೆರಗಾದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಹಿಂದೆ ಸಿದ್ಧಪಡಿಸಲಾಗಿದ್ದ ಕರಡು ವಿಧೇಯಕದಲ್ಲಿ ಬಿಟ್ ಕಾಯಿನ್‌ಗೆ ಪೂರ್ಣ ಪ್ರಮಾಣದ ನಿಷೇಧ ಹೇರುವ ಬಗ್ಗೆ ಸಲಹೆ ಮಾಡಲಾಗಿತ್ತು. ಆದರೆ, ದೇಶವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅದರ ಮೇಲೆ ಹೂಡಿಕೆ ಮಾಡುತ್ತಿರುವುದರಿಂದ ಮತ್ತು ಡಿಜಿಟಲ್ ಕರೆನ್ಸಿ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಬದಲಾವಣೆ ಲಕ್ಷಿಸಿಕೊಂಡು, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕಾನೂನು ರೂಪಿಸಲಾಗುತ್ತದೆ. ಪರಾಮರ್ಶೆ ಪೂರ್ತಿಗೊಂಡ ನಂತರ ಕರಡು ವಿಧೇಯಕವನ್ನು ಕೇಂದ್ರ ಸಂಪುಟಕ್ಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖೀಸಿ ” ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.