Congress ಸರ್ಕಾರ ಬೀಳಿಸುವ ಯತ್ನ ಬಿಜೆಪಿ ಮಾಡಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್
ಸಿಎಂ ಯಾರಾಗಬೇಕೆಂದು ಕಾಂಗ್ರೆಸ್‌ನಲ್ಲೇ ಸ್ಪರ್ಧೆ
Team Udayavani, Aug 25, 2024, 3:16 AM IST
ಬೆಂಗಳೂರು: ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಆವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕೆಂದು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು. ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು. ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು. ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು.
ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾಲರ ಮೇಲೆ ಹೇರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.